Rishabh Pant: ರಿಷಭ್ ಪಂತ್ ತೂಫಾನ್ ಬ್ಯಾಟಿಂಗ್: ಟೆಸ್ಟ್ನಲ್ಲಿ ಅತೀ ವೇಗದ ಅರ್ಧಶತಕ
Rishabh Pant: ಆಸ್ಟ್ರೇಲಿಯಾ ವಿರುದ್ಧ 5ನೇ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ಅಬ್ಬರಿಸಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಪಂತ್ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 33 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 61 ರನ್ ಬಾರಿಸಿ ಪ್ಯಾಟ್ ಕಮಿನ್ಸ್ಗೆ ವಿಕೆಟ್ ಒಪ್ಪಿಸಿದ್ದಾರೆ.