AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಭ್ ಪಂತ್ ಬಗ್ಗೆ ಬಿಗ್ ಅಪ್ಡೇಟ್: ಈ ಪಂದ್ಯದ ಮೂಲಕ ಟೀಮ್ ಇಂಡಿಯಾಕ್ಕೆ ಕಮ್​ಬ್ಯಾಕ್

Rishabh Pant Comeback News: ಭಾರತ ಕ್ರಿಕೆಟ್ ತಂಡದ ಯುವ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಬಗ್ಗೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ರಿಷಭ್ ಕಮ್​ಬ್ಯಾಕ್​ಗೆ ವೇದಿಕೆ ಸಜ್ಜಾಗಿದೆ. ಶೀಘ್ರದಲ್ಲೇ ರಿಷಭ್ ಪುನರಾಗಮನ ಮಾಡಲಿದ್ದಾರೆ. ಯಾವಾಗ?, ಯಾವ ಪಂದ್ಯದ ಮೂಲಕ?, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Vinay Bhat
|

Updated on: Oct 29, 2023 | 12:20 PM

Share
ಭಾರತ ಕ್ರಿಕೆಟ್ ತಂಡದ ಯುವ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಸದ್ಯ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಡಿಸೆಂಬರ್ 31 ರಂದು ಪಂತ್ ಕಾರು ಅಪಘಾತಕ್ಕೆ ಒಳಗಾಗಿದ್ದರು. ಇದರಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಈ ಕಾರಣದಿಂದ ಪಂತ್ ಸದ್ಯ ಸಾಗುತ್ತಿರುವ ವಿಶ್ವಕಪ್​ನಲ್ಲಿ ಕೂಡ ಆಡುತ್ತಿಲ್ಲ.

1 / 7
ಆದರೆ ಇದೀಗ ಪಂತ್ ಬಗ್ಗೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ರಿಷಭ್ ಕಮ್​ಬ್ಯಾಕ್​ಗೆ ವೇದಿಕೆ ಸಜ್ಜಾಗಿದೆ. ಶೀಘ್ರದಲ್ಲೇ ರಿಷಭ್ ಪುನರಾಗಮನ ಮಾಡಲಿದ್ದಾರೆ. ಪಂತ್ ಸದ್ಯ ಅಭ್ಯಾಸ ಆರಂಭಿಸಿದ್ದು, ನಿಧಾನವಾಗಿ ಲಯ ಕಂಡುಕೊಳ್ಳುತ್ತಿದ್ದಾರೆ. ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಇವರು ಟೀಮ್ ಇಂಡಿಯಾಕ್ಕೆ ಮರಳಲಿದ್ದಾರೆ.

2 / 7
ಪಂತ್ ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಇವರು ಬಹಳ ಸಮಯದಿಂದ ಇಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಶ್ವಕಪ್-2023 ರಲ್ಲಿ ಟೀಮ್ ಇಂಡಿಯಾಗಾಗಿ ಮಾಡಿದ ಕೆಲವು ಜಾಹೀರಾತುಗಳಲ್ಲಿ ಇವರು ಕಾಣಿಸಿಕೊಂಡರು. ಇದರ ಬೆನ್ನಲ್ಲೇ, ಪಂತ್ ಶೀಘ್ರದಲ್ಲೇ ಮರಳುವ ನಿರೀಕ್ಷೆಯಿದೆ.

3 / 7
ಇನ್​ಸೈಡ್ ಸ್ಪೋರ್ಟ್ಸ್ ಮಾಡಿರುವ ವರದಿಯ ಪ್ರಕಾರ, ಪಂತ್ ಅವರು ದೇಶೀಯ ಕ್ರಿಕೆಟ್‌ ಮೂಲಕ ಕಮ್​ಬ್ಯಾಕ್ ಮಾಡಲಿದ್ದಾರೆ. ನಂತರ ಅವರು ಟೀಮ್ ಇಂಡಿಯಾ ಸೇರಿಕೊಳ್ಳಲಿದ್ದಾರೆ. ನವೆಂಬರ್ 23 ರಿಂದ ಡಿಸೆಂಬರ್ 16 ರವರೆಗೆ ನಡೆಯಲಿರುವ ಭಾರತದ ದೇಶೀಯ ಏಕದಿನ ಪಂದ್ಯಾವಳಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಪಂತ್ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿದೆ.

4 / 7
ಪಂತ್ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುವ ಮೂಲಕ ತಮ್ಮ ಲಯ ಕಂಡುಕೊಳ್ಳಲಿದ್ದಾರೆ. ನಂತರ ಅವರು ಮುಂದಿನ ವರ್ಷ ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾಕ್ಕೆ ಸೇರಲಿದ್ದಾರಂತೆ. ಈ ಬಗ್ಗೆ ಬಿಸಿಸಿಐ ಅಧಿಕಾರಿಗಳೊಬ್ಬರು ತಿಳಿಸಿದ್ದಾರೆ.

5 / 7
"ಇದು ಇನ್ನೂ ಆರಂಭಿಕ ದಿನಗಳು. ಅವರು ನೆಟ್ಸ್‌ನಲ್ಲಿ ಬ್ಯಾಟಿಂಗ್‌ ಮಾಡಿರುವುದು ಸಂತಸ ತಂದಿದೆ. ಆದರೆ ಅವನಿಗೆ ಇನ್ನೂ ಸ್ವಲ್ಪ ಸಮಯ ಬೇಕು. ಅವರು ದೇಶೀಯ ಕ್ರಿಕೆಟ್‌ಗೆ ಮರಳಬೇಕು ಮತ್ತು ಆತ್ಮವಿಶ್ವಾಸವನ್ನು ಮರಳಿ ಪಡೆಯಬೇಕು. ಬಹುಶಃ, ಎಲ್ಲವೂ ಸರಿಯಾಗಿ ನಡೆದರೆ, ಅಫ್ಘಾನಿಸ್ತಾನ ವಿರುದ್ಧ ಮರಳಲು ಸಾಧ್ಯ," ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಇನ್ಸೈಡ್‌ಸ್ಪೋರ್ಟ್‌ಗೆ ತಿಳಿಸಿದ್ದಾರೆ.

6 / 7
ಮುಂದಿನ ವರ್ಷ ಪಂತ್ ಚೇತರಿಸಿಕೊಳ್ಳುವುದು ಟೀಮ್ ಇಂಡಿಯಾಕ್ಕೆ ಬಹಳ ಮುಖ್ಯವಾಗಿದೆ. ಏಕೆಂದರೆ ಮುಂದಿನ ವರ್ಷ ಐಸಿಸಿ ಟಿ20 ವಿಶ್ವಕಪ್ ನಡೆಯಲಿದೆ. ಪಂತ್ ಈ ಮಾದರಿಯ ಅತ್ಯುತ್ತಮ ಆಟಗಾರನಾಗಿದ್ದು, ಫಾರ್ಮ್​ಗೆ ಮರಳಿ ತಂಡ ಸೇರಿಕೊಳ್ಳಬೇಕಿದೆ. ಕಳೆದ ವರ್ಷ ಡಿಸೆಂಬರ್ 31 ರಂದು ಪಂತ್ ದೆಹಲಿಯಿಂದ ತನ್ನ ಮನೆಗೆ ಹೋಗುತ್ತಿದ್ದಾಗ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಅಪಘಾತಕ್ಕೀಡಾದರು. ಈ ಅಪಘಾತದಲ್ಲಿ ಪಂತ್ ತೀವ್ರವಾಗಿ ಗಾಯಗೊಂಡಿದ್ದರು.

7 / 7
Follow Us
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ