ರಿಷಭ್ ಪಂತ್ 2018 ರಲ್ಲಿ ಇಂಗ್ಲೆಂಡ್ ವಿರುದ್ದ ಓವಲ್ ಮೈದಾನದಲ್ಲಿ 114, 2019 ರಲ್ಲಿ ಆಸ್ಟ್ರೇಲಿಯಾ ವಿರುದ್ದ ಸಿಡ್ನಿಯಲ್ಲಿ ಅಜೇಯ 159 ರನ್ ಬಾರಿಸಿದ್ದರು. ಇದೀಗ ಸೌತ್ ಆಫ್ರಿಕಾ ವಿರುದ್ದ ಕೇಪ್ಟೌನ್ನಲ್ಲಿ ಅಜೇಯ ಶತಕ ಬಾರಿಸುವ ಮೂಲಕ ಏಷ್ಯಾದ ಹೊರಗೆ ಮೂರು ಸೆಂಚುರಿ ಸಿಡಿಸಿದ ಟೀಮ್ ಇಂಡಿಯಾದ ಮೊದಲ ವಿಕೆಟ್ ಕೀಪರ್ ಎಂಬ ದಾಖಲೆ ಬರೆದರು.