ENG vs IND ODI: ಭಾರತ-ಇಂಗ್ಲೆಂಡ್ ಮೂರನೇ ಏಕದಿನ ಪಂದ್ಯದ ರೋಚಕ ಫೋಟೋ ನೋಡಿ
TV9 Web | Updated By: Vinay Bhat
Updated on:
Jul 18, 2022 | 12:02 PM
ರಿಷಭ್ ಪಂತ್ ಅವರ ಆಕರ್ಷಕ ಶತಕ ಹಾಗೂ ಹಾರ್ದಿಕ್ ಪಾಂಡ್ಯ (Hardik Pandya) ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ ಜಯದ ನಗೆ ಬೀರಿದ್ದು ಮಾತ್ರವಲ್ಲದೆ 2-1 ಅಂತರದಿಂದ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ.
1 / 6
ಮ್ಯಾಂಚೆಸ್ಟರ್ ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಅಂತಿಮ ಹಾಗೂ ಮೂರನೇ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಭಾರತ (India vs England) 5 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ.
2 / 6
ರಿಷಭ್ ಪಂತ್ ಅವರ ಆಕರ್ಷಕ ಶತಕ ಹಾಗೂ ಹಾರ್ದಿಕ್ ಪಾಂಡ್ಯ (Hardik Pandya) ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ ಜಯದ ನಗೆ ಬೀರಿದ್ದು ಮಾತ್ರವಲ್ಲದೆ 2-1 ಅಂತರದಿಂದ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ.
3 / 6
113 ಎಸೆತಗಳನ್ನು ಎದುರಿಸಿದ ಪಂತ್ (Rishabh Pant) ಬರೋಬ್ಬರಿ 16 ಫೋರ್ ಹಾಗೂ 2 ಸಿಕ್ಸರ್ ಬಾರಿಸಿ ಅಜೇಯ 125 ರನ್ ಚಚ್ಚಿದರು. ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ಇದು ಪಂತ್ ಅವರ ಚೊಚ್ಚಲ ಶತಕ.
4 / 6
ಭಾರತ 72 ರನ್ ಆಗುವ ಹೊತ್ತಿಗೆ 4 ವಿಕಟ್ ಕಳೆದುಕೊಂಡಿತು. ಈ ಸಂದರ್ಭ ಇಂಗ್ಲೆಂಡ್ ಮೇಲುಗೈ ಸಾಧಿಸಿತು ಎಂದೇ ನಂಬಲಾಗಿತ್ತು. ಆದರೆ, ಇಡೀ ಪಂದ್ಯದ ಗತಿಯನ್ನೇ ಬದಲಾಯಿಸಿದ್ದು ರಿಷಭ್ ಪಂತ್ ಹಾಗೂ ಇವರಿಗೆ ಸಾಥ್ ನೀಡಿದ್ದು ಹಾರ್ದಿಕ್ ಪಾಂಡ್ಯ. ಪಂತ್-ಹಾರ್ದಿಕ್ ಕಡೆಯಿಂದ ಮೂಡಿಬಂದಿದ್ದು ಬರೋಬ್ಬರಿ 133 ರನ್ ಗಳ ಜೊತೆಯಾಟ.
5 / 6
ಇತ್ತ ಇಂಗ್ಲೆಂಡ್ ಪರ ನಾಯಕ ಜೋಸ್ ಬಟ್ಲರ್ ಅರ್ಧಶತಕ ಗಳಿಸಿ 60 ರನ್ ಬಾರಿಸಿದ್ದು ಬಿಟ್ಟರೆ ಜೇಸನ್ ರಾಯ್ 41 ರನ್ ಗಳಿಸಿದ್ದೇ ಹೆಚ್ಚು. ಉಳಿದ ಬ್ಯಾಟರ್ ಗಳು ವೈಫಲ್ಯ ಅನುಭವಿಸಿದರು. ಪರಿಣಾಮ ಇಂಗ್ಲೆಂಡ್ 259 ರನ್ ಗಳಿಸಿತಷ್ಟೆ.
6 / 6
ಭಾರತ ಪರ ಹಾರ್ದಿಕ್ 4 ವಿಕೆಟ್ ಕಿತ್ತರೆ ಯುಜ್ವೇಂದ್ರ ಚಹಲ್ 3 ವಿಕೆಟ್ ಪಡೆದರು.