AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭರ್ಜರಿ ಶತಕ ಸಿಡಿಸಿ ಹಲವು ದಾಖಲೆ ಬರೆದ ರಿಷಭ್ ಪಂತ್

Rishabh Pant's Record-Breaking Century: ಲೀಡ್ಸ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ಅವರು ಅದ್ಭುತವಾದ 134 ರನ್‌ಗಳ ಇನ್ನಿಂಗ್ಸ್ ಆಡಿದರು. ಇದು ಅವರ ಟೆಸ್ಟ್ ವೃತ್ತಿಜೀವನದ ಏಳನೇ ಶತಕವಾಗಿದ್ದು, ಭಾರತೀಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ಗಳಲ್ಲಿ ಅತಿ ಹೆಚ್ಚು ಟೆಸ್ಟ್ ಶತಕಗಳ ದಾಖಲೆಯನ್ನೂ ಸೃಷ್ಟಿಸಿದೆ. ಅವರು ಇಂಗ್ಲೆಂಡ್‌ನಲ್ಲಿ ಹೆಚ್ಚು ಶತಕಗಳನ್ನು ಬಾರಿಸಿದ ವಿದೇಶಿ ವಿಕೆಟ್ ಕೀಪರ್ ಕೂಡ ಆಗಿದ್ದಾರೆ.

ಪೃಥ್ವಿಶಂಕರ
|

Updated on: Jun 21, 2025 | 8:26 PM

Share
ಭಾರತದ ಸ್ಫೋಟಕ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಲೀಡ್ಸ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ 134 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಈ ಇನ್ನಿಂಗ್ಸ್‌ನಲ್ಲಿ ಅವರು 12 ಬೌಂಡರಿಗಳು ಮತ್ತು 6 ಸಿಕ್ಸರ್‌ಗಳನ್ನು ಬಾರಿಸಿದರು. ಪಂತ್ ಅವರ ಈ ಶತಕದ ಇನ್ನಿಂಗ್ಸ್ ಭಾರತವನ್ನು ಬಲಿಷ್ಠ ಸ್ಥಿತಿಯಲ್ಲಿರಿಸಿದ್ದು ಮಾತ್ರವಲ್ಲದೆ, ಈ ಇನ್ನಿಂಗ್ಸ್ ಮೂಲಕ ಪಂತ್ ಕೂಡ ಹಲವು ದಾಖಲೆಗಳನ್ನು ನಿರ್ಮಿಸಿದರು.

1 / 5
ಈ ಇನ್ನಿಂಗ್ಸ್‌ನೊಂದಿಗೆ ಪಂತ್ ತಮ್ಮ ಟೆಸ್ಟ್ ವೃತ್ತಿಜೀವನದ ಏಳನೇ ಶತಕವನ್ನು ಪೂರೈಸಿದರು. ಇದರೊಂದಿಗೆ, ಅವರು ಟೆಸ್ಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಭಾರತೀಯ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು, ಈ ದಾಖಲೆ ಎಂಎಸ್ ಧೋನಿ ಹೆಸರಿನಲ್ಲಿ 6 ಶತಕಗಳೊಂದಿಗೆ ಇತ್ತು.

2 / 5
ರಿಷಭ್ ಪಂತ್ ಇಂಗ್ಲೆಂಡ್ ವಿರುದ್ಧ ನಾಲ್ಕನೇ ಬಾರಿಗೆ ಶತಕ ಬಾರಿಸಿದರು. ವಿಶೇಷವೆಂದರೆ ಅವರು ಈ ಶತಕಗಳಲ್ಲಿ 3 ಶತಕಗಳನ್ನು ಇಂಗ್ಲಿಷ್ ನೆಲದಲ್ಲಿ ಸಿಡಿಸಿದ್ದಾರೆ. ಅವರನ್ನು ಹೊರತುಪಡಿಸಿ, ಬೇರೆ ಯಾವುದೇ ವಿದೇಶಿ ವಿಕೆಟ್ ಕೀಪರ್ ಇಂಗ್ಲೆಂಡ್‌ನಲ್ಲಿ ಒಂದಕ್ಕಿಂತ ಹೆಚ್ಚು ಟೆಸ್ಟ್ ಶತಕಗಳನ್ನು ಬಾರಿಸಲು ಸಾಧ್ಯವಾಗಿಲ್ಲ.

3 / 5
ಇದು ಭಾರತದ ಹೊರಗೆ ರಿಷಭ್ ಪಂತ್ ಅವರ 5 ನೇ ಶತಕವಾಗಿದೆ. ಈ ಶತಕದೊಂದಿಗೆ, ಪಂತ್ ವಿದೇಶಿ ನೆಲದಲ್ಲಿ ಅತಿ ಹೆಚ್ಚು ಟೆಸ್ಟ್ ಶತಕಗಳನ್ನು ಸಿಡಿಸಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಜಂಟಿ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

4 / 5
ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯಲ್ಲೂ ರಿಷಭ್ ಪಂತ್ ಅದ್ಭುತ ಸಾಧನೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಭಾರತದ ಮೂರನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಟೆಸ್ಟ್‌ನಲ್ಲಿ 79 ಸಿಕ್ಸರ್‌ಗಳನ್ನು ಬಾರಿಸಿರುವ ಪಂತ್ ಈ ವಿಚಾರದಲ್ಲಿ 78 ಸಿಕ್ಸರ್‌ಗಳನ್ನು ಬಾರಿಸಿದ್ದ ಧೋನಿ ಅವರನ್ನು ಹಿಂದಿಕ್ಕಿದ್ದಾರೆ.

5 / 5