AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಪಂಟರ್ ಪಂತ್: ಸ್ಪೋಟಕ ಸೆಂಚುರಿ ಸಿಡಿಸಿದ ರಿಷಭ್

India vs Bangladesh 1st Test: ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದೆ. ಮೊದಲ ಇನಿಂಗ್ಸ್​ನಲ್ಲಿ ಭಾರತದ ಪರ ರವಿಚಂದ್ರನ್ ಅಶ್ವಿನ್ ಸೆಂಚುರಿ ಸಿಡಿಸಿದ್ದರು. ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಮೂರಂಕಿ ರನ್ ಕಲೆಹಾಕಿದ್ದಾರೆ.

TV9 Web
| Edited By: |

Updated on:Sep 21, 2024 | 12:47 PM

Share
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಂತ್ 123 ಎಸೆತಗಳಲ್ಲಿ ಶತಕ ಪೂರೈಸಿದರು.  ಈ ಶತಕದೊಂದಿಗೆ ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ವಿಕೆಟ್ ಕೀಪರ್​ಗಳ ಪಟ್ಟಿಯಲ್ಲಿ ರಿಷಭ್ ಪಂತ್ ಅಗ್ರಸ್ಥಾನಕ್ಕೇರಿದ್ದಾರೆ.

1 / 5
ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ಪರ 144 ಟೆಸ್ಟ್ ಇನಿಂಗ್ಸ್ ಆಡಿರುವ ಧೋನಿ ಕೇವಲ 6 ​ ಶತಕಗಳನ್ನು ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ರಿಷಭ್ ಪಂತ್ ಅಗ್ರಸ್ಥಾನಕ್ಕೇರಿದ್ದಾರೆ.

2 / 5
26 ವರ್ಷದ ರಿಷಭ್ ಪಂತ್ ಕೇವಲ 58 ಇನಿಂಗ್ಸ್​ಗಳಲ್ಲಿ ಒಟ್ಟು 6 ಟೆಸ್ಟ್ ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಟೆಸ್ಟ್ ಶತಕ ಸಿಡಿಸಿದ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ಇನ್ನು ಈ ಪಂದ್ಯದಲ್ಲಿ 128 ಎಸೆತಗಳನ್ನು ಎದುರಿಸಿದ ರಿಷಭ್ ಪಂತ್ 4 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 109 ರನ್ ಬಾರಿಸಿ ಮೆಹದಿ ಹಸನ್ ಮಿರಾಝ್ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದರು. ಈ ವೇಳೆಗೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 4 ವಿಕೆಟ್ ಕಳೆದುಕೊಂಡು 234 ರನ್​ ಕಲೆಹಾಕಿತ್ತು.

4 / 5
ಮೊದಲ ಇನಿಂಗ್ಸ್​ನ 227 ರನ್​ಗಳ ಮುನ್ನಡೆಯೊಂದಿಗೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ ಒಟ್ಟು 470+ ರನ್ ಕಲೆಹಾಕಿದ್ದು, ಈ ಮೂಲಕ ಮೂರನೇ ದಿನದಾಟದಲ್ಲೇ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ. ಅಲ್ಲದೆ ಮೂರನೇ ದಿನದಾಟದ ಅಂತ್ಯದವರೆಗೆ ಟೀಮ್ ಇಂಡಿಯಾ ಬ್ಯಾಟರ್​ಗಳು ಇನಿಂಗ್ಸ್ ಮುಂದುವರೆಸುವ ಸಾಧ್ಯತೆಯಿದೆ. ಈ ಮೂಲಕ ಬಾಂಗ್ಲಾದೇಶ್ ತಂಡಕ್ಕೆ ಕಠಿಣ ಗುರಿ ನೀಡಬಹುದು.

5 / 5

Published On - 12:28 pm, Sat, 21 September 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್