- Kannada News Photo gallery Cricket photos Record Alert: Vaibhav Sooryavanshi, Yashasvi Jaiswal Creates New Record
ಬೆಂಕಿ ಬಿರುಗಾಳಿ ಬ್ಯಾಟಿಂಗ್ಗೆ ಹಳೆಯ ದಾಖಲೆಯೇ ಧ್ವಂಸ..!
Vaibhav Sooryavanshi - Yashasvi Jaiswal: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಸ್ಪೋಟಕ ಬ್ಯಾಟಿಂಗ್ನೊಂದಿಗೆ ಗಮನ ಸೆಳೆಯುತ್ತಿದ್ದಾರೆ. ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯುತ್ತಿರುವ ಈ ಜೋಡಿಯು ಪ್ರತಿ ಓವರ್‌ಗೆ 12.02 ಸರಾಸರಿಯಲ್ಲಿ ರನ್‌ಗಳಿಸುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.
Updated on: Apr 05, 2026 | 2:20 PM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಜೋಡಿಯಾದ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಹೊಸ ಇತಿಹಾಸ ಬರೆದಿದ್ದಾರೆ. ಏಪ್ರಿಲ್ 4ರಂದು ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಇವರಿಬ್ಬರು ಭಾರತೀಯ ಕ್ರಿಕೆಟ್‌ನ ದಿಗ್ಗಜ ಜೋಡಿ ವೀರೇಂದ್ರ ಸೆಹ್ವಾಗ್ ಮತ್ತು ಗೌತಮ್ ಗಂಭೀರ್ ಅವರ ಹೆಸರಿನಲ್ಲಿದ್ದ ಹಳೆಯ ದಾಖಲೆಯೊಂದನ್ನು ಅಳಿಸಿ ಹಾಕಿದ್ದಾರೆ.

ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಮೊದಲ ವಿಕೆಟ್ಗೆ 70 ರನ್‌ಗಳ ಜೊತೆಯಾಟವಾಡಿದ್ದರು. ಈ ಜೊತೆಯಾಟದೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತೀ ವೇಗವಾಗಿ (ಕಡಿಮೆ ಎಸೆತಗಳಲ್ಲಿ) 500 ರನ್‌ಗಳ ಜೊತೆಯಾಟವಾಡಿದ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಡೆಲ್ಲಿ ಡೇರ್‌ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್) ಪರ ಆಡಿದ್ದ ವೀರೇಂದ್ರ ಸೆಹ್ವಾಗ್ ಮತ್ತು ಗೌತಮ್ ಗಂಭೀರ್ ಹೆಸರಿನಲ್ಲಿತ್ತು. ಡೆಲ್ಲಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಈ ಜೋಡಿಯು 309 ಎಸೆತಗಳಲ್ಲಿ 500 ರನ್ ಪೂರೈಸಿ ಈ ದಾಖಲೆ ನಿರ್ಮಿಸಿದ್ದರು.

ಇದೀಗ ವೈಭವ್ ಸೂರ್ಯವಂಶಿ ಮತ್ತು ಯಶಸ್ವಿ ಜೈಸ್ವಾಲ್ ಕೇವಲ 248 ಎಸೆತಗಳಲ್ಲಿ 500 ರನ್‌ಗಳ ಜೊತೆಯಾಟವಾಡಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 500 ರನ್ಗಳನ್ನು ಪೂರೈಸಿದ ಭಾರತೀಯ ಆರಂಭಿಕ ಜೋಡಿ ಎಂಬ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಐಪಿಎಲ್ ಇತಿಹಾಸದಲ್ಲಿ ಅತಿ ವೇಗವಾಗಿ 500 ರನ್ ಪೂರೈಸಿದ ಜೋಡಿಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಮೊದಲ ಎರಡು ಸ್ಥಾನಗಳಲ್ಲಿ ಟ್ರಾವಿಸ್ ಹೆಡ್-ಅಭಿಷೇಕ್ ಶರ್ಮಾ ಮತ್ತು ಫಿಲ್ ಸಾಲ್ಟ್-ಸುನಿಲ್ ನರೈನ್ ಇದ್ದಾರೆ. ಆದರೆ, ಕೇವಲ ಭಾರತೀಯ ಆಟಗಾರರನ್ನೇ ಹೊಂದಿರುವ ಜೋಡಿಗಳಲ್ಲಿ ಜೈಸ್ವಾಲ್-ಸೂರ್ಯವಂಶಿ ಈಗ ಅಗ್ರಸ್ಥಾನದಲ್ಲಿದ್ದಾರೆ.




