AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಪ್ರಮುಖ ಆಟಗಾರ ಗಾಯಾಳು: RCBಗೆ ಚಿಂತೆ ಶುರು

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಯ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 17 ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಅಲ್ಲದೆ ಮಿನಿ ಆಕ್ಷನ್​ ಮೂಲಕ 8 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಐಪಿಎಲ್ 2026 ಕ್ಕಾಗಿ ಸಕಲ ರೀತಿಯಲ್ಲೂ ಸಜ್ಜಾಗಿದೆ.

ಝಾಹಿರ್ ಯೂಸುಫ್
|

Updated on: Dec 27, 2025 | 12:54 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಇನ್ನು ಉಳಿದಿರುವುದು ತಿಂಗಳುಗಳು ಮಾತ್ರ. ಆದರೆ ತಿಂಗಳುಗಳು ಉಳಿದಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರ ಗಾಯಗೊಂಡಿರುವುದು ಇದೀಗ RCB ಫ್ರಾಂಚೈಸಿಯ ಚಿಂತೆಯನ್ನು ಹೆಚ್ಚಿಸಿದೆ.

1 / 5
ಆರ್​ಸಿಬಿ ತಂಡದ ಪ್ರಮುಖ ಆಟಗಾರ ಟಿಮ್ ಡೇವಿಡ್ ಬಿಗ್ ಬ್ಯಾಷ್ ಲೀಗ್ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪರ್ತ್​ನಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ 12ನೇ ಪಂದ್ಯದಲ್ಲಿ  ಹೋಬರ್ಟ್ ಹರಿಕೇನ್ಸ್ ಪರ ಕಣಕ್ಕಿಳಿದಿದ್ದ ಟಿಮ್ ಡೇವಿಡ್ ಬ್ಯಾಟಿಂಗ್ ವೇಳೆ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದಾರೆ. ಈ ಗಾಯದ ಕಾರಣ ಟಿಮ್ ಡೇವಿಡ್ ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಪೆವಿಲಿಯನ್​ಗೆ ಮರಳಿದ್ದಾರೆ. 

2 / 5
ಪ್ರಸ್ತುತ ಮಾಹಿತಿ ಪ್ರಕಾರ ಟಿಮ್ ಡೇವಿಡ್ ಅವರ ಗಾಯವು ಗಂಭೀರವಾಗಿದ್ದು, ಹೀಗಾಗಿ ವೈದ್ಯರು ಅವರಿಗೆ ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಟಿಮ್ ಡೇವಿಡ್ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವುದು ಅನುಮಾನ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ.

3 / 5
ಟಿ20 ವಿಶ್ವಕಪ್ ಶುರುವಾಗುವುದು ಫೆಬ್ರವರಿ 7 ರಿಂದ. ಫೆಬ್ರವರಿ-ಮಾರ್ಚ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಿಂದ ಟಿಮ್ ಡೇವಿಡ್ ಹೊರಗುಳಿದರೆ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲೂ ಕಾಣಿಸಿಕೊಳ್ಳುವುದು ಡೌಟ್. ಏಕೆಂದರೆ ಐಪಿಎಲ್ 2026 ಮಾರ್ಚ್ 26 ರಿಂದ ಆರಂಭವಾಗಲಿದೆ.

4 / 5
ಅತ್ತ ಟಿ20 ವಿಶ್ವಕಪ್​ನಿಂದ ಟಿಮ್ ಡೇವಿಡ್ ಹೊರಗುಳಿದರೆ ಮಾರ್ಚ್​​ನಲ್ಲಿ ಆರಂಭವಾಗಲಿರುವ ಐಪಿಎಲ್​ನಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಹೀಗಾಗಿ ಅವರು ಈ ಬಾರಿ ಐಪಿಎಲ್ ಆಡುತ್ತಾರಾ ಅಥವಾ ಇಲ್ಲವಾ ಎಂಬುದು ಖಚಿತವಾಗಲು  ಮುಂಬರುವ ಟಿ20 ವಿಶ್ವಕಪ್​ವರೆಗೆ ಕಾಯಲೇಬೇಕು.

5 / 5