- Kannada News Photo gallery Cricket photos RCB's Wicket Keeper Dinesh Karthik Completes 200 catches in T20 cricket
IPL 2023: ಕ್ಯಾಚ್ ಹಿಡಿದು ವಿಶ್ವ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್
IPL 2023 Kannada: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ (1) ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ಗೆ ಕ್ಯಾಚ್ ನೀಡಿ ನಿರ್ಗಮಿಸಿದ್ದರು.
Updated on: Apr 02, 2023 | 11:23 PM

IPL 2023: ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಆರ್ಸಿಬಿ ತಂಡದ ಮೊದಲ ಪಂದ್ಯದಲ್ಲೇ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ವಿಕೆಟ್ ಹಿಂದೆ ನಿಂತು ಎಂಬುದು ವಿಶೇಷ.

ಹೌದು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ (1) ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ಗೆ ಕ್ಯಾಚ್ ನೀಡಿ ನಿರ್ಗಮಿಸಿದ್ದರು. ಈ ಕ್ಯಾಚ್ ಹಿಡಿಯುವುದರೊಂದಿಗೆ ಟಿ20 ಕ್ರಿಕೆಟ್ನಲ್ಲಿ 200 ಕ್ಯಾಚ್ ಹಿಡಿದ ವಿಶ್ವದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಭಾರತದ 2ನೇ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೂ ಡಿಕೆ ಪಾತ್ರರಾಗಿದ್ದಾರೆ.

ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ವಿಕೆಟ್ ಕೀಪರ್ ಎಂಬ ವಿಶ್ವ ದಾಖಲೆಯು ಸೌತ್ ಆಫ್ರಿಕಾದ ಕ್ವಿಂಟನ್ ಡಿಕಾಕ್ ಹೆಸರಿನಲ್ಲಿದೆ. ಡಿಕಾಕ್ ಇದುವರೆಗೆ ಒಟ್ಟು 207 ಕ್ಯಾಚ್ಗಳನ್ನು ಹಿಡಿದ್ದಾರೆ.

ಇನ್ನು ದ್ವಿತೀಯ ಸ್ಥಾನದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಪ್ರಸ್ತುತ ಸಿಎಸ್ಕೆ ತಂಡದ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಇದ್ದು, ಎಂಎಸ್ಡಿ ಇದುವರೆಗೆ 203 ಕ್ಯಾಚ್ಗಳನ್ನು ಹಿಡಿದಿದ್ದಾರೆ.

ಹಾಗೆಯೇ ಇದೀಗ 200 ಕ್ಯಾಚ್ಗಳನ್ನು ಪೂರೈಸುವ ಮೂಲಕ ದಿನೇಶ್ ಕಾರ್ತಿಕ್ ಈ ಸಾಧನೆ ಮಾಡಿದ ವಿಶ್ವದ ಮೂರನೇ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಪ್ರಸ್ತುತ ಐಪಿಎಲ್ ಮೂಲಕ ಕ್ವಿಂಟನ್ ಡಿಕಾಕ್ ಹಾಗೂ ಮಹೇಂದ್ರ ಸಿಂಗ್ ಧೋನಿಗೆ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆಯಿದೆ.
