- Kannada News Photo gallery Cricket photos Rishabh Pant has been injured in a serious car accident near his hometown Cricket News in Kannada
Rishabh Pant Car Accident: ಅಪಘಾತದಲ್ಲಿ ರಿಷಭ್ ಪಂತ್ಗೆ ಗಂಭೀರ ಗಾಯ: ಕಾರು ಸಂಪೂರ್ಣ ಭಸ್ಮ: ಫೋಟೋ
Rishabh Pant: ಟೀಮ್ ಇಂಡಿಯಾ ಪ್ರಮುಖ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿಯಲ್ಲಿ ಮನೆಗೆ ನಿರ್ಗಮಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಸಂಪೂರ್ಣ ಭಸ್ಮವಾಗಿದೆ.
Updated on:Dec 30, 2022 | 10:12 AM

ಟೀಮ್ ಇಂಡಿಯಾ ಪ್ರಮುಖ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿಯಲ್ಲಿ ಮನೆಗೆ ನಿರ್ಗಮಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಸಂಪೂರ್ಣ ಭಸ್ಮವಾಗಿದೆ.

ರಿಷಭ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯವಾಗಿದೆ. ಮಾಹಿತಿ ಪಡೆದ ಪೊಲೀಸ್ ವರಿಷ್ಠಾಧಿಕಾರಿ ದೇಹತ್ ಸ್ವಪ್ನಾ ಕಿಶೋರ್ ಸಿಂಗ್ ಅವರು ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ರಿಷಭ್ ಪಂತ್ ಅವರ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ರವಾನಿಸಲಾಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ರಿಷಬ್ ಅವರ ಕಾರು ರೇಲಿಂಗ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಬಹಳ ಕಷ್ಟಪಟ್ಟು ಬೆಂಕಿಯನ್ನು ಹತೋಟಿಗೆ ತರಲಾಯಿತು ಎಂದು ಹೇಳಿದ್ದಾರೆ. ಪಂತ್ ತಮ್ಮ BMW ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.

ಅಪಘಾತದ ಸಮಯದಲ್ಲಿ ರಿಷಭ್ ಪಂತ್ ಕಾರಿನಲ್ಲಿ ಒಬ್ಬರೇ ಇದ್ದರು ಎಂದು ಹೇಳಲಾಗಿದೆ. ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಪ್ರಕಾರ, ಉರಿಯುತ್ತಿರುವ ಕಾರಿನಿಂದ ಹೊರಬರಲು ಅವರು ವಿಂಡ್‌ಸ್ಕ್ರೀನ್ ಅನ್ನು ಒಡೆದಿದ್ದಾರೆ. ಇದರ ಜೊತೆಗೆ ಅವರು ತಲೆ, ಮೊಣಕಾಲು ಮತ್ತು ಮೊಣಕಾಲಿಗೆ ಗಾಯಗಳಾಗಿವೆ.

ಕಾರು ವೇಗವಾಗಿದ್ದ ಕಾರಣ ನಿಯಂತ್ರಣಕ್ಕೆ ಸಿಗದೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ. ದಿಲ್ಲಿಯಿಂದ ಉತ್ತರಾಖಂಡಕ್ಕೆ ಮರಳುತ್ತಿದ್ದ ವೇಳೆ ಹಮ್ಮಾದ್‌ಪುರ್ ಝಾಲ್ ಸಮೀಪ ಈ ದುರ್ಘಟನೆ ನಡೆದಿದೆ.

ರಿಷಭ್ ಪಂತ್ ಅವರ ಕಾರು ಸುಟ್ಟಿರುವ ಚಿತ್ರಗಳು ಹಾಗೂ ಅವರು ಆಸ್ಪತ್ರೆಗೆ ದಾಖಲಾಗಿರುವ ಫೋಟೊಗಳು ಟ್ವಿಟರ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ.

ಜನವರಿಯಲ್ಲಿ ಭಾರತ ಕ್ರಿಕೆಟ್ ತಂಡ ಶ್ರೀಲಂಕಾ ವಿರುದ್ಧ ಏಕದಿನ ಮತ್ತು ಟಿ20 ಸರಣಿಯನ್ನು ಆಡಲಿದೆ. ಇತ್ತೀಚೆಗಷ್ಟೆ ಬಿಸಿಸಿಐ ಈ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟ ಮಾಡಿತ್ತು. ಇದರಲ್ಲಿ ರಿಷಭ್ ಪಂತ್ ಹೆಸರನ್ನು ಕೈಬಿಡಲಾಗಿತ್ತು.

ಪಂತ್ ಸದ್ಯ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ಪರ ವಿನ್ನರ್ ಆಗಿದ್ದಾರೆ ಆದರೆ ವೈಟ್-ಬಾಲ್ ಸ್ವರೂಪದಲ್ಲಿ ನಿರೀಕ್ಷೆಗಳಿಗೆ ತಕ್ಕಂತೆ ಪ್ರದರ್ಶನ ನೀಡುತ್ತಿಲ್ಲ.
Published On - 10:06 am, Fri, 30 December 22
