IPL 2026: ಪ್ರಮುಖ ಆಟಗಾರ ಗಾಯಾಳು: RCBಗೆ ಚಿಂತೆ ಶುರು
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಯ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 17 ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಅಲ್ಲದೆ ಮಿನಿ ಆಕ್ಷನ್ ಮೂಲಕ 8 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಐಪಿಎಲ್ 2026 ಕ್ಕಾಗಿ ಸಕಲ ರೀತಿಯಲ್ಲೂ ಸಜ್ಜಾಗಿದೆ.
Updated on: Dec 27, 2025 | 12:54 PM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಇನ್ನು ಉಳಿದಿರುವುದು ತಿಂಗಳುಗಳು ಮಾತ್ರ. ಆದರೆ ತಿಂಗಳುಗಳು ಉಳಿದಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರ ಗಾಯಗೊಂಡಿರುವುದು ಇದೀಗ RCB ಫ್ರಾಂಚೈಸಿಯ ಚಿಂತೆಯನ್ನು ಹೆಚ್ಚಿಸಿದೆ.

ಆರ್ಸಿಬಿ ತಂಡದ ಪ್ರಮುಖ ಆಟಗಾರ ಟಿಮ್ ಡೇವಿಡ್ ಬಿಗ್ ಬ್ಯಾಷ್ ಲೀಗ್ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪರ್ತ್ನಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್ನ 12ನೇ ಪಂದ್ಯದಲ್ಲಿ ಹೋಬರ್ಟ್ ಹರಿಕೇನ್ಸ್ ಪರ ಕಣಕ್ಕಿಳಿದಿದ್ದ ಟಿಮ್ ಡೇವಿಡ್ ಬ್ಯಾಟಿಂಗ್ ವೇಳೆ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದಾರೆ. ಈ ಗಾಯದ ಕಾರಣ ಟಿಮ್ ಡೇವಿಡ್ ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಪೆವಿಲಿಯನ್ಗೆ ಮರಳಿದ್ದಾರೆ.

ಪ್ರಸ್ತುತ ಮಾಹಿತಿ ಪ್ರಕಾರ ಟಿಮ್ ಡೇವಿಡ್ ಅವರ ಗಾಯವು ಗಂಭೀರವಾಗಿದ್ದು, ಹೀಗಾಗಿ ವೈದ್ಯರು ಅವರಿಗೆ ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಟಿಮ್ ಡೇವಿಡ್ ಮುಂಬರುವ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯುವುದು ಅನುಮಾನ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ.

ಟಿ20 ವಿಶ್ವಕಪ್ ಶುರುವಾಗುವುದು ಫೆಬ್ರವರಿ 7 ರಿಂದ. ಫೆಬ್ರವರಿ-ಮಾರ್ಚ್ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಿಂದ ಟಿಮ್ ಡೇವಿಡ್ ಹೊರಗುಳಿದರೆ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲೂ ಕಾಣಿಸಿಕೊಳ್ಳುವುದು ಡೌಟ್. ಏಕೆಂದರೆ ಐಪಿಎಲ್ 2026 ಮಾರ್ಚ್ 26 ರಿಂದ ಆರಂಭವಾಗಲಿದೆ.

ಅತ್ತ ಟಿ20 ವಿಶ್ವಕಪ್ನಿಂದ ಟಿಮ್ ಡೇವಿಡ್ ಹೊರಗುಳಿದರೆ ಮಾರ್ಚ್ನಲ್ಲಿ ಆರಂಭವಾಗಲಿರುವ ಐಪಿಎಲ್ನಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಹೀಗಾಗಿ ಅವರು ಈ ಬಾರಿ ಐಪಿಎಲ್ ಆಡುತ್ತಾರಾ ಅಥವಾ ಇಲ್ಲವಾ ಎಂಬುದು ಖಚಿತವಾಗಲು ಮುಂಬರುವ ಟಿ20 ವಿಶ್ವಕಪ್ವರೆಗೆ ಕಾಯಲೇಬೇಕು.
