
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರೋಚಕ ಜಯ ಸಾಧಿಸಿದೆ. ರಾಯ್ಪುರ್ನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. (PC: IPL)

ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿದ್ದರು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20ನೇ ಓವರ್ನ ಕೊನೆಯ ಎಸೆತದಲ್ಲಿ ಬೆನ್ನತ್ತಿ 2 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. (PC: IPL)

ಈ ಗೆಲುವಿನೊಂದಿಗೆ ಆರ್ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಾಯಿಂಟ್ಸಸ್ ಟೇಬಲ್ನಲ್ಲಿ ಅಗ್ರಸ್ಥಾನಕ್ಕೇರುತ್ತಿದ್ದಂತೆ ಐಪಿಎಲ್ ಪ್ಲೇಆಫ್ ರೇಸ್ನಿಂದ ಎರಡು ತಂಡಗಳು ಹೊರಬಿದ್ದಿವೆ. ಆ ತಂಡಗಳೆಂದರೆ... (PC: IPL)

ಲಕ್ನೋ ಸೂಪರ್ ಜೈಂಟ್ಸ್: ಈ ಬಾರಿ ಐಪಿಎಲ್ನಲ್ಲಿ ಈವರೆಗೆ 11 ಪಂದ್ಯಗಳನ್ನಾಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕೇವಲ 3 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಇನ್ನುಳಿದ ಮೂರು ಪಂದ್ಯಗಳಲ್ಲಿ ಎಲ್ಎಸ್ಜಿ ಗೆದ್ದರೂ 12 ಅಂಕಗಳನ್ನು ಮಾತ್ರ ಪಡೆಯಲಿದೆ. ಇತ್ತ ಟಾಪ್-4 ನಲ್ಲಿರುವ ತಂಡಗಳು 13 ಕ್ಕಿಂತ ಹೆಚ್ಚಿನ ಅಂಕಗಳನ್ನು ಹೊಂದಿದ್ದು, ಹೀಗಾಗಿ ಎಲ್ಎಸ್ಜಿಗೆ ಪ್ಲೇಆಫ್ಗೇರಲು ಅವಕಾಶ ಇರುವುದಿಲ್ಲ. (PC: IPL)

ಮುಂಬೈ ಇಂಡಿಯನ್ಸ್: ಮುಂಬೈ ಪಡೆಯು ಈವರೆಗೆ 11 ಪಂದ್ಯಗಳನ್ನಾಡಿದ್ದು, ಈ ವೇಳೆ ಕೇವಲ 3 ಮ್ಯಾಚ್ಗಳಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಇನ್ನುಳಿದ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದರೂ 12 ಅಂಕಗಳನ್ನು ಮಾತ್ರ ಪಡೆಯಬಹುದು. ಇತ್ತ ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲಿರುವ ತಂಡಗಳು 13 ಕ್ಕಿಂತ ಹೆಚ್ಚಿನ ಅಂಕಗಳನ್ನು ಹೊಂದಿರುವ ಕಾರಣ ಮುಂಬೈ ಇಂಡಿಯನ್ಸ್ಗೆ ಪ್ಲೇಆಫ್ಗೇರಲು ಸಾಧ್ಯವಾಗುವುದಿಲ್ಲ. (PC: IPL)

ಅದರಂತೆ 12 ಅಂಕಗಳನ್ನು ಹೊಂದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಗೆಲ್ಲುವುದರೊಂದಿಗೆ ಒಟ್ಟು 14 ಅಂಕಗಳನ್ನು ಪಡೆದುಕೊಂಡಿದೆ. ಇತ್ತ ಆರ್ಸಿಬಿ 14 ಅಂಕಗಳನ್ನು ಪಡೆಯುತ್ತಿದ್ದಂತೆ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಅಧಿಕೃತವಾಗಿ ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ. (PC: IPL)
Published On - 7:25 am, Mon, 11 May 26