AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಅಭ್ಯಾಸದ ವೇಳೆ ಗಾಯಗೊಂಡ ಗಾಬಾ ಹೀರೋ ರಿಷಬ್ ಪಂತ್

Rishabh Pant injury: ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಬ್ರಿಸ್ಬೇನ್‌ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ನೆಟ್ಸ್ ಅಭ್ಯಾಸದ ವೇಳೆ ಗಾಯಗೊಂಡಿದ್ದಾರೆ. ಥ್ರೋಡೌನ್ ಸ್ಪೆಷಲಿಸ್ಟ್ ರಘು ಅವರು ಎಸೆದ ಚೆಂಡು ಪಂತ್ ಅವರ ಹೆಲ್ಮೆಟ್‌ಗೆ ಬಡಿದಿದೆ. ಆದರೆ ಗಾಯ ಗಂಭೀರವಾಗಿಲ್ಲ ಎಂದು ವರದಿಯಾಗಿದೆ. ಸ್ವಲ್ಪ ವಿರಾಮದ ನಂತರ ಪಂತ್ ಮತ್ತೆ ಅಭ್ಯಾಸ ಆರಂಭಿಸಿದ್ದಾರೆ.

ಪೃಥ್ವಿಶಂಕರ
|

Updated on: Dec 10, 2024 | 3:55 PM

Share
ಅಡಿಲೇಡ್ ಟೆಸ್ಟ್‌ನಲ್ಲಿ 10 ವಿಕೆಟ್‌ಗಳ ಸೋಲನ್ನು ಎದುರಿಸಿದ ಟೀಂ ಇಂಡಿಯಾ ಪ್ರಸ್ತುತ ಬ್ರಿಸ್ಬೇನ್ ಟೆಸ್ಟ್‌ಗೆ ತಯಾರಿ ನಡೆಸುತ್ತಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್‌ಗೆ ಟೀಂ ಇಂಡಿಯಾದ ಎಲ್ಲಾ ಆಟಗಾರರು ತಯಾರಿ ನಡೆಸುತ್ತಿದ್ದಾರೆ. ಈ ಅವಧಿಯಲ್ಲಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಕೂಡ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದರು.

1 / 7
ಆದರೆ, ಥ್ರೋಡೌನ್ ಸ್ಪೆಷಲಿಸ್ಟ್ ರಘು ಅವರು ಎಸೆದ ಎಸೆತ ರಿಷಬ್ ಪಂತ್ ಗಾಯಗೊಳ್ಳುವಂತೆ ಮಾಡಿದೆ. ಬ್ರಿಸ್ಬೇನ್‌ನ ಗಾಬಾದಲ್ಲಿ ನಡೆಯಲಿರುವ ಟೆಸ್ಟ್‌ಗೆ ತಯಾರಿ ನಡೆಸುತ್ತಿದ್ದಾಗ ಪಂತ್ ಗಾಯಗೊಂಡಿದ್ದಾರೆ. ಆದರೆ ಅದೃಷ್ಟವಶಾತ್ ಪಂತ್ ಅವರ ಗಾಯ ಅಷ್ಟು ಗಂಭೀರವಾಗಿಲ್ಲ. ಹೀಗಾಗಿ ಸ್ವಲ್ಪ ಸಮಯ ವಿರಾಮ ತೆಗೆದುಕೊಂಡಿದ್ದ ಪಂತ್, ಆ ಬಳಿಕ ಮತ್ತೆ ಬ್ಯಾಟಿಂಗ್‌ ಅಭ್ಯಾಸ ಮಾಡಿದ್ದಾರೆ.

2 / 7
ಥ್ರೋಡೌನ್ ಸ್ಪೆಷಲಿಸ್ಟ್ ರಘು ಅವರು ರಿಷಬ್ ಪಂತ್‌ಗೆ ನೆಟ್ಸ್‌ನಲ್ಲಿ ಬೌಲಿಂಗ್ ಮಾಡುತ್ತಿದ್ದರು. ರಘು ಅವರು ಸೈಡ್ ಆರ್ಮ್ ಬೌಲಿಂಗ್ ಮಾಡುವ ಮೂಲಕ ಅಭ್ಯಾಸದಲ್ಲಿ ಪಂತ್​ಗೆ ಸಹಾಯ ಮಾಡುತ್ತಿದ್ದರು. ಈ ವೇಳೆ ರಘು ಎಸೆದ ಚೆಂಡು ನೇರವಾಗಿ ಪಂತ್ ಅವರ ಹೆಲ್ಮೆಟ್‌ಗೆ ಬಡಿಯಿತು. ಹೀಗಾಗಿ ಪಂತ್ ಗಾಯಗೊಂಡರು. ರಿಷಬ್ ಪಂತ್ ಗಾಯಗೊಂಡ ನಂತರ ಬ್ಯಾಟಿಂಗ್ ಅಭ್ಯಾಸವನ್ನು ನಿಲ್ಲಿಸಿದರು.

3 / 7
ಕೂಡಲೇ ವೈದ್ಯಕೀಯ ಸಿಬ್ಬಂದಿ, ಭಾರತದ ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಮತ್ತು ಸಹಾಯಕ ಕೋಚ್ ರಿಯಾನ್ ಟೆನ್ ಡೋಸ್ಚೇಟ್ ಪಂತ್ ಬಳಿಗೆ ಬಂದು ಅವರನ್ನು ಪರಿಶೀಲಿಸಿದರು. ಸ್ವಲ್ಪ ಸಮಯ ವಿಶ್ರಾಂತಿ ಪಡೆದುಕೊಂಡ ಪಂತ್, ಮತ್ತೆ ಬ್ಯಾಟಿಂಗ್ ಅಭ್ಯಾಸ ಶುರು ಮಾಡಿದ್ದಾರೆ.

4 / 7
ಉಭಯ ತಂಡಗಳ ನಡುವಿನ ಮೂರನೇ ಟೆಸ್ಟ್ ಡಿಸೆಂಬರ್ 14 ರಿಂದ ಬ್ರಿಸ್ಬೇನ್‌ನ ಗಾಬಾದಲ್ಲಿ ಆರಂಭವಾಗಲಿದೆ. 2021ರಲ್ಲಿ ಇದೇ ಮೈದಾನದಲ್ಲಿ ನಡೆದ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಆಗ ರಿಷಬ್ ಪಂತ್ ಟೀಂ ಇಂಡಿಯಾದ ಗೆಲುವಿನ ಹೀರೋ ಆಗಿ ಹೊರಹೊಮ್ಮಿದ್ದರು.

5 / 7
ಈ ಪಂದ್ಯದಲ್ಲಿ ಆಸ್ಟ್ರೇಲಿಯ ಮೊದಲ ಇನಿಂಗ್ಸ್‌ನಲ್ಲಿ 369 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 294 ರನ್ ಗಳಿಸಿತ್ತು. ಇತ್ತ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 336 ರನ್ ಗಳಿಸಿತ್ತು. ಪಂದ್ಯ ಗೆಲ್ಲಲು ಎರಡನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ 328 ರನ್‌ಗಳ ಗುರಿ ಬೆನ್ನಟ್ಟಬೇಕಿತ್ತು. ಆ ವೇಳೆ ತಂಡದ ಪರ ಗೆಲುವಿನ ಇನ್ನಿಂಗ್ಸ್ ಆಡಿದ್ದ ಪಂತ್ ಎರಡನೇ ಇನ್ನಿಂಗ್ಸ್‌ನಲ್ಲಿ ಅಜೇಯ 89 ರನ್ ಗಳಿಸುವ ಮೂಲಕ ಕಾಂಗರೂ ತಂಡದಿಂದ ಪಂದ್ಯವನ್ನು ಕಸಿದುಕೊಂಡಿದ್ದರು.

6 / 7
ಪ್ರಸಕ್ತ ಸರಣಿಯಲ್ಲಿ ರಿಷಬ್ ಪಂತ್ ತಮ್ಮ ಬ್ಯಾಟ್​ನಿಂದ ಯಾವುದೇ ಮ್ಯಾಜಿಕ್ ಪ್ರದರ್ಶಿಸಲು ಸಾಧ್ಯವಾಗಿಲ್ಲ. ಪರ್ತ್ ಟೆಸ್ಟ್‌ನಲ್ಲಿ ಅವರ ಬ್ಯಾಟ್ ಮೌನವಾಗಿತ್ತು. ಅಡಿಲೇಡ್ ಟೆಸ್ಟ್‌ನಲ್ಲೂ ಕೂಡ ಅವರ ಬ್ಯಾಟ್‌ನಿಂದ ಯಾವುದೇ ರನ್ ಬರಲಿಲ್ಲ. ಹೀಗಾಗಿ ಅವರ ನೆಚ್ಚಿನ ಗಾಬಾ ಮೈದಾನದಲ್ಲಾದರೂ ರನ್ ಮಳೆ ಸುರಿಯಲಿದೆಯಾ ಎಂಬುದನ್ನು ಕಾದುನೋಡಬೇಕಿದೆ.

7 / 7
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!