IND vs BAN: 4000 ರನ್; ಸಿಕ್ಸರ್​ಗಳ ಅರ್ಧಶತಕ ಪೂರೈಸಿದ ರಿಷಬ್ ಪಂತ್..!

Edited By:

Updated on: Dec 14, 2022 | 1:32 PM

Rishabh Pant: ಭಾರತದ ಪರ ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 50 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ವಿಕೆಟ್‌ಕೀಪರ್ ಎಂಬ ಹೆಗ್ಗಳಿಕೆಗೆ ಪಂತ್ ಪಾತ್ರರಾಗಿದ್ದಾರೆ.

1 / 6
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ನಿರಾಸೆ ಮೂಡಿಸಿದ್ದಾರೆ. ಏಕದಿನ ಸರಣಿಯಲ್ಲಿ ಸೋತಿರುವ ಟೀಂ ಇಂಡಿಯಾ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲೂ ಕಳಪೆ ಪ್ರದರ್ಶನ ನೀಡಿದೆ. ಅದರಲ್ಲೂ ಶುಭಮನ್ ಗಿಲ್, ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಬೇಗನೇ ಪೆವಿಲಿಯನ್​ಗೆ ಮರಳಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ನಿರಾಸೆ ಮೂಡಿಸಿದ್ದಾರೆ. ಏಕದಿನ ಸರಣಿಯಲ್ಲಿ ಸೋತಿರುವ ಟೀಂ ಇಂಡಿಯಾ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲೂ ಕಳಪೆ ಪ್ರದರ್ಶನ ನೀಡಿದೆ. ಅದರಲ್ಲೂ ಶುಭಮನ್ ಗಿಲ್, ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಬೇಗನೇ ಪೆವಿಲಿಯನ್​ಗೆ ಮರಳಿದ್ದಾರೆ.

2 / 6

ಈ ಮೂವರ ವಿಕೆಟ್ ಬಳಿಕ ಮೈದಾನಕ್ಕೆ ಬಂದ ರಿಷಭ್ ಪಂತ್ ಕೊಹ್ಲಿ ವಿಕೆಟ್ ಬಳಿಕ ನಾಲ್ಕನೇ ವಿಕೆಟ್​ಗೆ ಪೂಜಾರ ಜೊತೆಗೂಡಿದ ಪಂತ್ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ತಂಡದ ಮೊತ್ತವನ್ನು ನೂರರ ಗಡಿ ದಾಟಿಸಿದರು. ಆದರೆ ಮತ್ತೊಮ್ಮೆ ಬಿಗ್ ಇನ್ನಿಂಗ್ಸ್ ಆಡುವಲ್ಲಿ ಎಡವಿದರು. ಈ ಪಂದ್ಯದಲ್ಲೂ ಪಂತ್ ತಮ್ಮ ಬ್ಯಾಡ್ ಶಾಟ್ ಸೆಲೆಕ್ಷನ್​ನಿಂದಾಗಿ ತಮ್ಮ ವಿಕೆಟ್ ಕಳೆದುಕೊಳ್ಳಬೇಕಾಯಿತು.

3 / 6

ಚಟ್ಟೋಗ್ರಾಮ್‌ನಲ್ಲಿ ತಮ್ಮದೇ ಶೈಲಿಯಲ್ಲಿ ಇನ್ನಿಂಗ್ಸ್ ಆರಂಭಿಸಿದ ರಿಷಬ್ ಪಂತ್, ಬಂದ ಕೂಡಲೇ ಬೌಂಡರಿ ಕಲೆಹಾಕಲು ಆರಂಭಿಸಿದರು. ಪಂತ್ ತಮ್ಮ ಇನ್ನಿಂಗ್ಸ್​ನಲ್ಲಿ 6 ಬೌಂಡರಿಗಳು ಮತ್ತು 2 ಸಿಕ್ಸರ್‌ಗಳನ್ನು ಹೊಡೆದಿದ್ದಲ್ಲದೆ, 100ಕ್ಕೂ ಹೆಚ್ಚು ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದರು.

4 / 6

ಈ ಪಂದ್ಯದಲ್ಲಿ ಪಂತ್ ಅರ್ಧಶತಕವನ್ನು ಗಳಿಸದೇ ಇರಬಹುದು. ಆದರೆ 46 ರನ್‌ಗಳ ಈ ಇನ್ನಿಂಗ್ಸ್‌ನಲ್ಲಿ 2 ವಿಶೇಷ ಮೈಲಿಗಲ್ಲುಗಳನ್ನು ಸಾಧಿಸಿದರು. ಮೊದಲನೆಯದಾಗಿ, ಪಂತ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ 4000 ರನ್‌ಗಳನ್ನು ಪೂರ್ಣಗೊಳಿಸಿದರು.

5 / 6

ಎರಡನೇಯದಾಗಿ ಪಂತ್, ಟೆಸ್ಟ್ ಕ್ರಿಕೆಟ್‌ನಲ್ಲಿ 50 ಸಿಕ್ಸರ್‌ಗಳನ್ನು ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭಾರತದ ಪರ ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 50 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ವಿಕೆಟ್‌ಕೀಪರ್ ಎಂಬ ಹೆಗ್ಗಳಿಕೆಗೆ ಪಂತ್ ಪಾತ್ರರಾಗಿದ್ದಾರೆ.

6 / 6

ಅಲ್ಲದೆ ಟೀಂ ಇಂಡಿಯಾ ಪರ ಅತಿ ಕಡಿಮೆ ಇನ್ನಿಂಗ್ಸ್​ಗಳಲ್ಲಿ 50 ಸಿಕ್ಸರ್ ಹೊಡೆದವರ ಪಟ್ಟಿಯಲ್ಲಿ ಪಂತ್ ಎರಡನೇ ಸ್ಥಾನದಲ್ಲಿದ್ದಾರೆ. ಪಂತ್ ಒಟ್ಟು 54 ಇನ್ನಿಂಗ್ಸ್‌ಗಳಲ್ಲಿ 50 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದರೆ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 51 ಇನ್ನಿಂಗ್ಸ್​ಗಳಲ್ಲಿ ಸಿಕ್ಸರ್​ಗಳ ಅರ್ಧಶತಕ ಪೂರೈಸಿದ್ದಾರೆ.

Published On - 1:32 pm, Wed, 14 December 22

Loading...
Unable to load recommendations.
Follow Us