WPL 2025: RCBಗೆ ಕೈಕೊಟ್ಟ ಸೋಫಿ ಡಿವೈನ್

Updated on: Jan 26, 2025 | 11:08 AM

WPL 2025: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೂರನೇ ಆವೃತ್ತಿ ಫೆಬ್ರವರಿ 14 ರಿಂದ ಶುರುವಾಗಲಿದೆ. ವಡೋದರಾದ ಕೊಟಂಬಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಆದರೆ ಈ ಬಾರಿಯ ಟೂರ್ನಿಗೆ ಆರ್​ಸಿಬಿ ಆಟಗಾರ್ತಿ ಸೋಫಿ ಡಿವೈನ್ ಅಲಭ್ಯರಾಗಲಿದ್ದಾರೆ.

1 / 5
ವುಮೆನ್ಸ್ ಪ್ರೀಮಿಯರ್ ಲೀಗ್ (WPL 2025) ಸೀಸನ್-3 ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತ ಎದುರಾಗಿದೆ. ಆರ್​ಸಿಬಿ ತಂಡದ ಸ್ಟಾರ್​ ಆಟಗಾರ್ತಿ ಸೋಫಿ ಡಿವೈನ್ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ತಿಳಿಸಿದ್ದಾರೆ.

ವುಮೆನ್ಸ್ ಪ್ರೀಮಿಯರ್ ಲೀಗ್ (WPL 2025) ಸೀಸನ್-3 ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತ ಎದುರಾಗಿದೆ. ಆರ್​ಸಿಬಿ ತಂಡದ ಸ್ಟಾರ್​ ಆಟಗಾರ್ತಿ ಸೋಫಿ ಡಿವೈನ್ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ತಿಳಿಸಿದ್ದಾರೆ.

2 / 5

ನ್ಯೂಝಿಲೆಂಡ್ ತಂಡದ ನಾಯಕಿ ಮತ್ತು ಆಲ್‌ರೌಂಡರ್ ಸೋಫಿ ಡಿವೈನ್ ಕೆಲ ಕಾಲ ಕ್ರಿಕೆಟ್ ಅಂಗಳದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ತನ್ನ ಯೋಗಕ್ಷೇಮಕ್ಕೆ ಆದ್ಯತೆ ನೀಡಲು ಈ ನಿರ್ಧಾರ ತೆಗೆದುಕೊಂಡಿದ್ದು, ಹೀಗಾಗಿ ಕೆಲ ಕಾಲ ಯಾವುದೇ ಸರಣಿ ಅಥವಾ ಟೂರ್ನಿ ಆಡದಿರಲು ನಿರ್ಧರಿಸಿದ್ದೇನೆ ಎಂದು ಸೋಫಿ ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್​ಗೆ ತಿಳಿಸಿದ್ದಾರೆ.

3 / 5

ಅತ್ತ ಸೋಫಿ ಡಿವೈನ್ ಅವರ ತಾತ್ಕಾಲಿಕ ಬ್ರೇಕ್ ನಿರ್ಧಾರಕ್ಕೆ ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್​ನಿಂದ ಕೂಡ ಬೆಂಬಲ ವ್ಯಕ್ತವಾಗಿದ್ದು, ಅವರಿಗೆ ಕೆಲ ಕಾಲ ವಿಶ್ರಾಂತಿ ನೀಡುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ಸೋಫಿ ಡಿವೈನ್ ಮುಂಬರುವ ಯಾವುದೇ ಟೂರ್ನಿ ಆಡುವುದಿಲ್ಲ ಎಂಬುದು ಸಹ ಖಚಿತವಾಗಿದೆ.

4 / 5

ಸೋಫಿ ಡಿವೈನ್ ಕಳೆದ ಎರಡು ಸೀಸನ್​ಗಳಲ್ಲಿ ಆರ್​ಸಿಬಿ ಪರ ಆರಂಭಿಕಗಳಾಗಿ ಕಣಕ್ಕಿಳಿದಿದ್ದರು. ಈ ವೇಳೆ 18 ಇನಿಂಗ್ಸ್ ಆಡಿರುವ ಅವರು 2 ಅರ್ಧಶತಕಗಳೊಂದಿಗೆ ಒಟ್ಟು 402 ರನ್ ಕಲೆಹಾಕಿದ್ದಾರೆ. ಹಾಗೆಯೇ ಬೌಲಿಂಗ್​ನಲ್ಲಿ 9 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಸೋಫಿ ಡಿವೈನ್ ಹೊರಗುಳಿದಿರುವ ಕಾರಣ ಆರ್​ಸಿಬಿ ಬದಲಿ ಆಲ್​ರೌಂಡರ್​ನನ್ನು ಆಯ್ಕೆ ಮಾಡಬೇಕಿದೆ.

5 / 5

RCB ಮಹಿಳಾ ತಂಡ: ಸ್ಮೃತಿ ಮಂಧಾನ, ಎಲ್ಲಿಸ್ ಪೆರ್ರಿ, ರಿಚಾ ಘೋಷ್, ರೇಣುಕಾ ಸಿಂಗ್, ಜಾರ್ಜಿಯಾ ವೇರ್‌ಹ್ಯಾಮ್, ಕೇಟ್ ಕ್ರಾಸ್, ಸಬ್ಬಿನೇನಿ ಮೇಘನಾ, ಶ್ರೇಯಾಂಕಾ ಪಾಟೀಲ್, ಆಶಾ ಸೊಭಾನಾ, ಏಕ್ತಾ ಬಿಷ್ತ್, ಕನಿಕಾ ಅಹುಜಾ, ಡೇನಿಯಲ್ ವ್ಯಾಟ್, ಪ್ರೇಮಾ ರಾವತ್, ಜೋಶಿತಾ ವಿಜೆ, ರಾಘವಿ ಬಿಸ್ತ್, ಜಾಗರವಿ ಪವಾರ್, ಚಾರ್ಲಿ ಡೀನ್.

Loading...
Unable to load recommendations.
Follow Us