Virat Kohli: ಭರ್ಜರಿ ಸೆಂಚುರಿ ಸಿಡಿಸಿ 8 ದಾಖಲೆ ಬರೆದ ಕಿಂಗ್ ಕೊಹ್ಲಿ

| Updated By: ಝಾಹಿರ್ ಯೂಸುಫ್

Updated on: Jul 22, 2023 | 3:46 PM

Virat Kohli Records: ವಿರಾಟ್ ಕೊಹ್ಲಿ 206 ಎಸೆತಗಳನ್ನು ಎದುರಿಸಿ 11 ಫೋರ್​ಗಳೊಂದಿಗೆ 121 ರನ್​ ಕಲೆಹಾಕಿದರು. ಇದರೊಂದಿಗೆ ಹಲವು ದಾಖಲೆಗಳು ಕಿಂಗ್ ಕೊಹ್ಲಿಯ ಪಾಲಾಯಿತು. ಆ ದಾಖಲೆಗಳ ಸಂಕ್ಷಿಪ್ತ ಮಾಹಿತಿ ಈ ಕೆಳಗಿನಂತಿದೆ.

1 / 10
India vs West Indies: ಪೋರ್ಟ್​ ಆಫ್ ಸ್ಪೇನ್​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸಿ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

2 / 10
ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ 206 ಎಸೆತಗಳನ್ನು ಎದುರಿಸಿ 11 ಫೋರ್​ಗಳೊಂದಿಗೆ 121 ರನ್​ ಕಲೆಹಾಕಿದರು. ಇದರೊಂದಿಗೆ ಹಲವು ದಾಖಲೆಗಳು ವಿರಾಟ್ ಕೊಹ್ಲಿಯ ಪಾಲಾಯಿತು. ಆ ದಾಖಲೆಗಳ ಸಂಕ್ಷಿಪ್ತ ಮಾಹಿತಿ ಈ ಕೆಳಗಿನಂತಿದೆ.

3 / 10
1- ವೆಸ್ಟ್ ಇಂಡೀಸ್ ವಿರುದ್ಧ ಶತಕ ಬಾರಿಸುವುದರೊಂದಿಗೆ 500ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸೆಂಚುರಿ ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆ ಕಿಂಗ್ ಕೊಹ್ಲಿ ಪಾಲಾಯಿತು.

4 / 10
2- ಈ ಸೆಂಚುರಿಯೊಂದಿಗೆ 500 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ 75 ಶತಕ ಬಾರಿಸಿದ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದರು. ಇದೀಗ 76 ಶತಕ ಬಾರಿಸಿ ಕಿಂಗ್ ಕೊಹ್ಲಿ ನಂಬರ್ ಅಗ್ರಸ್ಥಾನಕ್ಕೇರಿದ್ದಾರೆ.

5 / 10
3- ಈ ಶತಕದೊಂದಿಗೆ ಅತೀ ವೇಗವಾಗಿ 76 ಶತಕಗಳನ್ನು ಬಾರಿಸಿದ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾದರು. ಕಿಂಗ್ ಕೊಹ್ಲಿ ಕೇವಲ 500 ಪಂದ್ಯಗಳಿಂದ ಈ ಸಾಧನೆ ಮಾಡಿದ್ದಾರೆ.

6 / 10
4- ಪ್ರಸ್ತುತ ಆಟಗಾರರಲ್ಲಿ ಅತ್ಯಧಿಕ ಶತಕ ಬಾರಿಸಿದ ಪಟ್ಟಿಯಲ್ಲೂ ವಿರಾಟ್ ಕೊಹ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಕಿಂಗ್ ಕೊಹ್ಲಿ 76 ಶತಕಗಳನ್ನು ಸಿಡಿಸಿ ಅಗ್ರಸ್ಥಾನದಲ್ಲಿದ್ದರೆ, 46 ಶತಕ ಬಾರಿಸಿರುವ ಜೋ ರೂಟ್ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

7 / 10
5- ಈ ಶತಕದೊಂದಿಗೆ 500 ಪಂದ್ಯಗಳಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್ ಎಂಬ ಹಿರಿಮೆಗೂ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನು ಈ ದಾಖಲೆ ಆಸ್ಟ್ರೇಲಿಯಾ ರಿಕಿ ಪಾಂಟಿಂಗ್ (25035)  ಹೆಸರಿನಲ್ಲಿತ್ತು. ಇದೀಗ ಒಟ್ಟು 25461 ರನ್ ಕಲೆಹಾಕುವ ಮೂಲಕ ಕಿಂಗ್ ಕೊಹ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.

8 / 10
6- ಟೆಸ್ಟ್​ ಕ್ರಿಕೆಟ್​ನಲ್ಲಿ 29ನೇ ಶತಕ ಸಿಡಿಸುವ ಮೂಲಕ ಅತ್ಯಧಿಕ ಟೆಸ್ಟ್ ಸೆಂಚುರಿ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ ಆಸ್ಟ್ರೇಲಿಯಾ ದಂತಕಥೆ ಡಾನ್ ಬ್ರಾಡ್​ಮ್ಯಾನ್ ಅವರ 29 ಶತಕಗಳ ದಾಖಲೆಯನ್ನು ಸರಿಗಟ್ಟಿದ್ದಾರೆ.

9 / 10
7- ಈ ಶತಕದೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಸುನಿಲ್ ಗವಾಸ್ಕರ್ (13) ಅಗ್ರಸ್ಥಾನದಲ್ಲಿದ್ದು, ಇದೀಗ 12 ಶತಕಗಳೊಂದಿಗೆ ಕೊಹ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

10 / 10
8- ಈ ಭರ್ಜರಿ ಸೆಂಚುರಿಯೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಿದ್ದಾರೆ. ಈ ಹಿಂದೆ 2035 ರನ್ ಕಲೆಹಾಕಿದ್ದ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರು. ಇದೀಗ ಒಟ್ಟು 2063 ರನ್ ಬಾರಿಸಿ ವಿರಾಟ್ ಕೊಹ್ಲಿ ಮೊದಲ ಸ್ಥಾನ ಅಲಂಕರಿಸಿದ್ದಾರೆ.