ಇಂಡಿಯನ್ ಪ್ರೀಮಿಯರ್ ಲೀಗ್ ದ್ವಿತಿಯಾರ್ಧ ಆರಂಭಕ್ಕೆ ಇನ್ನು ಕೆಲವು ದಿನಗಳು ಮಾತ್ರ ಉಳಿದಿವೆ. ಈಗಾಗಲೇ ಎಲ್ಲಾ ತಂಡಗಳು ಅಭ್ಯಾಸವನ್ನು ಆರಂಭಿಸಿದೆ. ಇನ್ನು ಕೆಲ ಆಟಗಾರರು ರಾಷ್ಟ್ರೀಯ ತಂಡಗಳಲ್ಲಿ ಕಾಣಿಸಿಕೊಂಡಿದ್ದು, ಇನ್ನು ಕೆಲವರು ಕೆಲ ಲೀಗ್‌ನಲ್ಲಿ ಆಟ ಮುಂದುವರೆಸಿದ್ದಾರೆ.
ಇತ್ತೀಚೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಯ್ಕೆಯಾಗಿದ್ದ ಸಿಂಗಪೂರ್ ಕ್ರಿಕೆಟಿಗ ಟಿಮ್ ಡೇವಿಡ್ ಇದೀಗ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇತ್ತ ಐಪಿಎಲ್ನಲ್ಲಿ ಅವಕಾಶ ಸಿಗುತ್ತಿದ್ದಂತೆ ಟಿಮ್ ಡೇವಿಡ್ ಸಿಪಿಎಲ್ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ.
ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ತನ್ನ ಚೊಚ್ಚಲ ಪಂದ್ಯದಲ್ಲೇ ಸ್ಪೋಟಕ ಬ್ಯಾಟಿಂಗ್ ಮೂಲಕ ಐಪಿಎಲ್ಗೆ ತಮ್ಮ ಆಗಮನವನ್ನು ಸಾರಿದ್ದಾರೆ. ಸಿಪಿಎಲ್‌ನ ಮೂರನೇ ಪಂದ್ಯದಲ್ಲಿ ಜಮೈಕಾ ತಲ್ಲವಾಸ್ ನೀಡಿದ 255 ರನ್ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಸೇಂಟ್ ಲೂಸಿಯಾ ಕಿಂಗ್ಸ್ ತಂಡಕ್ಕೆ ಆಸರೆಯಾಗಿದ್ದು ಯುವ ಬ್ಯಾಟ್ಸ್ಮನ್ ಟಿಮ್ ಡೇವಿಡ್. ಕೇವಲ 28 ಎಸೆತಗಳನ್ನು ಎದುರಿಸಿದ ಡೇವಿಡ್ ಬಿರುಸಿನ 56 ರನ್ ಬಾರಿಸಿದ್ದರು. ಇದರಲ್ಲಿ 8 ಬೌಂಡರಿ ಹಾಗೂ 3 ಸಿಕ್ಸರ್ಗಳು ಒಳಗೊಂಡಿತ್ತು ಎಂಬುದು ವಿಶೇಷ. ಇದಾಗ್ಯೂ ಸೆಂಟ್ ಲೂಸಿಯಾ ಕಿಂಗ್ಸ್ ತಂಡವು ಜಮೈಕಾ ವಿರುದ್ದ 125 ರನ್ಗಳಿಂದ ಸೋಲನುಭವಿಸಿತು.
ಸಿಂಗಾಪೂರ್ ಪರ 14 ಟಿ20 ಪಂದ್ಯವನ್ನಾಡಿರುವ ಟಿಮ್ ಡೇವಿಡ್ 4 ಅರ್ಧಶತಕದೊಂದಿಗೆ 558 ರನ್ ಕಲೆಹಾಕಿದ್ದಾರೆ. ಈ ವೇಳೆ 50 ಫೋರ್, 26 ಸಿಕ್ಸ್ ಸಿಡಿಸುವ ಮೂಲಕ ತಮ್ಮ ಬಿರುಸಿನ ಬ್ಯಾಟಿಂಗ್ ಸಾಮರ್ಥ್ಯವನ್ನು ತೆರೆದಿಟ್ಟಿದ್ದರು. ಇನ್ನು ಲೀಸ್ಟ್ ಎ ಟಿ20 ಕ್ರಿಕೆಟ್‌ನಲ್ಲಿ 49 ಪಂದ್ಯಗಳಿಂದ 1171 ರನ್ ಬಾರಿಸಿದ್ದಾರೆ.
ಇತ್ತೀಚೆಗೆ ನಡೆದ ಇಂಗ್ಲೆಂಡ್ನಲ್ಲಿ ನಡೆದ ಲಂಡನ್ ರಾಯಲ್ ಕಪ್ ಪಂದ್ಯದಲ್ಲಿ ಸರ್ರೆ ಪರ ಕಣಕ್ಕಿಳಿದಿದ್ದ ಟಿಮ್ ಡೇವಿಡ್ ಕೇವಲ 70 ಎಸೆತಗಳಲ್ಲಿ 140 ರನ್ ಚಚ್ಚಿದ್ದರು. ಈ ವೇಳೆ 11 ಸಿಕ್ಸರ್ ಹಾಗೂ 9 ಬೌಂಡರಿ ಸಿಡಿಸಿದ್ದರು.
ಇನ್ನು ಪಾಕಿಸ್ತಾನ್ ಸೂಪರ್ ಲೀಗ್ನಲ್ಲೂ ಟಿಮ್ ಡೇವಿಡ್ 30 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಅಬ್ಬರಿಸಿದ್ದರು. ಇದೀಗ ಸಿಪಿಎಲ್ನಲ್ಲೂ ಅಬ್ಬರಿಸುವ ಮೂಲಕ ಐಪಿಎಲ್ನಲ್ಲಿ ಆರ್ಸಿಬಿ ಪರ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಇರಾದೆಯಲ್ಲಿದ್ದಾರೆ ಟಿಮ್ ಡೇವಿಡ್.
Published On - 5:07 pm, Sat, 28 August 21