- Kannada News Photo gallery Cricket photos Rishabh Pant's Double Century Propels Him to ICC Ranking No. 6
ICC Ranking: ಟೆಸ್ಟ್ ಸರಣಿಯ ನಡುವೆ ರಿಷಭ್ ಪಂತ್ಗೆ ಭರ್ಜರಿ ಮುಂಬಡ್ತಿ ನೀಡಿದ ಐಸಿಸಿ
Rishabh Pant: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರಿಷಭ್ ಪಂತ್ ಅವರ ಅದ್ಭುತ ಪ್ರದರ್ಶನದಿಂದಾಗಿ ಅವರು ಐಸಿಸಿ ಬ್ಯಾಟ್ಸ್‌ಮನ್ ಶ್ರೇಯಾಂಕದಲ್ಲಿ 6ನೇ ಸ್ಥಾನಕ್ಕೇರಿದ್ದಾರೆ. ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ ಪಂತ್ 801 ರೇಟಿಂಗ್ ಪಾಯಿಂಟ್ ಹೊಂದಿದ್ದಾರೆ. ಟೆಂಬಾ ಬವುಮಾ ಅವರ ಗಾಯದಿಂದಾಗಿ ಪಂತ್ ಅವರಿಗೆ ಈ ಏರಿಕೆ ಸಾಧ್ಯವಾಗಿದೆ. ಉಳಿದಂತೆ ಇಂಗ್ಲೆಂಡ್ ನಾಯಕ ಜೋ ರೂಟ್ ಮೊದಲ ಸ್ಥಾನದಲ್ಲಿದ್ದಾರೆ.
Updated on: Jul 02, 2025 | 5:59 PM

ಪ್ರಸ್ತುತ ಭಾರತ ಹಾಗೂ ಇಂಗ್ಲೆಂಡ್ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಈ ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ಇಂಗ್ಲೆಂಡ್ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಭಾರತ ತಂಡದಿಂದ ಐದು ಶತಕಗಳು ಸಿಡಿದರೂ ಗೆಲುವು ದಕ್ಕಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಆದಾಗ್ಯೂ ವಿಕೆಟ್ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ತಮ್ಮ ಪ್ರದರ್ಶನದಿಂದ ಎಲ್ಲರ ಗಮನ ಸೆಳೆದಿದ್ದರು.

ಲೀಡ್ಸ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ್ದ ರಿಷಭ್ ಪಂತ್ ತಂಡವನ್ನು ಸ್ಪರ್ಧಾತ್ಮಕ ಮೊತ್ತಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಮೊದಲ ಇನ್ನಿಂಗ್ಸ್ನಲ್ಲಿ 134 ರನ್ ಬಾರಿಸಿದ್ದ ಪಂತ್, ಎರಡನೇ ಇನ್ನಿಂಗ್ಸ್ನಲ್ಲೂ 118 ರನ್ಗಳ ಶತಕದ ಇನ್ನಿಂಗ್ಸ್ ಆಡಿದ್ದರು.

ಪಂತ್ ಸಿಡಿಸಿದ ಈ ಎರಡು ಶತಕಗಳು ಐಸಿಸಿ ರ್ಯಾಂಕಿಂಗ್ನಲ್ಲಿ ಅವರಿಗೆ ಭರ್ಜರಿ ಮುಂಬಡ್ತಿ ನೀಡಿದ್ದವು. ಕಳೆದ ವಾರದ ರ್ಯಾಂಕಿಂಗ್ನಲ್ಲಿ 7ನೇ ಸ್ಥಾನ ಪಡೆದುಕೊಂಡಿದ್ದ ಪಂತ್, ಈ ವಾರ ಇನ್ನೂ ಒಂದು ಸ್ಥಾನ ಮೇಲೇರಿ 6ನೇ ಸ್ಥಾನವನ್ನು ಅಲಂಕರಿಸಿಕೊಂಡಿದ್ದಾರೆ.

ಪ್ರಸ್ತುತ ಪಂತ್ 801 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದು, ಇದು ಅವರ ವೃತ್ತಿಜೀವನದ ಅತ್ಯುತ್ತಮ ರೇಟಿಂಗ್ ಆಗಿದೆ. ರಿಷಭ್ ಪಂತ್ ಆರನೇ ಸ್ಥಾನವನ್ನು ತಲುಪಲು ಮತ್ತೊಂದು ಕಾರಣವೂ ಇದ್ದು, ದಕ್ಷಿಣ ಅಫ್ರಿಕಾ ಮತ್ತು ಜಿಂಬಾಬ್ವೆ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಇಂಜುರಿಯಿಂದಾಗಿ ಆಫ್ರಿಕಾ ನಾಯಕ ಟೆಂಬಾ ಬವುಮಾ ಆಡುತ್ತಿಲ್ಲ. ಇದರಿಂದಾಗಿ ಬವುಮಾ ಶ್ರೇಯಾಂಕದಲ್ಲಿ ಕುಸಿತ ಕಂಡರೆ, ಇತ್ತ ಪಂತ್, 7ನೇ ಸ್ಥಾನದಿಂದ 6ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್‌ನ ಜೋ ರೂಟ್ ತಮ್ಮ ಅತ್ಯುತ್ತಮ ಫಾರ್ಮ್ ಅನ್ನು ಮುಂದುವರಿಸಿದ್ದು, ಟೆಸ್ಟ್ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಮೊದಲ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಹೆಡಿಂಗ್ಲೆ ಟೆಸ್ಟ್‌ನಲ್ಲಿ 28 ಮತ್ತು 53* ರನ್ ಗಳಿಸಿದ ರೂಟ್ 889 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಉಳಿದಂತೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಹ್ಯಾರಿ ಬ್ರೂಕ್ 874 ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗ ಟ್ರಾವಿಸ್ ಹೆಡ್ ಮೂರು ಸ್ಥಾನಗಳನ್ನು ಜಿಗಿದು 10 ನೇ ಸ್ಥಾನವನ್ನು ತಲುಪಿದ್ದಾರೆ.
