AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೇ ಮೂರು ಸಿಕ್ಸ್… ಹೊಸ ಇತಿಹಾಸದ ಸನಿಹದಲ್ಲಿ ರಿಷಭ್ ಪಂತ್

Rishabh Pant Records: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 9 ಸಿಕ್ಸ್ ಸಿಡಿಸುವ ಮೂಲಕ ಟೀಮ್ ಇಂಡಿಯಾದ ಎಡಗೈ ದಾಂಡಿಗ ರಿಷಭ್ ಪಂತ್, ಬೆನ್ ಸ್ಟೋಕ್ಸ್ ಹಾಗೂ ಆಂಡ್ರ್ಯೂ ಫ್ಲಿಂಟಾಫ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಇಬ್ಬರು ದಾಂಡಿಗರು ಇಂಗ್ಲೆಂಡ್​ನಲ್ಲಿ ನಡೆದ ಟೆಸ್ಟ್ ಪಂದ್ಯವೊಂದರಲ್ಲಿ ತಲಾ 9 ಸಿಕ್ಸ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸರಿಗಟ್ಟಿರುವ ರಿಷಭ್ ಶೀಘ್ರದಲ್ಲೇ ಟೀಮ್ ಇಂಡಿಯಾದ ಸಿಕ್ಸರ್ ಕಿಂಗ್ ಎನಿಸಿಕೊಳ್ಳಲಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 20, 2025 | 1:32 PM

Share
ಟೀಮ್ ಇಂಡಿಯಾದ ಯುವ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (Rishabh pant) ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿದ್ದಾರೆ. ಅದು ಕೂಡ ಮೂರೇ ಮೂರು ಸಿಕ್ಸ್​ಗಳ ಮೂಲಕ. ಅಂದರೆ ಮ್ಯಾಚೆಂಸ್ಟರ್​ನ ಓಲ್ಡ್​ ಟ್ರಾಫೋರ್ಡ್ ಮೈದಾನದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ 3 ಸಿಕ್ಸ್ ಬಾರಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

1 / 5
ಟೆಸ್ಟ್ ಕ್ರಿಕೆಟ್​ನಲ್ಲಿ ಈವರೆಗೆ 46 ಪಂದ್ಯಗಳನ್ನಾಡಿರುವ ರಿಷಭ್ ಒಟ್ಟು 81 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ ಸಿಡಿರುವುದು ಬರೋಬ್ಬರಿ 88 ಸಿಕ್ಸ್​ಗಳು. ಈ ಸಿಕ್ಸರ್​ಗಳೊಂದಿಗೆ ಟೆಸ್ಟ್​ನಲ್ಲಿ ಭಾರತದ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್.

2 / 5
ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್​ ಸಿಡಿಸಿದ ದಾಖಲೆ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿದೆ. ಭಾರತದ ಪರ 178 ಟೆಸ್ಟ್ ಇನಿಂಗ್ಸ್ ಆಡಿರುವ ಸೆಹ್ವಾಗ್ 10346 ಎಸೆತಗಳಲ್ಲಿ 90 ಸಿಕ್ಸ್​ ಸಿಡಿಸಿದ್ದಾರೆ. ಈ ಮೂಲಕ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ರೋಹಿತ್ ಶರ್ಮಾ. ಹಿಟ್​ಮ್ಯಾನ್ ಭಾರತದ ಪರ 116 ಟೆಸ್ಟ್ ಇನಿಂಗ್ಸ್​ಗಳನ್ನು ಆಡಿದ್ದಾರೆ. ಈ ವೇಳೆ 7538 ಎಸೆತಗಳನ್ನು ಎದುರಿಸಿರುವ ಅವರು ಬರೋಬ್ಬರಿ 88 ಸಿಕ್ಸರ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಸೆಹ್ವಾಗ್ ನಂತರದ ಸ್ಥಾನ ಅಲಂಕರಿಸುವಲ್ಲಿ ಹಿಟ್​ಮ್ಯಾನ್ ಯಶಸ್ವಿಯಾಗಿದ್ದಾರೆ.

4 / 5
ಇದೀಗ ಕೇವಲ 81 ಟೆಸ್ಟ್ ಇನಿಂಗ್ಸ್​ಗಳ ಮೂಲಕ ರೋಹಿತ್ ಶರ್ಮಾ ಅವರ ಹೆಸರಿನಲ್ಲಿರುವ ದಾಖಲೆಯನ್ನು ರಿಷಭ್ ಪಂತ್ ಸರಿಗಟ್ಟಿದ್ದಾರೆ. ಅಲ್ಲದೆ 88 ಸಿಕ್ಸರ್​ಗಳೊಂದಿಗೆ ದ್ವಿತೀಯ ಸ್ಥಾನದಲ್ಲಿರುವ ಪಂಟರ್ ಪಂತ್ ಮ್ಯಾಚೆಂಸ್ಟರ್ ಟೆಸ್ಟ್​ನಲ್ಲಿ 3 ಸಿಕ್ಸ್ ಸಿಡಿಸಿದರೆ, ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಈ ಮೂಲಕ ಸೆಹ್ವಾಗ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸುವುದನ್ನು ನಿರೀಕ್ಷಿಸಬಹುದು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ