
ಗಾಲೆ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾ 193 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕ ಶ್ರೀಲಂಕಾ ತಂಡಕ್ಕೆ 372 ರನ್ಗಳ ಗುರಿ ನೀಡಿದೆ. ಇನ್ನು ಎರಡನೇ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾ ಪರ ರಿಷಭ್ ಪಂತ್ ಅತ್ಯಧಿಕ 66 ರನ್ಗಳ ಇನ್ನಿಂಗ್ಸ್ ಆಡಿದರು. ಅವರ ಈ ಇನ್ನಿಂಗ್ಸ್ನಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್‌ಗಳು ಸೇರಿದ್ದವು(PC-PTI).

ಈ ಎರಡು ಸಿಕ್ಸರ್‌ಗಳೊಂದಿಗೆ ರಿಷಭ್ ಪಂತ್, ಟೆಸ್ಟ್ ಕ್ರಿಕೆಟ್‌ನಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಹಾಗೆಯೇ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 100 ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ನಿರ್ಮಿಸಿದರು(PC-PTI).

ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ ಮತ್ತು ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವ ದಾಖಲೆ ಇದೀಗ ರಿಷಭ್ ಪಂತ್ ಪಾಲಾಗಿದೆ. ಪಂತ್ ಕೇವಲ 89 ಇನ್ನಿಂಗ್ಸ್ ಮತ್ತು 4,918 ಎಸೆತಗಳಲ್ಲಿ ಸಿಕ್ಸರ್‌ಗಳ ಶತಕ ಪೂರೈಸಿದ್ದಾರೆ(PC-PTI).

ಇದರೊಂದಿಗೆ ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 100 ಸಿಕ್ಸರ್‌ಗಳನ್ನು ಸಿಡಿಸಿದ್ದ ಆಡಮ್ ಗಿಲ್‌ಕ್ರಿಸ್ಟ್ ದಾಖಲೆಯನ್ನು ಮುರಿದರು. ಈ ಮೈಲಿಗಲ್ಲು ತಲುಪಲು ಗಿಲ್‌ಕ್ರಿಸ್ಟ್ 132 ಇನ್ನಿಂಗ್ಸ್‌ಗಳು ಮತ್ತು 6,578 ಎಸೆತಗಳನ್ನು ತೆಗೆದುಕೊಂಡಿದ್ದರು(PC-PTI).

ಹಾಗೆಯೇ ಟೆಸ್ಟ್ ಕ್ರಿಕೆಟ್‌ನಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ರಿಷಭ್ ಪಂತ್ ಪಾತ್ರರಾಗಿದ್ದಾರೆ. ಪಂತ್‌ಗಿಂತ ಮೊದಲು, ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ವೀರೇಂದ್ರ ಸೆಹ್ವಾಗ್ ಅವರ (91 ಸಿಕ್ಸರ್) ಹೆಸರಿನಲ್ಲಿತ್ತು(PC-PTI).