IND vs ENG: ಗಾಯದ ನಡುವೆಯೂ ಲಾರ್ಡ್ಸ್‌ ಅಂಗಳಿಕ್ಕಿಳಿದು ಧೋನಿ ದಾಖಲೆ ಮುರಿದ ಪಂತ್

Updated on: Jul 12, 2025 | 6:11 PM

Rishabh Pant Surpasses Dhoni's England Test Record: ಲಾರ್ಡ್ಸ್‌ನಲ್ಲಿ ಬೆರಳಿಗೆ ಗಾಯವಾಗಿ ಮೈದಾನದಿಂದ ಹೊರನಡೆದಿದ್ದ ರಿಷಭ್ ಪಂತ್, ಬ್ಯಾಟಿಂಗ್​ನಲ್ಲಿ ಅರ್ಧಶತಕ ಬಾರಿಸಿದರು. ಈ ಮೂಲಕ ಮಹೇಂದ್ರ ಸಿಂಗ್ ಧೋನಿಯ ಇಂಗ್ಲೆಂಡ್‌ನಲ್ಲಿನ ಟೆಸ್ಟ್ ದಾಖಲೆಯನ್ನು ಮುರಿದ ಪಂತ್, ಎರಡು ಬಾರಿ ಸೆನಾ ದೇಶಗಳಲ್ಲಿ 350 ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ ಏಕೈಕ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

1 / 6
ಲಾರ್ಡ್ಸ್ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ವಿಕಿಟ್ ಕೀಪಿಂಗ್ ಮಾಡುವ ವೇಳೆ ಬೆರಳಿನ ಗಾಯಕ್ಕೆ ತುತ್ತಾಗಿ ಮೈದಾನದಿಂದ ಹೊರನಡೆದಿದ್ದ ರಿಷಭ್ ಪಂತ್, ಈ ಪಂದ್ಯದಲ್ಲಿ ಆಡುತ್ತಾರೋ ಇಲ್ಲವೋ ಎಂಬುದರ ಬಗ್ಗೆ ಅನುಮಾನವಿತ್ತು. ಆದಾಗ್ಯೂ ಭಾರತದ ಇನ್ನಿಂಗ್ಸ್ ಆರಂಭವಾದ ಬಳಿಕ ಎಂದಿನಂತೆ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದಿದ್ದ ಪಂತ್ ಅರ್ಧಶತಕದ ಇನ್ನಿಂಗ್ಸ್ ಆಡಿದರು.

2 / 6
107 ರನ್​ಗಳಿಗೆ ಟೀಂ ಇಂಡಿಯಾ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಕ್ರೀಸ್​ಗಿಳಿದ ರಿಷಭ್ ಪಂತ್, ಎಂದಿನಂತೆ ತಮ್ಮ ಹೊಡಿಬಡಿ ಆಟದ ಮೂಲಕ ಆಂಗ್ಲ ಬೌಲರ್​ಗಳ ನಿದ್ದೆಗೆಡಿಸಿದರು. ಇದರ ಜೊತೆಗೆ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರ ದಾಖಲೆಯನ್ನು ಮುರಿದರು.

3 / 6
ವಾಸ್ತವವಾಗಗಿ 2014 ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಮಹೇಂದ್ರ ಸಿಂಗ್ ಧೋನಿ 349 ರನ್ ಗಳಿಸಿದ್ದರು. ಇದೀಗ ಮೂರನೇ ಟೆಸ್ಟ್ ಪಂದ್ಯದಲ್ಲೇ ರಿಷಭ್ ಪಂತ್ ಧೋನಿಯ ಈ ದಾಖಲೆಯನ್ನು ಮುರಿದಿದ್ದಾರೆ. ಅಷ್ಟೇ ಅಲ್ಲ, ಅವರು ಎರಡನೇ ಬಾರಿಗೆ ಸೆನಾ (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್, ಆಸ್ಟ್ರೇಲಿಯಾ) ದೇಶಗಳಲ್ಲಿ 350 ಕ್ಕೂ ಹೆಚ್ಚು ರನ್ ಕಲೆಹಾಕಿದ್ದಾರೆ.

4 / 6
ಇದಕ್ಕೂ ಮೊದಲು ಅಂದರೆ 2018 ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ರಿಷಭ್ ಪಂತ್ 350 ರನ್ ಗಳಿಸಿದ್ದರು. ಇದೀಗ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ್ದ ರಿಷಭ್ ಪಂತ್, ಮೊದಲ ಇನ್ನಿಂಗ್ಸ್‌ನಲ್ಲಿ 134 ರನ್ ಗಳಿಸಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ 118 ರನ್‌ಗಳ ಕೊಡುಗೆ ನೀಡಿದ್ದರು.

5 / 6
ಎರಡನೇ ಟೆಸ್ಟ್ ಪಂದ್ಯದ ಬಗ್ಗೆ ಹೇಳುವುದಾದರೆ, ಮೊದಲ ಇನ್ನಿಂಗ್ಸ್‌ನಲ್ಲಿ 25 ರನ್ ಗಳಿಸಿದ್ದ ಪಂತ್, ಎರಡನೇ ಇನ್ನಿಂಗ್ಸ್‌ನಲ್ಲಿ 65 ರನ್‌ಗಳ ಕೊಡುಗೆ ನೀಡಿದರು. ಇದರಿಂದಾಗಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಗೆದ್ದು ಬೀಗಿತ್ತು. ಇದೀಗ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 74 ರನ್ ಬಾರಿಸಿದ ಪಂತ್, ಧೋನಿಯನ್ನು ಹಿಂದಿಕ್ಕಿದ್ದಾರೆ. ಇದಕ್ಕೂ ಮೊದಲು, ರಿಷಭ್ ಪಂತ್ 2021 ರಲ್ಲಿ ಇಂಗ್ಲೆಂಡ್ ವಿರುದ್ಧದ ಒಂದೇ ಟೆಸ್ಟ್ ಸರಣಿಯಲ್ಲಿ 349 ರನ್ ಗಳಿಸಿದ್ದರು.

6 / 6
ರಿಷಭ್ ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಇಲ್ಲಿಯವರೆಗೆ, ಅವರು ಟೀಂ ಇಂಡಿಯಾ ಪರ 46 ಟೆಸ್ಟ್ ಪಂದ್ಯಗಳಲ್ಲಿ 44.71 ಸರಾಸರಿಯಲ್ಲಿ 3309 ರನ್ ಗಳಿಸಿದ್ದಾರೆ. ಇದರಲ್ಲಿ 16 ಅರ್ಧಶತಕಗಳು ಮತ್ತು 8 ಶತಕಗಳಳು ಸೇರಿವೆ. ಈ ಸ್ವರೂಪದಲ್ಲಿ ಅವರ ಅತ್ಯುತ್ತಮ ಸ್ಕೋರ್ ಔಟಾಗದೆ 159 ರನ್‌ ಆಗಿದೆ.