AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಚಾ ಘೋಷ್ ಸಿಡಿಲಬ್ಬರಕ್ಕೆ ದಾಖಲೆ ಧೂಳೀಪಟ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ ಬರೋಬ್ಬರಿ 199 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ರಿಚಾ ಘೋಷ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಭರ್ಜರಿ ಬ್ಯಾಟಿಂಗ್ ಹೊರತಾಗಿಯೂ ಈ ಪಂದ್ಯದಲ್ಲಿ ಆರ್​ಸಿಬಿ ತಂಡ 15 ರನ್​ಗಳಿಂದ ಸೋಲನುಭವಿಸಿದೆ.

ಝಾಹಿರ್ ಯೂಸುಫ್
|

Updated on: Jan 27, 2026 | 8:06 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ (Richa Ghosh) ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಕೂಡ ಸಿಡಿಲಬ್ಬರದ 90 ರನ್​ ಸಿಡಿಸುವ ಮೂಲಕ ಎಂಬುದು ವಿಶೇಷ. 

1 / 6
ವಡೋದರಾದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ನ್ಯಾಟ್ ಸೀವರ್ ಬ್ರಂಟ್ ಅಜೇಯ ಶತಕ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 199 ರನ್ ಕಲೆಹಾಕಿತು.

2 / 6
200 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಆರ್​ಸಿಬಿ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 35 ರನ್​ಗಳಿಸುವಷ್ಟರಲ್ಲಿ ಆರ್​ಸಿಬಿ ತಂಡವು 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಚಾ ಘೋಷ್ ದಿಟ್ಟ ಹೋರಾಟ ಪ್ರದರ್ಶಿಸಿದರು.

3 / 6
ಮುಂಬೈ ಇಂಡಿಯನ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ರಿಚಾ ಘೋಷ್ ಕೇವಲ 50 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 10 ಫೋರ್​ಗಳೊಂದಿಗೆ 90 ರನ್​ ಬಾರಿಸಿದರು. ಈ 90 ರನ್​ಗಳೊಂದಿಗೆ ರಿಚಾ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸವನ್ನು ಸಹ ಬರೆದರು.

4 / 6
ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ 5 ಕ್ಕಿಂತ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಅತ್ಯಧಿಕ ರನ್ ಕಲೆಹಾಕಿದ ಭರ್ಜರಿ ದಾಖಲೆ ರಿಚಾ ಘೋಷ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಆರ್​ಸಿಬಿ ತಂಡ ನಾಡಿನ್ ಡಿ ಕ್ಲರ್ಕ್​ ಹೆಸರಿನಲ್ಲಿತ್ತು. ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಅಜೇಯ 63 ರನ್​ ಸಿಡಿಸುವ ಮೂಲಕ ನಾಡಿನ್ ಈ ದಾಖಲೆ ನಿರ್ಮಿಸಿದ್ದರು.

5 / 6
ಇದೀಗ ಕೇವಲ 50 ಎಸೆತಗಳಲ್ಲಿ 90 ರನ್ ಸಿಡಿಸಿ ರಿಚಾ ಘೋಷ್ ಈ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀ್ಗ್​ ಇತಿಹಾಸದಲ್ಲೇ ಟಾಪ್-5 ಕ್ಕಿಂತ ಕೆಳಗೆ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಗರಿಷ್ಠ ವೈಯುಕ್ತಿಕ ಸ್ಕೋರ್​ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ರಿಚಾ ಘೋಷ್ ಅವರ ಈ ಏಕಾಂಗಿ ಹೋರಾಟದ ಹೊರತಾಗಿಯೂ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು 15 ರನ್​ಗಳಿಂದ ಸೋಲೊಪ್ಪಿಕೊಂಡಿತು.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ