ಕೇವಲ ೧೯ ಎಸೆತಗಳಲ್ಲಿ ‘ಪವರ್’ಫುಲ್ ದಾಖಲೆ ಬರೆದ ಟೀಮ್ ಇಂಡಿಯಾ

Updated on: Jan 26, 2026 | 7:54 AM

India vs New zealand: ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯವನ್ನು ಭಾರತ ತಂಡವು ಕೇವಲ 10 ಓವರ್​ಗಳಲ್ಲಿ ಮುಗಿಸಿದೆ. ಅದು ಕೂಡ ಬರೋಬ್ಬರಿ 154 ರನ್​ಗಳನ್ನು ಚೇಸ್ ಮಾಡುವ ಮೂಲಕ. ಈ ಪಂದ್ಯದ ಪವರ್​ ಪ್ಲೇನಲ್ಲಿ ಭಾರತ ತಂಡವು ಕಲೆಹಾಕಿದ್ದು ಬರೋಬ್ಬರಿ 94 ರನ್​ಗಳು. ಅದರಲ್ಲೂ ಮೊದಲ ಮೂರು ಓವರ್​ಗಳಲ್ಲಿ 52 ರನ್​ ಚಚ್ಚಿದ್ದರು.

1 / 5
ಟೀಮ್ ಇಂಡಿಯಾ ಪವರ್​ಪ್ಲೇನಲ್ಲೇ ಪವರ್​ಫುಲ್ ದಾಖಲೆ ಬರೆದಿದೆ. ಅದು ಸಹ ಕೇವಲ 19 ಎಸೆತಗಳಲ್ಲಿ. ಈ 19 ಎಸೆತಗಳಲ್ಲಿ ಭಾರತೀಯ ಬ್ಯಾಟರ್​ಗಳು ಅರ್ಧಶತಕ ಪೂರೈಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಗುವಾಹಟಿಯಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು.

ಟೀಮ್ ಇಂಡಿಯಾ ಪವರ್​ಪ್ಲೇನಲ್ಲೇ ಪವರ್​ಫುಲ್ ದಾಖಲೆ ಬರೆದಿದೆ. ಅದು ಸಹ ಕೇವಲ 19 ಎಸೆತಗಳಲ್ಲಿ. ಈ 19 ಎಸೆತಗಳಲ್ಲಿ ಭಾರತೀಯ ಬ್ಯಾಟರ್​ಗಳು ಅರ್ಧಶತಕ ಪೂರೈಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಗುವಾಹಟಿಯಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು.

2 / 5

ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು 153 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಇನಿಂಗ್ಸ್​ನ ಮೊದಲ ಎಸೆತದಲ್ಲೇ ಸಂಜು ಸ್ಯಾಮ್ಸನ್ ಗೋಲ್ಡನ್ ಡಕ್​ಗೆ ಔಟಾಗಿದ್ದರು.

3 / 5

ಈ ವೇಳೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ ಮೊದಲ ಓವರ್​ನಲ್ಲೇ 2 ಸಿಕ್ಸ್ ಹಾಗೂ 1 ಫೋರ್​ ಬಾರಿಸಿ ಕೌಂಟರ್ ಅಟ್ಯಾಕ್ ಶುರು ಮಾಡಿದರು. ಕಿಶನ್ ಜೊತೆಗೆ ಅಭಿಷೇಕ್ ಶರ್ಮಾ ಕೂಡ ಅಬ್ಬರಿಸಲಾರಂಭಿಸಿದರು. ಪರಿಣಾಮ ಟೀಮ್ ಇಂಡಿಯಾ 3.1 ಓವರ್​ಗಳಲ್ಲಿ ಅರ್ಧಶತಕ ಪೂರೈಸಿತು.

4 / 5

ಅಂದರೆ ಕೇವಲ 19 ಎಸೆತಗಳಲ್ಲಿ ಭಾರತ ತಂಡದ ಸ್ಕೋರ್ 52 ಕ್ಕೆ ಬಂದು ನಿಂತಿತ್ತು. ಇದು ಟಿ20 ಕ್ರಿಕೆಟ್ ಇತಿಹಾಸದಲ್ಲೇ ಭಾರತ ತಂಡದ ಅತೀ ವೇಗದ ಅರ್ಧಶತಕವಾಗಿದೆ. ಇದಕ್ಕೂ ಮುನ್ನ 2023 ರಲ್ಲಿ ಬಾಂಗ್ಲಾದೇಶ್ ವಿರುದ್ಧ 3.4 ಓವರ್​ಗಳಲ್ಲಿ ಅರ್ಧಶತಕ ಪೂರೈಸಿದ್ದರು. ಇದೀಗ 3.1 ಓವರ್​ಗಳಲ್ಲಿ 50+ ಸ್ಕೋರ್​ಗಳಿಸುವ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ.

5 / 5

ಇಂಟ್ರೆಸ್ಟಿಂಗ್ ವಿಷಯ ಎಂದರೆ ಇದು ಟೀಮ್ ಇಂಡಿಯಾದ ಅತೀ ವೇಗದ ಅರ್ಧಶತಕವಲ್ಲ ಎಂಬುದು. ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡವು 3 ಓವರ್​ಗಳಲ್ಲಿ ಅರ್ಧಶತಕ ಪೂರೈಸಿದ ಇತಿಹಾಸವಿದೆ. 2024 ರಲ್ಲಿ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಕೇವಲ 3 ಓವರ್​ಗಳಲ್ಲಿ 50 ರನ್ ಕಲೆಹಾಕಿದ್ದರು. ಇದೀಗ ಟಿ20 ಕ್ರಿಕೆಟ್​ನಲ್ಲಿ 3.1 ಓವರ್​ಗಳ ಮೂಲಕ 52 ರನ್​ಗಳಿಸಿ ಇಶಾನ್ ಕಿಶನ್-ಅಭಿಷೇಕ್ ಶರ್ಮಾ ಹೊಸ ಇತಿಹಾಸ ನಿರ್ಮಿಸಿದ್ದಾರೆ.

Loading...
Unable to load recommendations.
Follow Us