- Kannada News Photo gallery Cricket photos Reece Topley Injury Update: Reece Topley to miss KKR vs RCB Match
IPL 2023: RCB ತಂಡಕ್ಕೆ ಆಘಾತದ ಮೇಲೆ ಆಘಾತ: ಮುಂದಿನ ಪಂದ್ಯಕ್ಕೆ ಪ್ರಮುಖ ವೇಗಿ ಅಲಭ್ಯ?
Reece Topley Injury Update: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್.
Updated on:Apr 04, 2023 | 8:30 PM

IPL 2023: ಐಪಿಎಲ್ನ ಮೊದಲ ಪಂದ್ಯದಲ್ಲಿ ಭರ್ಜರಿ ಜಯದೊಂದಿಗೆ ಶುಭಾರಂಭ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಇದೀಗ ಆಘಾತದ ಮೇಲೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್ನಿಂದ ಹೊರಗುಳಿದಿದ್ದಾರೆ.

ಇದರ ಬೆನ್ನಲ್ಲೇ ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿದಿದ್ದ ಆರ್ಸಿಬಿ ವೇಗಿ ರೀಸ್ ಟೋಪ್ಲಿ ಮುಂದಿನ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಮುಂಬೈ ವಿರುದ್ಧದ ಪಂದ್ಯದ ವೇಳೆ ಟೋಪ್ಲಿಯ ಭುಜಕ್ಕೆ ಗಾಯವಾಗಿತ್ತು.

ಮುಂಬೈ ಇಂಡಿಯನ್ಸ್ ತಂಡದ ಇನಿಂಗ್ಸ್ನ 8ನೇ ಓವರ್ನಲ್ಲಿ ಫೀಲ್ಡಿಂಗ್ ಮಾಡುವಾಗ ರೀಸ್ ಟೋಪ್ಲಿಯ ಅವರ ಭುಜವು ಮೈದಾನಕ್ಕೆ ಜೋರಾಗಿ ಬಡಿದಿತ್ತು. ಇದರಿಂದ ಭುಜದ ಮೂಳೆಯಲ್ಲಿ ಸಣ್ಣ ಸ್ಥಾನ ಪಲ್ಲಟವಾಗಿದೆ. ಆದರೆ ತಕ್ಷಣವೇ ಯಥಾಸ್ಥಿತಿಗೆ ತರುವಲ್ಲಿ ಫಿಸಿಯೋ ಕೂಡ ಯಶಸ್ವಿಯಾಗಿದ್ದರು.

ಆ ಬಳಿಕ ವೈದ್ಯರ ಪರಿಶೀಲನೆಯ ವೇಳೆ ಗಾಯವು ಗಂಭೀರವಲ್ಲ ಎಂದು ತಿಳಿದು ಬಂದಿದೆ. ಇದೀಗ ಆರ್ಸಿಬಿ ತಂಡದ ಜೊತೆ ರೀಸ್ ಟೋಪ್ಲಿ ಕೂಡ 2ನೇ ಪಂದ್ಯಕ್ಕಾಗಿ ಕೋಲ್ಕತ್ತಾದತ್ತ ಪ್ರಯಾಣ ಬೆಳೆಸಿದ್ದಾರೆ. ಆದರೆ ಏಪ್ರಿಲ್ 6 ರಂದು ನಡೆಯಲಿರುವ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಟೋಪ್ಲಿ ಕಣಕ್ಕಿಳಿಯುವುದಿಲ್ಲ.

ಮುಂಜಾಗೃತ ಕ್ರಮವಾಗಿ ರೀಸ್ ಟೋಪ್ಲಿಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದು, ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ ವೇಗಿ ಕಣಕ್ಕಿಳಿಯುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ. ಇದಾಗ್ಯೂ ಏಪ್ರಿಲ್ 10 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆಯಲಿರುವ 3ನೇ ಪಂದ್ಯಕ್ಕೆ ಅವರು ಸಂಪೂರ್ಣ ಫಿಟ್ ಆಗಿರಲಿದ್ದಾರೆ.

ಇನ್ನು ಜೋಶ್ ಹ್ಯಾಝಲ್ವುಡ್ ಅನುಪಸ್ಥಿತಿಯಲ್ಲಿ ಕಣಕ್ಕಿಳಿದಿದ್ದ ರೀಸ್ ಟೋಪ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 2 ಓವರ್ ಬೌಲಿಂಗ್ ಮಾಡಿದ್ದರು. ಈ ವೇಳೆ 14 ರನ್ ನೀಡಿ 1 ವಿಕೆಟ್ ಕಬಳಿಸಿದ್ದರು. ಇದೀಗ 2ನೇ ಪಂದ್ಯಕ್ಕೆ ಟೋಪ್ಲಿ ಅಲಭ್ಯರಾದರೆ, ಅವರ ಸ್ಥಾನದಲ್ಲಿ ಮತ್ತೋರ್ವ ಎಡಗೈ ವೇಗಿ ಡೇವಿಡ್ ವಿಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಈಗಾಗಲೇ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 8 ವಿಕೆಟ್ಗಳ ಜಯ ಸಾಧಿಸಿರುವ ಆರ್ಸಿಬಿ ತಂಡವು 2ನೇ ಪಂದ್ಯದಲ್ಲೂ ಭರ್ಜರಿ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ. ಹೀಗಾಗಿ ಈಡನ್ ಗಾರ್ಡನ್ಸ್ ಮೈದಾನದಲ್ಲೂ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್ವೆಲ್.
Published On - 8:30 pm, Tue, 4 April 23
