WPL 2025: RCBಗೆ ಕೈಕೊಟ್ಟ ಸೋಫಿ ಡಿವೈನ್
WPL 2025: ವುಮೆನ್ಸ್ ಪ್ರೀಮಿಯರ್ ಲೀಗ್ನ ಮೂರನೇ ಆವೃತ್ತಿ ಫೆಬ್ರವರಿ 14 ರಿಂದ ಶುರುವಾಗಲಿದೆ. ವಡೋದರಾದ ಕೊಟಂಬಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಆದರೆ ಈ ಬಾರಿಯ ಟೂರ್ನಿಗೆ ಆರ್ಸಿಬಿ ಆಟಗಾರ್ತಿ ಸೋಫಿ ಡಿವೈನ್ ಅಲಭ್ಯರಾಗಲಿದ್ದಾರೆ.
Updated on: Jan 26, 2025 | 11:08 AM

ವುಮೆನ್ಸ್ ಪ್ರೀಮಿಯರ್ ಲೀಗ್ (WPL 2025) ಸೀಸನ್-3 ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತ ಎದುರಾಗಿದೆ. ಆರ್ಸಿಬಿ ತಂಡದ ಸ್ಟಾರ್ ಆಟಗಾರ್ತಿ ಸೋಫಿ ಡಿವೈನ್ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ತಿಳಿಸಿದ್ದಾರೆ.

ನ್ಯೂಝಿಲೆಂಡ್ ತಂಡದ ನಾಯಕಿ ಮತ್ತು ಆಲ್‌ರೌಂಡರ್ ಸೋಫಿ ಡಿವೈನ್ ಕೆಲ ಕಾಲ ಕ್ರಿಕೆಟ್ ಅಂಗಳದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ತನ್ನ ಯೋಗಕ್ಷೇಮಕ್ಕೆ ಆದ್ಯತೆ ನೀಡಲು ಈ ನಿರ್ಧಾರ ತೆಗೆದುಕೊಂಡಿದ್ದು, ಹೀಗಾಗಿ ಕೆಲ ಕಾಲ ಯಾವುದೇ ಸರಣಿ ಅಥವಾ ಟೂರ್ನಿ ಆಡದಿರಲು ನಿರ್ಧರಿಸಿದ್ದೇನೆ ಎಂದು ಸೋಫಿ ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್ಗೆ ತಿಳಿಸಿದ್ದಾರೆ.

ಅತ್ತ ಸೋಫಿ ಡಿವೈನ್ ಅವರ ತಾತ್ಕಾಲಿಕ ಬ್ರೇಕ್ ನಿರ್ಧಾರಕ್ಕೆ ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್ನಿಂದ ಕೂಡ ಬೆಂಬಲ ವ್ಯಕ್ತವಾಗಿದ್ದು, ಅವರಿಗೆ ಕೆಲ ಕಾಲ ವಿಶ್ರಾಂತಿ ನೀಡುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ಸೋಫಿ ಡಿವೈನ್ ಮುಂಬರುವ ಯಾವುದೇ ಟೂರ್ನಿ ಆಡುವುದಿಲ್ಲ ಎಂಬುದು ಸಹ ಖಚಿತವಾಗಿದೆ.

ಸೋಫಿ ಡಿವೈನ್ ಕಳೆದ ಎರಡು ಸೀಸನ್ಗಳಲ್ಲಿ ಆರ್ಸಿಬಿ ಪರ ಆರಂಭಿಕಗಳಾಗಿ ಕಣಕ್ಕಿಳಿದಿದ್ದರು. ಈ ವೇಳೆ 18 ಇನಿಂಗ್ಸ್ ಆಡಿರುವ ಅವರು 2 ಅರ್ಧಶತಕಗಳೊಂದಿಗೆ ಒಟ್ಟು 402 ರನ್ ಕಲೆಹಾಕಿದ್ದಾರೆ. ಹಾಗೆಯೇ ಬೌಲಿಂಗ್ನಲ್ಲಿ 9 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಸೋಫಿ ಡಿವೈನ್ ಹೊರಗುಳಿದಿರುವ ಕಾರಣ ಆರ್ಸಿಬಿ ಬದಲಿ ಆಲ್ರೌಂಡರ್ನನ್ನು ಆಯ್ಕೆ ಮಾಡಬೇಕಿದೆ.

RCB ಮಹಿಳಾ ತಂಡ: ಸ್ಮೃತಿ ಮಂಧಾನ, ಎಲ್ಲಿಸ್ ಪೆರ್ರಿ, ರಿಚಾ ಘೋಷ್, ರೇಣುಕಾ ಸಿಂಗ್, ಜಾರ್ಜಿಯಾ ವೇರ್‌ಹ್ಯಾಮ್, ಕೇಟ್ ಕ್ರಾಸ್, ಸಬ್ಬಿನೇನಿ ಮೇಘನಾ, ಶ್ರೇಯಾಂಕಾ ಪಾಟೀಲ್, ಆಶಾ ಸೊಭಾನಾ, ಏಕ್ತಾ ಬಿಷ್ತ್, ಕನಿಕಾ ಅಹುಜಾ, ಡೇನಿಯಲ್ ವ್ಯಾಟ್, ಪ್ರೇಮಾ ರಾವತ್, ಜೋಶಿತಾ ವಿಜೆ, ರಾಘವಿ ಬಿಸ್ತ್, ಜಾಗರವಿ ಪವಾರ್, ಚಾರ್ಲಿ ಡೀನ್.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More
