Updated on: Aug 20, 2023 | 11:28 PM
ಡಬ್ಲಿನ್ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 33 ರನ್ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ರಿಂಕು ಸಿಂಗ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.
5ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಚೊಚ್ಚಲ ಇನಿಂಗ್ಸ್ ಆಡಿದ ರಿಂಕು ಸಿಂಗ್ 3 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ ಕೇವಲ 21 ಎಸೆತಗಳಲ್ಲಿ 38 ರನ್ ಚಚ್ಚಿದ್ದರು. ಈ ಬಿರುಸಿನ ಬ್ಯಾಟಿಂಗ್ನೊಂದಿಗೆ ಯುವ ಎಡಗೈ ದಾಂಡಿಗ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.
ಈ ಪಂದ್ಯದಲ್ಲಿ ರಿಂಕು ಸಿಂಗ್ 180.95 ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಪರ ಮೊದಲ ಇನಿಂಗ್ಸ್ನಲ್ಲೇ ಅತ್ಯುತ್ತಮ ಸ್ಟ್ರೇಕ್ ರೇಟ್ನಲ್ಲಿ ಬ್ಯಾಟ್ ಬೀಸಿದ ಆಟಗಾರ ಎನಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ಈ ದಾಖಲೆ ತಿಲಕ್ ವರ್ಮಾ ಹೆಸರಿನಲ್ಲಿತ್ತು. ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಪಂದ್ಯವಾಡಿದ್ದ ತಿಲಕ್ ವರ್ಮಾ 177.27 ಸ್ಟ್ರೈಕ್ ರೇಟ್ನಲ್ಲಿ 39 ರನ್ ಬಾರಿಸಿ ದಾಖಲೆ ನಿರ್ಮಿಸಿದ್ದರು.
ಇದೀಗ 180.95 ಸ್ಟ್ರೈಕ್ ರೇಟ್ನಲ್ಲಿ 38 ರನ್ ಸಿಡಿಸುವ ಮೂಲಕ ರಿಂಕು ಸಿಂಗ್ ಈ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ಈ ಭರ್ಜರಿ ಪ್ರದರ್ಶನಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಕೂಡ ಪಡೆದಿದ್ದಾರೆ.