ಸ್ಪೋಟಕ ಬ್ಯಾಟಿಂಗ್​ ಮೂಲಕ ದಾಖಲೆ ಬರೆದ ರಿಂಕು ಸಿಂಗ್

| Updated By: ಝಾಹಿರ್ ಯೂಸುಫ್

Updated on: Aug 20, 2023 | 11:28 PM

Rinku Singh Record: ಚೊಚ್ಚಲ ಇನಿಂಗ್ಸ್ ಆಡಿದ ರಿಂಕು ಸಿಂಗ್ 3 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಕೇವಲ 21 ಎಸೆತಗಳಲ್ಲಿ 38 ರನ್​ ಚಚ್ಚಿದ್ದರು. ಈ ಬಿರುಸಿನ ಬ್ಯಾಟಿಂಗ್​ನೊಂದಿಗೆ ಯುವ ಎಡಗೈ ದಾಂಡಿಗ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 5
ಡಬ್ಲಿನ್​ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 33 ರನ್​ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ರಿಂಕು ಸಿಂಗ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

2 / 5
5ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಚೊಚ್ಚಲ ಇನಿಂಗ್ಸ್ ಆಡಿದ ರಿಂಕು ಸಿಂಗ್ 3 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಕೇವಲ 21 ಎಸೆತಗಳಲ್ಲಿ 38 ರನ್​ ಚಚ್ಚಿದ್ದರು. ಈ ಬಿರುಸಿನ ಬ್ಯಾಟಿಂಗ್​ನೊಂದಿಗೆ ಯುವ ಎಡಗೈ ದಾಂಡಿಗ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 5
ಈ ಪಂದ್ಯದಲ್ಲಿ ರಿಂಕು ಸಿಂಗ್​ 180.95 ಸ್ಟ್ರೈಕ್​ ರೇಟ್​ನಲ್ಲಿ ಬ್ಯಾಟ್ ಬೀಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಪರ ಮೊದಲ ಇನಿಂಗ್ಸ್​ನಲ್ಲೇ ಅತ್ಯುತ್ತಮ ಸ್ಟ್ರೇಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ಆಟಗಾರ ಎನಿಸಿಕೊಂಡಿದ್ದಾರೆ.

4 / 5
ಇದಕ್ಕೂ ಮುನ್ನ ಈ ದಾಖಲೆ ತಿಲಕ್ ವರ್ಮಾ ಹೆಸರಿನಲ್ಲಿತ್ತು. ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಪಂದ್ಯವಾಡಿದ್ದ ತಿಲಕ್ ವರ್ಮಾ 177.27 ಸ್ಟ್ರೈಕ್​ ರೇಟ್​ನಲ್ಲಿ 39 ರನ್ ಬಾರಿಸಿ ದಾಖಲೆ ನಿರ್ಮಿಸಿದ್ದರು.

5 / 5
ಇದೀಗ 180.95 ಸ್ಟ್ರೈಕ್​ ರೇಟ್​ನಲ್ಲಿ 38 ರನ್​ ಸಿಡಿಸುವ ಮೂಲಕ ರಿಂಕು ಸಿಂಗ್ ಈ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ಈ ಭರ್ಜರಿ ಪ್ರದರ್ಶನಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಕೂಡ ಪಡೆದಿದ್ದಾರೆ.