Rishabh Pant: ರಿಷಭ್ ಪಂತ್ಗೆ ಗಾಯ: ಸಂಜು ಸ್ಯಾಮ್ಸನ್ಗೆ ಸಿಗುತ್ತಾ ಚಾನ್ಸ್?
TV9 Web | Updated By: ಝಾಹಿರ್ ಯೂಸುಫ್
Updated on:
Dec 01, 2022 | 10:10 PM
India vs Bangladesh: ಟೀಮ್ ಇಂಡಿಯಾ ಏಕದಿನ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಹಬಾಜ್ ಅಹ್ಮದ್, ಕೆಎಲ್ ರಾಹುಲ್, ರಿಷಬ್ ಪಂತ್.
1 / 7
ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಗಾಯದ ಸಮಸ್ಯೆಗೆ ಸಿಲುಕಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಬೆನ್ನು ನೋವಿಗೆ ಒಳಗಾಗಿದ್ದ ಪಂತ್ ಇದೀಗ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ. ಹೀಗಾಗಿ ಡಿಸೆಂಬರ್ 4 ರಿಂದ ಶುರುವಾಗಲಿರುವ ಬಾಂಗ್ಲಾದೇಶ್ ವಿರುದ್ಧದ ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ.
2 / 7
ಸದ್ಯದ ಮಾಹಿತಿ ಪ್ರಕಾರ ರಿಷಭ್ ಪಂತ್ ಅವರ ಸ್ಕ್ಯಾನಿಂಗ್ ರಿಪೋರ್ಟ್ ಬಂದಿದ್ದು, ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಸರಣಿಯಿಂದ ಪಂತ್ ಹೊರಗುಳಿಯಲಿದ್ದಾರೆ ಎನ್ನಲಾಗುತ್ತಿದೆ.
3 / 7
ಇತ್ತ ಬಾಂಗ್ಲಾದೇಶ್ ಸರಣಿಗೆ ಆಯ್ಕೆಯಾದ ತಂಡದಲ್ಲಿ ಸಂಜು ಸ್ಯಾಮ್ಸನ್ಗೆ ಅವಕಾಶ ನೀಡಿರಲಿಲ್ಲ. ಇದೀಗ ರಿಷಭ್ ಪಂತ್ ಅವರು ಹೊರಗುಳಿದರೆ ಸ್ಯಾಮ್ಸನ್ಗೆ ತಂಡದಲ್ಲಿ ಚಾನ್ಸ್ ನೀಡುವ ಸಾಧ್ಯತೆ ಹೆಚ್ಚಿದೆ.
4 / 7
ಏಕೆಂದರೆ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದರೂ ಎಲ್ಲಾ ಪಂದ್ಯಗಳಲ್ಲಿ ಆಡುವ ಅವಕಾಶ ದೊರೆತಿರಲಿಲ್ಲ. ಇದಾಗ್ಯೂ ಅವರನ್ನು ಬಾಂಗ್ಲಾದೇಶ್ ಸರಣಿಯಿಂದ ಕೂಡ ಕೈ ಬಿಡಲಾಗಿತ್ತು.
5 / 7
ಇದೀಗ ಗಾಯದ ಕಾರಣ ರಿಷಭ್ ಪಂತ್ ಅವರನ್ನು ತಂಡದಿಂದ ಹೊರಗುಳಿದರೆ, ಬದಲಿ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಅವರಿಗೆ ಮಣೆಹಾಕಲು ಬಿಸಿಸಿಐ ಚಿಂತಿಸಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಏಕದಿನ ಹಾಗೂ ಟೆಸ್ಟ್ ತಂಡದಲ್ಲಿ ಸಂಜು ಸ್ಯಾಮ್ಸನ್ ಅವಕಾಶ ಪಡೆಯುವ ಸಾಧ್ಯತೆಯಿದೆ.
6 / 7
ಬಾಂಗ್ಲಾ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಏಕದಿನ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಹಬಾಜ್ ಅಹ್ಮದ್, ಕೆಎಲ್ ರಾಹುಲ್, ರಿಷಬ್ ಪಂತ್, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಕುಲದೀಪ್ ಸೇನ್.
7 / 7
ಟೀಮ್ ಇಂಡಿಯಾ ಟೆಸ್ಟ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕೆಎಲ್ ರಾಹುಲ್, ರಿಷಭ್ ಪಂತ್, ಶ್ರೀಕರ್ ಭರತ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.