AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಸಿಕ್ಸರ್‌ಗಳ ಶತಕ; ವಿಶ್ವ ದಾಖಲೆ ನಿರ್ಮಿಸಿದ ರಿಷಭ್ ಪಂತ್

Rishabh Pant 100 sixes: ಗಾಲೆ ಟೆಸ್ಟ್‌ನಲ್ಲಿ ರಿಷಭ್ ಪಂತ್ 100 ಸಿಕ್ಸರ್‌ಗಳ ದಾಖಲೆ ಬರೆದಿದ್ದಾರೆ. ಕೇವಲ 89 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ತಲುಪುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 100 ಸಿಕ್ಸರ್‌ ಬಾರಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎನಿಸಿದ್ದಾರೆ. ಇದು ಆಡಮ್ ಗಿಲ್‌ಕ್ರಿಸ್ಟ್ ದಾಖಲೆಯನ್ನು ಮುರಿದಿದೆ. ಪಂತ್ ಈ ಸಾಧನೆ ಮಾಡಿದ ಮೊದಲ ಭಾರತೀಯ ಕೂಡ ಹೌದು, ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಮೀರಿಸಿದ್ದಾರೆ.

ಪೃಥ್ವಿಶಂಕರ
|

Updated on: Aug 18, 2026 | 4:40 PM

Share
ಗಾಲೆ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ 193 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಶ್ರೀಲಂಕಾ ತಂಡಕ್ಕೆ 372 ರನ್​ಗಳ ಗುರಿ ನೀಡಿದೆ. ಇನ್ನು ಎರಡನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ಪರ ರಿಷಭ್ ಪಂತ್ ಅತ್ಯಧಿಕ 66 ರನ್​ಗಳ ಇನ್ನಿಂಗ್ಸ್ ಆಡಿದರು. ಅವರ ಈ ಇನ್ನಿಂಗ್ಸ್​ನಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್‌ಗಳು ಸೇರಿದ್ದವು(PC-PTI).

1 / 5
ಈ ಎರಡು ಸಿಕ್ಸರ್‌ಗಳೊಂದಿಗೆ ರಿಷಭ್ ಪಂತ್,  ಟೆಸ್ಟ್ ಕ್ರಿಕೆಟ್‌ನಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಹಾಗೆಯೇ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 100 ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ನಿರ್ಮಿಸಿದರು(PC-PTI).

2 / 5
ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ ಮತ್ತು ಅತಿ ಕಡಿಮೆ ಇನ್ನಿಂಗ್ಸ್​ಗಳಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವ ದಾಖಲೆ ಇದೀಗ ರಿಷಭ್ ಪಂತ್ ಪಾಲಾಗಿದೆ. ಪಂತ್ ಕೇವಲ 89 ಇನ್ನಿಂಗ್ಸ್​ ಮತ್ತು 4,918 ಎಸೆತಗಳಲ್ಲಿ ಸಿಕ್ಸರ್​ಗಳ ಶತಕ ಪೂರೈಸಿದ್ದಾರೆ(PC-PTI).

3 / 5
ಇದರೊಂದಿಗೆ ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 100 ಸಿಕ್ಸರ್‌ಗಳನ್ನು ಸಿಡಿಸಿದ್ದ ಆಡಮ್ ಗಿಲ್‌ಕ್ರಿಸ್ಟ್ ದಾಖಲೆಯನ್ನು ಮುರಿದರು. ಈ ಮೈಲಿಗಲ್ಲು ತಲುಪಲು ಗಿಲ್‌ಕ್ರಿಸ್ಟ್ 132 ಇನ್ನಿಂಗ್ಸ್‌ಗಳು ಮತ್ತು 6,578 ಎಸೆತಗಳನ್ನು ತೆಗೆದುಕೊಂಡಿದ್ದರು(PC-PTI).

4 / 5
ಹಾಗೆಯೇ ಟೆಸ್ಟ್ ಕ್ರಿಕೆಟ್‌ನಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ರಿಷಭ್ ಪಂತ್ ಪಾತ್ರರಾಗಿದ್ದಾರೆ. ಪಂತ್‌ಗಿಂತ ಮೊದಲು, ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ವೀರೇಂದ್ರ ಸೆಹ್ವಾಗ್ ಅವರ (91 ಸಿಕ್ಸರ್‌) ಹೆಸರಿನಲ್ಲಿತ್ತು(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ

ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ

ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ

ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ

ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​

ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!

ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!

ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ