
ಭಾರತ ಮತ್ತು ನ್ಯೂಝಿಲೆಂಡ್ (IND vs NZ) ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ (ಜ.11) ಶುರುವಾಗಲಿದೆ. ರಾಜ್ಕೋಟ್ನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಗಾಯಗೊಂಡು ಇಡೀ ಸರಣಿಯಿಂದ ಹೊರಬಿದ್ದಿದ್ದಾರೆ.

ಹೌದು, ಭಾರತ ಏಕದಿನ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆಯಾಗಿದ್ದ ರಿಷಭ್ ಪಂತ್ ಗಾಯಗೊಂಡಿದ್ದಾರೆ. ವಡೋದರಾದಲ್ಲಿ ಶನಿವಾರ ನಡೆದ ಬ್ಯಾಟಿಂಗ್ ಅಭ್ಯಾಸದ ವೇಳೆ ಸೈಡ್ ಆರ್ಮ್ ತಜ್ಞರ ಎಸೆತದಿಂದ ಅವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಈ ಗಾಯದ ಕಾರಣ ರಿಷಭ್ ಪಂತ್ ಅರ್ಧದಲ್ಲೇ ಅಭ್ಯಾಸ ನಿಲ್ಲಿಸಿ ಮೈದಾನ ತೊರೆದಿದ್ದಾರೆ. ತೀವ್ರ ನೋವಿನಿಂದ ನರಳುತ್ತಿದ್ದ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ವೇಳೆ ಗಾಯವು ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಇದೇ ಕಾರಣದಿಂದಾಗಿ ವೈದ್ಯರು ರಿಷಭ್ ಪಂತ್ಗೆ ವಿಶ್ರಾಂತಿ ಸೂಚಿಸಿದ್ದಾರೆ.

ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿಯಲು ರಿಷಭ್ ಪಂತ್ ನಿರ್ಧರಿಸಿದ್ದಾರೆ. ಅಲ್ಲದೆ ಭಾನುವಾರ ಅವರು ಭಾರತ ತಂಡವನ್ನು ತೊರೆಯಲಿದ್ದಾರೆ ಎಂದು ಅವರ ಆಪ್ತ ಮೂಲಗಳಿಂದ ತಿಳಿದು ಬಂದಿದೆ. ಹಾಗಾಗಿ ನ್ಯೂಝಿಲೆಂಡ್ ವಿರುದ್ಧದ 3 ಪಂದ್ಯಗಳ ಸರಣಿಯಲ್ಲಿ ರಿಷಭ್ ಪಂತ್ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

ಭಾರತ ಏಕದಿನ ತಂಡ : ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ (ಅಲಭ್ಯ)