Rishabh Pant Car Accident: ಅಪಘಾತದಲ್ಲಿ ರಿಷಭ್ ಪಂತ್​ಗೆ ಗಂಭೀರ ಗಾಯ: ಕಾರು ಸಂಪೂರ್ಣ ಭಸ್ಮ: ಫೋಟೋ

Edited By:

Updated on: Dec 30, 2022 | 10:12 AM

Rishabh Pant: ಟೀಮ್ ಇಂಡಿಯಾ ಪ್ರಮುಖ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಅವರ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿಯಲ್ಲಿ ಮನೆಗೆ ನಿರ್ಗಮಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಸಂಪೂರ್ಣ ಭಸ್ಮವಾಗಿದೆ.

1 / 8
ಟೀಮ್ ಇಂಡಿಯಾ ಪ್ರಮುಖ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಅವರ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿಯಲ್ಲಿ ಮನೆಗೆ ನಿರ್ಗಮಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಸಂಪೂರ್ಣ ಭಸ್ಮವಾಗಿದೆ.

ಟೀಮ್ ಇಂಡಿಯಾ ಪ್ರಮುಖ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಅವರ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿಯಲ್ಲಿ ಮನೆಗೆ ನಿರ್ಗಮಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಸಂಪೂರ್ಣ ಭಸ್ಮವಾಗಿದೆ.

2 / 8

ರಿಷಭ್​ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯವಾಗಿದೆ. ಮಾಹಿತಿ ಪಡೆದ ಪೊಲೀಸ್ ವರಿಷ್ಠಾಧಿಕಾರಿ ದೇಹತ್ ಸ್ವಪ್ನಾ ಕಿಶೋರ್ ಸಿಂಗ್ ಅವರು ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ರಿಷಭ್​ ಪಂತ್ ಅವರ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ರವಾನಿಸಲಾಗಿದೆ.

3 / 8

ಪ್ರತ್ಯಕ್ಷದರ್ಶಿಗಳ ಪ್ರಕಾರ, ರಿಷಬ್ ಅವರ ಕಾರು ರೇಲಿಂಗ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಬಹಳ ಕಷ್ಟಪಟ್ಟು ಬೆಂಕಿಯನ್ನು ಹತೋಟಿಗೆ ತರಲಾಯಿತು ಎಂದು ಹೇಳಿದ್ದಾರೆ. ಪಂತ್ ತಮ್ಮ BMW ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.

4 / 8

ಅಪಘಾತದ ಸಮಯದಲ್ಲಿ ರಿಷಭ್ ಪಂತ್ ಕಾರಿನಲ್ಲಿ ಒಬ್ಬರೇ ಇದ್ದರು ಎಂದು ಹೇಳಲಾಗಿದೆ. ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಪ್ರಕಾರ, ಉರಿಯುತ್ತಿರುವ ಕಾರಿನಿಂದ ಹೊರಬರಲು ಅವರು ವಿಂಡ್‌ಸ್ಕ್ರೀನ್ ಅನ್ನು ಒಡೆದಿದ್ದಾರೆ. ಇದರ ಜೊತೆಗೆ ಅವರು ತಲೆ, ಮೊಣಕಾಲು ಮತ್ತು ಮೊಣಕಾಲಿಗೆ ಗಾಯಗಳಾಗಿವೆ.

5 / 8

ಕಾರು ವೇಗವಾಗಿದ್ದ ಕಾರಣ ನಿಯಂತ್ರಣಕ್ಕೆ ಸಿಗದೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ. ದಿಲ್ಲಿಯಿಂದ ಉತ್ತರಾಖಂಡಕ್ಕೆ ಮರಳುತ್ತಿದ್ದ ವೇಳೆ ಹಮ್ಮಾದ್‌ಪುರ್‌ ಝಾಲ್‌ ಸಮೀಪ ಈ ದುರ್ಘಟನೆ ನಡೆದಿದೆ.

6 / 8

ರಿಷಭ್‌ ಪಂತ್‌ ಅವರ ಕಾರು ಸುಟ್ಟಿರುವ ಚಿತ್ರಗಳು ಹಾಗೂ ಅವರು ಆಸ್ಪತ್ರೆಗೆ ದಾಖಲಾಗಿರುವ ಫೋಟೊಗಳು ಟ್ವಿಟರ್ ಸೇರಿದಂತೆ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ.

7 / 8

ಜನವರಿಯಲ್ಲಿ ಭಾರತ ಕ್ರಿಕೆಟ್ ತಂಡ ಶ್ರೀಲಂಕಾ ವಿರುದ್ಧ ಏಕದಿನ ಮತ್ತು ಟಿ20 ಸರಣಿಯನ್ನು ಆಡಲಿದೆ. ಇತ್ತೀಚೆಗಷ್ಟೆ ಬಿಸಿಸಿಐ ಈ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟ ಮಾಡಿತ್ತು. ಇದರಲ್ಲಿ ರಿಷಭ್ ಪಂತ್ ಹೆಸರನ್ನು ಕೈಬಿಡಲಾಗಿತ್ತು.

8 / 8

ಪಂತ್ ಸದ್ಯ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ಪರ ವಿನ್ನರ್ ಆಗಿದ್ದಾರೆ ಆದರೆ ವೈಟ್-ಬಾಲ್ ಸ್ವರೂಪದಲ್ಲಿ ನಿರೀಕ್ಷೆಗಳಿಗೆ ತಕ್ಕಂತೆ ಪ್ರದರ್ಶನ ನೀಡುತ್ತಿಲ್ಲ.

Published On - 10:06 am, Fri, 30 December 22

Loading...
Unable to load recommendations.
Follow Us