ನರ್ವಸ್ 90: ನೈಂಟಿಯಲ್ಲೇ ಪಂತ್ ಪಲ್ಟಿ..!

Rishabh Pant: ಬೆಂಗಳೂರಿನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 2ನೇ ಇನಿಂಗ್ಸ್​ನಲ್ಲಿ ರಿಷಭ್ ಪಂತ್ ಶತಕವಂಚಿತರಾಗಿದ್ದಾರೆ. ಈ ಇನಿಂಗ್ಸ್​ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಂತ್ 105 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 99 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಟೆಸ್ಟ್​ನಲ್ಲಿ 7ನೇ ಶತಕ ಬಾರಿಸುವ ಅವಕಾಶವನ್ನು ಕೈಚೆಲ್ಲಿಕೊಂಡರು.

|

Updated on: Oct 20, 2024 | 9:59 AM

ಟೆಸ್ಟ್ ಕ್ರಿಕೆಟ್​ನಲ್ಲಿ ರಿಷಭ್ ಪಂತ್ ಈವರೆಗೆ 6 ಶತಕಗಳನ್ನು ಬಾರಿಸಿದ್ದಾರೆ. ಆದರೆ ಅವರು ಶತಕದಂಚಿನಲ್ಲಿ ಎಡವಿರುವುದು 7 ಬಾರಿ. ಅಂದರೆ ಟೆಸ್ಟ್ ಇನಿಂಗ್ಸ್​ವೊಂದರಲ್ಲಿ 90 ಕ್ಕಿಂತ ಹೆಚ್ಚು ರನ್ ಕಲೆಹಾಕಿ ಒಟ್ಟು ಏಳು ಬಾರಿ ವಿಕೆಟ್ ಒಪ್ಪಿಸಿದ್ದಾರೆ. ಅದೇ 200 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ 90ರ ಅಸುಪಾಸಿನಲ್ಲಿ ಔಟ್ ಆಗಿರುವುದು ಕೇವಲ 10 ಬಾರಿ ಮಾತ್ರ.

1 / 5
ಆದರೆ 62 ಟೆಸ್ಟ್ ಇನಿಂಗ್ಸ್​ಗಳಲ್ಲಿ ರಿಷಭ್ ಪಂತ್ 7 ಬಾರಿ ಒಂದಂಕಿ ರನ್​ಗಳಿಂದ ಶತಕ ವಂಚಿತರಾಗಿದ್ದಾರೆ. 2018 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 92 ರನ್ ಬಾರಿಸಿ ಔಟಾಗುವ ಮೂಲಕ ಪಂತ್ ನರ್ವಸ್ ನೈಂಟಿಯನ್ನು ಆರಂಭಿಸಿದ್ದರು. ಇದಾದ ಬಳಿಕ 2018ರಲ್ಲೇ ವಿಂಡೀಸ್ ವಿರುದ್ಧ ಮತ್ತೊಮ್ಮೆ 92 ರನ್ ಬಾರಿಸಿ ಔಟಾಗಿದ್ದರು.

2 / 5
ಇನ್ನು 2021 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 97, ಇಂಗ್ಲೆಂಡ್ ವಿರುದ್ಧ 91 ರನ್ ಬಾರಿಸಿ ಔಟಾಗಿದ್ದರು. ಹಾಗೆಯೇ 2022 ರಲ್ಲಿ ಶ್ರೀಲಂಕಾ ವಿರುದ್ಧ 96 ಹಾಗೂ ಬಾಂಗ್ಲಾದೇಶ್ ವಿರುದ್ಧ 93 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು.

3 / 5
ಇದೀಗ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ 99 ರನ್​ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ಕೇವಲ 1 ರನ್​ನಿಂದ ಶತಕ ವಂಚಿತರಾಗಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ನೈಂಟಿ+ ರನ್​ಗಳಿಸಿ ಶತಕ ವಂಚಿತನಾದ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಅಷ್ಟೇ ಅಲ್ಲದೆ ಈ ಶತಕ ಕೈ ತಪ್ಪುವುದರೊಂದಿಗೆ ಟೀಮ್ ಇಂಡಿಯಾ ಪರ ಅತ್ಯಧಿಕ ಸೆಂಚುರಿ ಸಿಡಿಸಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ರಿಷಭ್ ಪಂತ್ ಕೈತಪ್ಪಿದೆ. ಈ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ಪಂತ್ 6 ಶತಕಗಳೊಂದಿಗೆ ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ರಿಷಭ್ ಪಂತ್ ನರ್ವಸ್ ನೈಂಟಿ ದಾಟಿ ಮೂರಂಕಿ ಮೊತ್ತಗಳಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

5 / 5
Follow us
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು

ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?

ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ

ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ

Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್

ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ

ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ

ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?

ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ