- Kannada News Photo gallery Cricket photos Rishabh Pant overtakes Virat Kohli in latest ICC men's Test batter rankings kannada news
ICC Rankings: ಬರೋಬ್ಬರಿ 31 ಸ್ಥಾನ ಮೇಲೇರಿದ ಸರ್ಫರಾಜ್; 10 ಸ್ಥಾನ ಕುಸಿದ ರಾಹುಲ್
ICC Rankings: ಐಸಿಸಿ, ಇಂದು ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಭರ್ಜರಿ ಮುಂಬಡ್ತಿ ಪಡೆದಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಬೆಂಗಳೂರು ಟೆಸ್ಟ್‌ನಲ್ಲಿ 99 ರನ್‌ಗಳ ಇನ್ನಿಂಗ್ಸ್ ಆಡಿದ್ದ ಪಂತ್, ಇದೀಗ ಟೆಸ್ಟ್ ಬ್ಯಾಟ್ಸ್ಮನ್ಗಳ ರ್ಯಾಂಕಿಂಗ್ನಲ್ಲಿ ಮೂರು ಸ್ಥಾನಗಳನ್ನು ಮೇಲೇರಿ ಇದೀಗ ಆರನೇ ಸ್ಥಾನವನ್ನು ಆಕ್ರಮಿಸಿಕೊಂಡಿದ್ದಾರೆ.
Updated on: Oct 23, 2024 | 3:53 PM

ಐಸಿಸಿ, ಇಂದು ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಭರ್ಜರಿ ಮುಂಬಡ್ತಿ ಪಡೆದಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಬೆಂಗಳೂರು ಟೆಸ್ಟ್‌ನಲ್ಲಿ 99 ರನ್‌ಗಳ ಇನ್ನಿಂಗ್ಸ್ ಆಡಿದ್ದ ಪಂತ್, ಇದೀಗ ಟೆಸ್ಟ್ ಬ್ಯಾಟ್ಸ್ಮನ್ಗಳ ರ್ಯಾಂಕಿಂಗ್ನಲ್ಲಿ ಮೂರು ಸ್ಥಾನಗಳನ್ನು ಮೇಲೇರಿ ಇದೀಗ ಆರನೇ ಸ್ಥಾನವನ್ನು ಆಕ್ರಮಿಸಿಕೊಂಡಿದ್ದಾರೆ.

ಪ್ರಸ್ತುತ 745 ರೇಟಿಂಗ್ ಪಾಯಿಂಟ್ಸ್ ಹೊಂದಿರುವ ರಿಷಬ್ ಪಂತ್ ಮೂರು ಸ್ಥಾನ ಮೇಲೇರಿದ್ದು ಟಾಪ್ 10 ರೊಳಗೆ ಸ್ಥಾನ ಪಡೆದ ಭಾರತೀಯ ಬ್ಯಾಟರ್ಗಳ ಪಟ್ಟಿಯಲ್ಲಿ ಪಂತ್ ಸ್ಥಾನ ಪಡೆದಿದ್ದಾರೆ. ಪಂತ್ ಅಲ್ಲದೆ ಯಶಸ್ವಿ ಜೈಸ್ವಾಲ್ ಹಾಗೂ ವಿರಾಟ್ ಕೊಹ್ಲಿ ಕೂಡ ಟಾಪ್ 10 ರೊಳಗೆ ಸ್ಥಾನ ಪಡೆದಿದ್ದಾರೆ. ಆದರೆ ಕೊಹ್ಲಿ ಮಾತ್ರ ಒಂದು ಸ್ಥಾನ ಕಳೆದುಕೊಳ್ಳಬೇಕಾಗಿದೆ.

ನ್ಯೂಜಿಲೆಂಡ್ ವಿರುದ್ಧದ ಬೆಂಗಳೂರು ಟೆಸ್ಟ್‌ನಲ್ಲಿ ಮಿಶ್ರ ಪ್ರದರ್ಶನ ನೀಡಿದ ಯಶಸ್ವಿ ಜೈಸ್ವಾಲ್ 780 ರೇಟಿಂಗ್ ಪಾಯಿಂಟ್ಸ್ನೊಂದಿಗೆ 4ನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಈ ಹಿಂದೆ 7ನೇ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಇದೀಗ 720 ರೇಟಿಂಗ್ ಪಾಯಿಂಟ್ಸ್ಗಳೊಂದಿಗೆ 8ನೇ ಸ್ಥಾನಕ್ಕೆ ಜಾರಿದ್ದಾರೆ. ಈ ಮೂವರನ್ನು ಹೊರತುಪಡಿಸಿ ಭಾರತದ ಮತ್ತ್ಯಾವ ಬ್ಯಾಟ್ಸ್‌ಮನ್ ಕೂಡ ಟಾಪ್ 10 ರೊಳಗೆ ಕಾಣಿಸಿಕೊಂಡಿಲ್ಲ.

ಆದರೆ ನ್ಯೂಜಿಲೆಂಡ್ ವಿರುದ್ಧ 150 ರನ್‌ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದ್ದ ಸರ್ಫರಾಜ್ ಖಾನ್ ಟೆಸ್ಟ್ ರ್ಯಾಂಕಿಂಗ್ನಲ್ಲಿ ಬರೋಬ್ಬರಿ 31 ಸ್ಥಾನ ಮೇಲೇರಿದ್ದು, ಈ ಮೂಲಕ ಕನ್ನಡಿಗ ಕೆಎಲ್ ರಾಹುಲ್ರನ್ನು ಹಿಂದಿಕ್ಕಿದ್ದಾರೆ. ಈ ಹಿಂದೆ 84ನೇ ಸ್ಥಾನದಲ್ಲಿದ್ದ ಸರ್ಫರಾಜ್ ಇದೀಗ 53ನೇ ಸ್ಥಾನಕ್ಕೆ ಬಂದಿದ್ದಾರೆ.

ಪ್ರಸ್ತುತ 509 ರೇಟಿಂಗ್ ಪಾಯಿಂಟ್ಸ್ ಹೊಂದಿರುವ ಸರ್ಫರಾಜ್ ಖಾನ್, ರಾಹುಲ್ಗಿಂತ 6 ಸ್ಥಾನ ಮುಂಬಡ್ತಿ ಪಡೆದಿದ್ದಾರೆ. ಇತ್ತ ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ರಾಹುಲ್ ಬರೋಬ್ಬರಿ 10 ಸ್ಥಾನಗಳನ್ನು ಕಳೆದುಕೊಂಡಿದ್ದು, ಇದೀಗ 59ನೇ ಸ್ಥಾನಕ್ಕೆ ಜಾರಿದ್ದಾರೆ.

ಉಳಿದಂತೆ ನೂತನ ಟೆಸ್ಟ್ ಶ್ರೇಯಾಂಕದಲ್ಲಿ ಇಂಗ್ಲೆಂಡ್‌ನ ಜೋ ರೂಟ್ ನಂಬರ್ ಒನ್ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಆದರೆ ಅವರ ರೇಟಿಂಗ್ ಪಾಯಿಂಟ್ಸ್ನಲ್ಲಿ ಕುಸಿತ ಕಂಡಿದ್ದು, ಈ ಹಿಂದೆ 932 ರೇಟಿಂಗ್ ಹೊಂದಿದ್ದ ರೂಟ್, ಇದೀಗ 917ರೇಟಿಂಗ್ ಪಾಯಿಂಟ್ಸ್ ಹೊಂದಿದ್ದಾರೆ. ಇದರ ಹೊರತಾಗಿಯೂ, ಅವರು ಇನ್ನೂ ನಂಬರ್ ಒನ್ ಸ್ಥಾನವನ್ನು ಆಕ್ರಮಿಸಿಕೊಂಡಿದ್ದಾರೆ.

ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ 821 ರೇಟಿಂಗ್‌ನೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇತ್ತ ಕಳೆದ ಬಾರಿ ಲಾಂಗ್ ಜಂಪ್ ಮಾಡಿದ್ದ ಹ್ಯಾರಿ ಬ್ರೂಕ್ ಒಂದು ಸ್ಥಾನ ಜಾರಿದ್ದು, ಇದೀಗ 803 ರೇಟಿಂಗ್‌ನೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.




