IPL 2023: RCB ತಂಡಕ್ಕೆ ಆಘಾತದ ಮೇಲೆ ಆಘಾತ: ಮುಂದಿನ ಪಂದ್ಯಕ್ಕೆ ಪ್ರಮುಖ ವೇಗಿ ಅಲಭ್ಯ?

| Updated By: ಝಾಹಿರ್ ಯೂಸುಫ್

Updated on: Apr 04, 2023 | 8:30 PM

Reece Topley Injury Update: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್.

1 / 8
IPL 2023: ಐಪಿಎಲ್​ನ ಮೊದಲ ಪಂದ್ಯದಲ್ಲಿ ಭರ್ಜರಿ ಜಯದೊಂದಿಗೆ ಶುಭಾರಂಭ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಇದೀಗ ಆಘಾತದ ಮೇಲೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದಾರೆ.

2 / 8
ಇದರ ಬೆನ್ನಲ್ಲೇ ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿದಿದ್ದ ಆರ್​ಸಿಬಿ ವೇಗಿ ರೀಸ್ ಟೋಪ್ಲಿ ಮುಂದಿನ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಮುಂಬೈ ವಿರುದ್ಧದ ಪಂದ್ಯದ ವೇಳೆ ಟೋಪ್ಲಿಯ ಭುಜಕ್ಕೆ ಗಾಯವಾಗಿತ್ತು.

3 / 8
ಮುಂಬೈ ಇಂಡಿಯನ್ಸ್ ತಂಡದ ಇನಿಂಗ್ಸ್​​ನ 8ನೇ ಓವರ್​ನಲ್ಲಿ ಫೀಲ್ಡಿಂಗ್ ಮಾಡುವಾಗ ರೀಸ್ ಟೋಪ್ಲಿಯ ಅವರ ಭುಜವು ಮೈದಾನಕ್ಕೆ ಜೋರಾಗಿ ಬಡಿದಿತ್ತು. ಇದರಿಂದ ಭುಜದ ಮೂಳೆಯಲ್ಲಿ ಸಣ್ಣ ಸ್ಥಾನ ಪಲ್ಲಟವಾಗಿದೆ. ಆದರೆ ತಕ್ಷಣವೇ ಯಥಾಸ್ಥಿತಿಗೆ ತರುವಲ್ಲಿ ಫಿಸಿಯೋ ಕೂಡ ಯಶಸ್ವಿಯಾಗಿದ್ದರು.

4 / 8
ಆ ಬಳಿಕ ವೈದ್ಯರ ಪರಿಶೀಲನೆಯ ವೇಳೆ ಗಾಯವು ಗಂಭೀರವಲ್ಲ ಎಂದು ತಿಳಿದು ಬಂದಿದೆ. ಇದೀಗ ಆರ್​ಸಿಬಿ ತಂಡದ ಜೊತೆ ರೀಸ್ ಟೋಪ್ಲಿ ಕೂಡ 2ನೇ ಪಂದ್ಯಕ್ಕಾಗಿ ಕೋಲ್ಕತ್ತಾದತ್ತ ಪ್ರಯಾಣ ಬೆಳೆಸಿದ್ದಾರೆ. ಆದರೆ ಏಪ್ರಿಲ್ 6 ರಂದು ನಡೆಯಲಿರುವ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಟೋಪ್ಲಿ ಕಣಕ್ಕಿಳಿಯುವುದಿಲ್ಲ.

5 / 8
ಮುಂಜಾಗೃತ ಕ್ರಮವಾಗಿ ರೀಸ್ ಟೋಪ್ಲಿಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದು, ಹೀಗಾಗಿ ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ ವೇಗಿ ಕಣಕ್ಕಿಳಿಯುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ. ಇದಾಗ್ಯೂ ಏಪ್ರಿಲ್ 10 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆಯಲಿರುವ 3ನೇ ಪಂದ್ಯಕ್ಕೆ ಅವರು ಸಂಪೂರ್ಣ ಫಿಟ್ ಆಗಿರಲಿದ್ದಾರೆ.

6 / 8
ಇನ್ನು ಜೋಶ್ ಹ್ಯಾಝಲ್​ವುಡ್​ ಅನುಪಸ್ಥಿತಿಯಲ್ಲಿ ಕಣಕ್ಕಿಳಿದಿದ್ದ ರೀಸ್​ ಟೋಪ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 2 ಓವರ್ ಬೌಲಿಂಗ್ ಮಾಡಿದ್ದರು. ಈ ವೇಳೆ 14 ರನ್ ನೀಡಿ 1 ವಿಕೆಟ್ ಕಬಳಿಸಿದ್ದರು. ಇದೀಗ 2ನೇ ಪಂದ್ಯಕ್ಕೆ ಟೋಪ್ಲಿ ಅಲಭ್ಯರಾದರೆ, ಅವರ ಸ್ಥಾನದಲ್ಲಿ ಮತ್ತೋರ್ವ ಎಡಗೈ ವೇಗಿ ಡೇವಿಡ್ ವಿಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

7 / 8
ಈಗಾಗಲೇ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 8 ವಿಕೆಟ್​ಗಳ ಜಯ ಸಾಧಿಸಿರುವ ಆರ್​ಸಿಬಿ ತಂಡವು 2ನೇ ಪಂದ್ಯದಲ್ಲೂ ಭರ್ಜರಿ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ. ಹೀಗಾಗಿ ಈಡನ್ ಗಾರ್ಡನ್ಸ್ ಮೈದಾನದಲ್ಲೂ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

8 / 8
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್​ವೆಲ್.

Published On - 8:30 pm, Tue, 4 April 23