PSL ನಿಂದ RCB ವೇಗಿ ಔಟ್: ಐಪಿಎಲ್​ಗೆ ಡೌಟ್..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವೇಗಿ ರೀಸ್ ಟೋಪ್ಲಿ ಹೊರಗುಳಿಯುವ ಸಾಧ್ಯತೆಯಿದೆ. ಏಕೆಂದರೆ ಲೀಗ್​ ಕ್ರಿಕೆಟ್​ನಲ್ಲಿ ಕಣಕ್ಕಿಳಿಯಲು ಟೋಪ್ಲಿಗೆ ಎನ್​ಒಸಿ ನೀಡಲು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ನಿರಾಕರಿಸಿದೆ. ಹೀಗಾಗಿ ಅವರು ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಣಕ್ಕಿಳಿಯುತ್ತಿಲ್ಲ.

TV9 Web
| Updated By: ಝಾಹಿರ್ ಯೂಸುಫ್

Updated on: Feb 12, 2024 | 3:25 PM

ಇಂಗ್ಲೆಂಡ್ ತಂಡದ ವೇಗದ ಬೌಲರ್ ರೀಸ್ ಟೋಪ್ಲಿ ಮುಂಬರುವ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹೊರಬಿದ್ದಿದ್ದಾರೆ. ಗಾಯದ ಸಮಸ್ಯೆಯ ಕಾರಣ ಟೋಪ್ಲಿಗೆ ಎನ್​ಒಸಿ ನೀಡಲು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ನಿರಾಕರಿಸಿದೆ. ಹೀಗಾಗಿ ಇಂಗ್ಲೆಂಡ್ ವೇಗಿ ಪಿಎಸ್​ಎಲ್​ನಲ್ಲಿ ಕಣಕ್ಕಿಳಿಯುತ್ತಿಲ್ಲ.

1 / 7
ಪಾಕಿಸ್ತಾನ್ ಸೂಪರ್ ಲೀಗ್​ನ 9ನೇ ಆವೃತ್ತಿಗಾಗಿ ರೀಸ್ ಟೋಪ್ಲಿಯನ್ನು ಮುಲ್ತಾನ್ ಸುಲ್ತಾನ್ ತಂಡವು ಖರೀದಿಸಿತ್ತು. ಅದರಂತೆ ಪಾಕ್ ಲೀಗ್​ನಲ್ಲಿ ಕಾಣಿಸಿಕೊಳ್ಳಲು ಟೋಪ್ಲಿ ಕೂಡ ಬಯಸಿದ್ದರು. ಆದರೆ ಸತತವಾಗಿ ಗಾಯಗೊಳ್ಳುತ್ತಿರುವ ಕಾರಣ ರೀಸ್​ ಟೋಪ್ಲಿಗೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನೀಡಲು ಇಂಗ್ಲೆಂಡ್ ಕ್ರಿಕೆಟ್​ ಬೋರ್ಡ್​ ನಿರಾಕರಿಸಿದೆ.

2 / 7
ಇದರ ಬೆನ್ನಲ್ಲೇ ಐಪಿಎಲ್​ ಆಡಲು ಟೋಪ್ಲಿಗೆ ಇಸಿಬಿ ನಿರಾಕ್ಷೇಪಣಾ ಪತ್ರ ನೀಡಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಕಳೆದ ಬಾರಿಯ ಐಪಿಎಲ್​ನಲ್ಲಿ ಟೋಪ್ಲಿ ಗಾಯಗೊಂಡಿದ್ದರು. ಹೀಗಾಗಿ ಅವರು ಅರ್ಧದಲ್ಲೇ ಟೂರ್ನಿ ತೊರೆದಿದ್ದರು. ಇದಾದ ಬಳಿಕ ಕಂಬ್ಯಾಕ್ ಮಾಡಿದರೂ ಏಕದಿನ ವಿಶ್ವಕಪ್​ನಲ್ಲಿ ಸಂಪೂರ್ಣ ಪಂದ್ಯಗಳನ್ನಾಡಿರಲಿಲ್ಲ.

3 / 7
ಇದೀಗ ಮುಂಬರುವ ಟಿ20 ವಿಶ್ವಕಪ್ ಹಿನ್ನಲೆಯಲ್ಲಿ ರೀಸ್ ಟೋಪ್ಲಿ ಫಿಟ್​ನೆಸ್ ಬಗ್ಗೆ ಎಚ್ಚರಿಕೆವಹಿಸಲು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಮುಂದಾಗಿದೆ. ಇದೇ ಕಾರಣದಿಂದಾಗಿ ಪಾಕಿಸ್ತಾನ್ ಸೂಪರ್ ಲೀಗ್ ಆಡದಂತೆ ಇಸಿಬಿ ಸೂಚಿಸಿದೆ. ಹೀಗಾಗಿ ಐಪಿಎಲ್​ನಲ್ಲಿ ಕಣಕ್ಕಿಳಿಯಲು ಅವಕಾಶ ನೀಡುತ್ತಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

4 / 7
ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಒಂದು ಪಂದ್ಯವಾಡಿದ್ದ ರೀಸ್ ಟೋಪ್ಲಿ ಕೇವಲ 2 ಓವರ್ ಎಸೆದಿದ್ದರು. ಈ ವೇಳೆ 1 ವಿಕೆಟ್ ಕಬಳಿಸುವಲ್ಲಿಯೂ ಯಶಸ್ವಿಯಾಗಿದ್ದರು. ಇದಾದ ಬಳಿಕ ಫೀಲ್ಡಿಂಗ್ ಮಾಡುವ ವೇಳೆ ಅವರ ಭುಜಕ್ಕೆ ಗಾಯವಾಗಿತ್ತು.

5 / 7
ಇದಾಗ್ಯೂ ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಆರ್​ಸಿಬಿ ಫ್ರಾಂಚೈಸಿ ಎಡಗೈ ವೇಗದ ಬೌಲರ್ ರೀಸ್ ಟೋಪ್ಲಿಯನ್ನು ತಂಡದಲ್ಲೇ ಉಳಿಸಿಕೊಂಡಿದ್ದರು. ಆದರೀಗ ಐಪಿಎಲ್ ಆರಂಭಕ್ಕೆ ತಿಂಗಳು ಮಾತ್ರ ಉಳಿದಿರುವಾಗ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಲೀಗ್​ ಕ್ರಿಕೆಟ್ ಆಡಲು ರೀಸ್ ಟೋಪ್ಲಿಗೆ ನಿರ್ಬಂಧ ಹೇರಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲೂ ಅವರು ಕಣಕ್ಕಿಳಿಯುವುದು ಅನುಮಾನ ಎನ್ನಲಾಗುತ್ತಿದೆ.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

7 / 7
Follow us
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ

ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್

ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ

ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು

ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ

29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್

ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು

ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ

ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ