
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿ ಅಕ್ಟೋಬರ್ 19 ರಿಂದ ಶುರುವಾಗಲಿದೆ. ಕಾಂಗರೂನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 8 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಗೆ ಟೀಮ್ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗುವುದು ಖಚಿತವಾಗಿದೆ.

ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಗುಳಿಯಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಗಾಯಗೊಂಡಿದ್ದ ಪಂತ್ ಇನ್ನೂ ಸಹ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಅಲಭ್ಯರಾಗಿದ್ದಾರೆ.

ಇನ್ನು ಭಾರತ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಆಸೀಸ್ ಸರಣಿಗೆ ಅಲಭ್ಯರಾಗಿದ್ದಾರೆ. ಏಷ್ಯಾಕಪ್ನ ಸೂಪರ್-4 ಹಂತದ ಕೊನೆಯ ಪಂದ್ಯದ ವೇಳೆ ಪಾಂಡ್ಯ ಸ್ನಾಯು ಸೆಳೆತದ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಅವರು ಕೂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ.

ಇತ್ತ ರಿಷಭ್ ಪಂತ್ ಬದಲಿಗೆ ಹೆಚ್ಚುವರಿ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ. ಹಾಗೆಯೇ ಹಾರ್ದಿಕ್ ಪಾಂಡ್ಯ ಸ್ಥಾನದಲ್ಲಿ ಯುವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿಗೆ ಚಾನ್ಸ್ ಸಿಗಲಿದೆ ಎಂದು ತಿಳಿದು ಬಂದಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಾಗುತ್ತದೆ. ಇದಾದ ಬಳಿಕ ಐದು ಪಂದ್ಯಗಳ ಟಿ20 ಸರಣಿ ಶುರುವಾಗಲಿದೆ. ಟಿ20 ಸರಣಿಯು ಅಕ್ಟೋಬರ್ 29 ರಿಂದ ಆರಂಭವಾಗಲಿದೆ.