- TV9 Kannada Kannada News Photos Cricket Photos rishabh pant needs just 3 more sixes to create history
ಮೂರೇ ಮೂರು ಸಿಕ್ಸ್… ಹೊಸ ಇತಿಹಾಸದ ಸನಿಹದಲ್ಲಿ ರಿಷಭ್ ಪಂತ್
Rishabh Pant Records: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 9 ಸಿಕ್ಸ್ ಸಿಡಿಸುವ ಮೂಲಕ ಟೀಮ್ ಇಂಡಿಯಾದ ಎಡಗೈ ದಾಂಡಿಗ ರಿಷಭ್ ಪಂತ್, ಬೆನ್ ಸ್ಟೋಕ್ಸ್ ಹಾಗೂ ಆಂಡ್ರ್ಯೂ ಫ್ಲಿಂಟಾಫ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಇಬ್ಬರು ದಾಂಡಿಗರು ಇಂಗ್ಲೆಂಡ್ನಲ್ಲಿ ನಡೆದ ಟೆಸ್ಟ್ ಪಂದ್ಯವೊಂದರಲ್ಲಿ ತಲಾ 9 ಸಿಕ್ಸ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸರಿಗಟ್ಟಿರುವ ರಿಷಭ್ ಶೀಘ್ರದಲ್ಲೇ ಟೀಮ್ ಇಂಡಿಯಾದ ಸಿಕ್ಸರ್ ಕಿಂಗ್ ಎನಿಸಿಕೊಳ್ಳಲಿದ್ದಾರೆ.
Updated on: Jul 20, 2025 | 1:32 PM

ಟೀಮ್ ಇಂಡಿಯಾದ ಯುವ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (Rishabh pant) ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿದ್ದಾರೆ. ಅದು ಕೂಡ ಮೂರೇ ಮೂರು ಸಿಕ್ಸ್ಗಳ ಮೂಲಕ. ಅಂದರೆ ಮ್ಯಾಚೆಂಸ್ಟರ್ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ 3 ಸಿಕ್ಸ್ ಬಾರಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

ಟೆಸ್ಟ್ ಕ್ರಿಕೆಟ್ನಲ್ಲಿ ಈವರೆಗೆ 46 ಪಂದ್ಯಗಳನ್ನಾಡಿರುವ ರಿಷಭ್ ಒಟ್ಟು 81 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಅವರ ಬ್ಯಾಟ್ನಿಂದ ಸಿಡಿರುವುದು ಬರೋಬ್ಬರಿ 88 ಸಿಕ್ಸ್ಗಳು. ಈ ಸಿಕ್ಸರ್ಗಳೊಂದಿಗೆ ಟೆಸ್ಟ್ನಲ್ಲಿ ಭಾರತದ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್.

ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿದೆ. ಭಾರತದ ಪರ 178 ಟೆಸ್ಟ್ ಇನಿಂಗ್ಸ್ ಆಡಿರುವ ಸೆಹ್ವಾಗ್ 10346 ಎಸೆತಗಳಲ್ಲಿ 90 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ರೋಹಿತ್ ಶರ್ಮಾ. ಹಿಟ್ಮ್ಯಾನ್ ಭಾರತದ ಪರ 116 ಟೆಸ್ಟ್ ಇನಿಂಗ್ಸ್ಗಳನ್ನು ಆಡಿದ್ದಾರೆ. ಈ ವೇಳೆ 7538 ಎಸೆತಗಳನ್ನು ಎದುರಿಸಿರುವ ಅವರು ಬರೋಬ್ಬರಿ 88 ಸಿಕ್ಸರ್ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಸೆಹ್ವಾಗ್ ನಂತರದ ಸ್ಥಾನ ಅಲಂಕರಿಸುವಲ್ಲಿ ಹಿಟ್ಮ್ಯಾನ್ ಯಶಸ್ವಿಯಾಗಿದ್ದಾರೆ.

ಇದೀಗ ಕೇವಲ 81 ಟೆಸ್ಟ್ ಇನಿಂಗ್ಸ್ಗಳ ಮೂಲಕ ರೋಹಿತ್ ಶರ್ಮಾ ಅವರ ಹೆಸರಿನಲ್ಲಿರುವ ದಾಖಲೆಯನ್ನು ರಿಷಭ್ ಪಂತ್ ಸರಿಗಟ್ಟಿದ್ದಾರೆ. ಅಲ್ಲದೆ 88 ಸಿಕ್ಸರ್ಗಳೊಂದಿಗೆ ದ್ವಿತೀಯ ಸ್ಥಾನದಲ್ಲಿರುವ ಪಂಟರ್ ಪಂತ್ ಮ್ಯಾಚೆಂಸ್ಟರ್ ಟೆಸ್ಟ್ನಲ್ಲಿ 3 ಸಿಕ್ಸ್ ಸಿಡಿಸಿದರೆ, ಟೀಮ್ ಇಂಡಿಯಾ ಪರ ಟೆಸ್ಟ್ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಈ ಮೂಲಕ ಸೆಹ್ವಾಗ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸುವುದನ್ನು ನಿರೀಕ್ಷಿಸಬಹುದು.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



