Shreyanka Patil: ಕನ್ನಡತಿಯಿಂದಲೇ ಗೆದ್ದು ಬೀಗಿದ RCB
TV9 Web | Updated By: ಝಾಹಿರ್ ಯೂಸುಫ್
Updated on:
Mar 18, 2024 | 6:55 AM
WPL 2024 RCB: ವುಮೆನ್ಸ್ ಪ್ರೀಮಿಯರ್ ಲೀಗ್ನ 2ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ಸಿಬಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿ ಟ್ರೋಫಿ ಗೆದ್ದುಕೊಂಡಿದೆ.
1 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ರಾಯಲ್ಲಾಗಿಯೇ ಟ್ರೋಫಿ ಗೆದ್ದುಕೊಂಡಿದೆ. ಹೀಗೆ ಚೊಚ್ಚಲ ಬಾರಿ ಕಿರೀಟ ಮುಡಿಗೇರಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಕನ್ನಡತಿ ಶ್ರೇಯಾಂಕ ಪಾಟೀಲ್ (Shreyanka Patil) ಎಂಬುದು ವಿಶೇಷ. ಆದರೆ ಇದೇ ಶ್ರೇಯಾಂಕಾ ಆರಂಭಿಕ ಪಂದ್ಯಗಳಲ್ಲಿ ಮಿಂಚಿರಲಿಲ್ಲ.
2 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧ ಪಂದ್ಯದಲ್ಲಿ ಶ್ರೇಯಾಂಕಾ 3 ಓವರ್ಗಳಲ್ಲಿ 32 ರನ್ ನೀಡಿದ್ದರು. ಇನ್ನು ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಒಂದೇ ಓವರ್ನಲ್ಲಿ 13 ರನ್ ಬಿಟ್ಟುಕೊಟ್ಟಿದ್ದರು. ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 3 ಓವರ್ಗಳಲ್ಲಿ ನೀಡಿದ್ದು ಬರೋಬ್ಬರಿ 40 ರನ್ಗಳು. ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 2 ಓವರ್ಗಳಲ್ಲಿ 15 ರನ್ ನೀಡಿ ಒಂದು ವಿಕೆಟ್ ಮಾತ್ರ ಪಡೆದಿದ್ದರು.
3 / 5
ಹೀಗಾಗಿಯೇ ಕೆಲ ಪಂದ್ಯಗಳಿಂದ ಶ್ರೇಯಾಂಕಾ ಪಾಟೀಲ್ ಅವರನ್ನು ಕೈ ಬಿಡಲಾಗಿತ್ತು. ಆದರೆ ಮತ್ತೆ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ಪಡೆದ ಬಳಿಕ ಕನ್ನಡತಿ ಕಮಾಲ್ ಮಾಡಲಾರಂಭಿಸಿದಳು. ಅದರಲ್ಲೂ ಮುಂಬೈ ಇಂಡಿಯನ್ಸ್ ವಿರುದ್ಧ ಎಲಿಮಿನೇಟರ್ ಪಂದ್ಯದಲ್ಲಿ 4 ಓವರ್ಗಳನ್ನು ಎಸೆದ ಶ್ರೇಯಾಂಕಾ, ಕೇವಲ 16 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು.
4 / 5
ಹಾಗೆಯೇ ಫೈನಲ್ ಪಂದ್ಯದಲ್ಲಿ ಸ್ಪಿನ್ ಮೋಡಿ ಮಾಡಿದ ಶ್ರೇಯಾಂಕಾ ಪಾಟೀಲ್ 3.3 ಓವರ್ಗಳಲ್ಲಿ ಕೇವಲ 12 ರನ್ ನೀಡಿ 4 ವಿಕೆಟ್ ಉರುಳಿಸಿದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎಡೆಮುರಿ ಕಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದರು.
5 / 5
ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್ನ ಮೊದಲಾರ್ಧದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಕನ್ನಡತಿ ದ್ವಿತೀಯಾರ್ಧದಲ್ಲಿ ಕಮಾಲ್ ಮಾಡಿದ್ದರು. ಈ ಕಮಾಲ್ನೊಂದಿಗೆ 21 ವರ್ಷದ ಶ್ರೇಯಾಂಕಾ ಪಾಟೀಲ್ ಒಟ್ಟು 13 ವಿಕೆಟ್ ಉರುಳಿಸಿ ಪರ್ಪಲ್ ಕ್ಯಾಪ್ ವಿನ್ನರ್ ಆಗಿದ್ದಾರೆ. ಈ ಮೂಲಕ ಆರ್ಸಿಬಿ ತಂಡಕ್ಕೆ ಚೊಚ್ಚಲ ಟ್ರೋಫಿ ಗೆದ್ದುಕೊಡುವಲ್ಲಿ ಕನ್ನಡತಿ ಪ್ರಮುಖ ಪಾತ್ರವಹಿಸಿದ್ದಾರೆ.