ಆಂಡರ್ಸನ್ ಮ್ಯಾಂಚೆಸ್ಟರ್ ಟೆಸ್ಟ್ ಸೇರಿದಂತೆ ಒಟ್ಟು 174 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ, ಅದರಲ್ಲಿ 100 ಟೆಸ್ಟ್ ಪಂದ್ಯಗಳನ್ನು ತವರಿನಲ್ಲಿ ಆಡಿದ್ದಾರೆ. ಅವರ ನಂತರ ಎರಡನೇ ಸ್ಥಾನದಲ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಇದ್ದಾರೆ, ಅವರು ಭಾರತದಲ್ಲಿ ತಮ್ಮ 200 ಟೆಸ್ಟ್ ಪಂದ್ಯಗಳಲ್ಲಿ 94 ಪಂದ್ಯಗಳನ್ನು ಆಡಿದ್ದಾರೆ. ಸಚಿನ್ ಬಳಿಕ ಪಾಂಟಿಂಗ್ ಇದ್ದು, ಅವರು ತವರು ನೆಲದಲ್ಲಿ 92 ಪಂದ್ಯಗಳನ್ನಾಡಿದ್ದಾರೆ.