Rishabh Pant: ರಿಷಭ್ ಪಂತ್ ತೂಫಾನ್ ಬ್ಯಾಟಿಂಗ್: ಟೆಸ್ಟ್​ನಲ್ಲಿ ಅತೀ ವೇಗದ ಅರ್ಧಶತಕ

|

Updated on: Jan 04, 2025 | 11:54 AM

Rishabh Pant: ಆಸ್ಟ್ರೇಲಿಯಾ ವಿರುದ್ಧ 5ನೇ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ಅಬ್ಬರಿಸಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಪಂತ್ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 33 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 61 ರನ್ ಬಾರಿಸಿ ಪ್ಯಾಟ್ ಕಮಿನ್ಸ್​ಗೆ ವಿಕೆಟ್ ಒಪ್ಪಿಸಿದ್ದಾರೆ.

1 / 5
ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಎರಡು ಬಾರಿ ಅತೀ ವೇಗದ ಅರ್ಧಶತಕ ಬಾರಿಸಿದ ದಾಖಲೆ ರಿಷಭ್ ಪಂತ್ (Rishabh Pant) ಪಾಲಾಗಿದೆ. ಸಿಡ್ನಿಯಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ರಿಷಭ್ ಪಂತ್ ಈ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

2 / 5
ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​​ನಲ್ಲಿ ರಿಷಭ್ ಪಂತ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಮೊದಲ ಎಸೆತದಲ್ಲೇ ಸಿಕ್ಸ್ ಸಿಡಿಸುವ ಮೂಲಕ ರನ್​ ಖಾತೆ ತೆರೆದ ಪಂತ್ ಆಸ್ಟ್ರೇಲಿಯಾ ಬೌಲರ್​​ಗಳ ಬೆಂಡೆತ್ತಲಾರಂಭಿಸಿದರು.

3 / 5
ಪರಿಣಾಮ ಸಿಡ್ನಿ ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್​​ಗಳ ಸುರಿಮಳೆಯಾಯಿತು. ಈ ಮೂಲಕ ಕೇವಲ 29 ಎಸೆತಗಳಲ್ಲಿ ರಿಷಭ್ ಪಂತ್ ಅರ್ಧಶತಕ ಪೂರೈಸಿದರು. ಈ ಅರ್ಧಶತಕದೊಂದಿಗೆ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ 30 ಕ್ಕಿಂತ ಕಡಿಮೆ ಎಸೆತಗಳಲ್ಲಿ ಎರಡು ಬಾರಿ ಹಾಫ್ ಸೆಂಚುರಿ ಸಿಡಿಸಿದ ದಾಖಲೆ ಬರೆದರು.

4 / 5
ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ವೇಗದ ಅರ್ಧಶತಕ ಬಾರಿಸಿದ ದಾಖಲೆ ರಿಷಭ್ ಪಂತ್ ಹೆಸರಿನಲ್ಲಿದೆ. 2022 ರಲ್ಲಿ ಶ್ರೀಲಂಕಾ ವಿರುದ್ಧ 28 ಎಸೆತಗಳಲ್ಲಿ ಹಾಫ್ ಸೆಂಚುರಿ ಬಾರಿಸಿದ್ದರು. ಇದೀಗ ಆಸ್ಟ್ರೇಲಿಯಾ ವಿರುದ್ಧ 29 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದಾರೆ.

5 / 5
ಈ ಮೂಲಕ ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗದಲ್ಲಿ ಅರ್ಧಶತಕ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ರಿಷಭ್ ಪಂತ್ ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಮೂರನೇ ಸ್ಥಾನದಲ್ಲಿ 30 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಕಪಿಲ್ ದೇವ್ ಇದ್ದಾರೆ.