
ಲೀಡ್ಸ್ ಟೆಸ್ಟ್ ಪಂದ್ಯದ ಮೂರನೇ ದಿನದಂದು ಇಂಗ್ಲೆಂಡ್‌ನ ಶತಕವೀರ ಓಲಿ ಪೋಪ್ ಕ್ಯಾಚ್ ಹಿಡಿಯುವ ಮೂಲಕ ಭಾರತೀಯ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಹೊಸ ದಾಖಲೆ ಬರೆದಿದ್ದಾರೆ. ತಮ್ಮ 44 ನೇ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿರುವ ಪಂತ್, ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಸೈಯದ್ ಕಿರ್ಮಾನಿ ಅವರ ನಂತರದ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ರಿಷಭ್ ಪಂತ್ 44 ಟೆಸ್ಟ್ ಪಂದ್ಯಗಳಲ್ಲಿ 150 ಕ್ಯಾಚ್‌ಗಳನ್ನು ಪೂರೈಸಿದ ಮೂರನೇ ಭಾರತೀಯ ವಿಕೆಟ್‌ಕೀಪರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಲ್ಲದೆ, ಅವರು 15 ಸ್ಟಂಪಿಂಗ್‌ಗಳನ್ನು ಸಹ ಮಾಡಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಮತ್ತು ಸೈಯದ್ ಕಿರ್ಮಾನಿ ಟೆಸ್ಟ್ ಪಂದ್ಯಗಳಲ್ಲಿ 150 ಕ್ಕೂ ಹೆಚ್ಚು ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಆದಾಗ್ಯೂ, ಅವರು ಪಂತ್‌ಗಿಂತ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.

ಇನ್ನು ಬ್ಯಾಟಿಂಗ್ ವಿಚಾರದಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ರಿಷಭ್ ಪಂತ್ ಇದುವರೆಗೆ ಆಡಿರುವ 44 ಟೆಸ್ಟ್ ಪಂದ್ಯಗಳ 76 ಇನ್ನಿಂಗ್ಸ್‌ಗಳಲ್ಲಿ ಸುಮಾರು 44 ಸರಾಸರಿಯಲ್ಲಿ 3000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇದರಲ್ಲಿ 7 ಶತಕಗಳು ಮತ್ತು 15 ಅರ್ಧಶತಕಗಳು ಸೇರಿವೆ. ಅಲ್ಲದೆ ಪಂತ್ಮ ಶತಕಗಳ ವಿಷಯದಲ್ಲಿ ಧೋನಿಯನ್ನು ಹಿಂದಿಕ್ಕಿದ್ದಾರೆ.

ಭಾರತ ತಂಡದ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ 90 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 256 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದಲ್ಲದೆ, ಅವರು 38 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಧೋನಿ 144 ಇನ್ನಿಂಗ್ಸ್‌ಗಳಲ್ಲಿ 38.09 ಸರಾಸರಿಯಲ್ಲಿ 4876 ರನ್ ಗಳಿಸಿದ್ದು, ಇದರಲ್ಲಿ 6 ಶತಕಗಳು ಮತ್ತು 33 ಅರ್ಧಶತಕಗಳು ಸೇರಿವೆ.

ಭಾರತ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸೈಯದ್ ಕಿರ್ಮಾನಿ 88 ಟೆಸ್ಟ್ ಪಂದ್ಯಗಳಲ್ಲಿ 160 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದಲ್ಲದೆ, ಅವರು 38 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಕಿರ್ಮಾನಿ ಟೆಸ್ಟ್ ಪಂದ್ಯಗಳಲ್ಲಿ 2759 ರನ್ ಗಳಿಸಿದ್ದು, ಇದರಲ್ಲಿ ಎರಡು ಶತಕಗಳು ಸೇರಿವೆ.