AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಶತಕ ಸಿಡಿಸಿದರೂ ಗೆಲುವು ಮಾತ್ರ ಮರೀಚಿಕೆ; ಪಂತ್ ಹೆಸರಿನಲ್ಲಿದೆ ಅಚ್ಚರಿಯ ದಾಖಲೆ

ಟೆಸ್ಟ್ ಕ್ರಿಕೆಟ್‌ನಲ್ಲಿ ರಿಷಭ್ ಪಂತ್ SENA ದೇಶಗಳಲ್ಲಿ (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್, ಆಸ್ಟ್ರೇಲಿಯಾ) ಅದ್ಭುತ ಶತಕಗಳನ್ನು ಸಿಡಿಸಿದ್ದಾರೆ. ವಿಕೆಟ್ ಕೀಪರ್‌ಗಳಲ್ಲಿ 9 ಶತಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಆದರೆ, ಪಂತ್ ಶತಕ ಬಾರಿಸಿದ ಯಾವುದೇ SENA ಪಂದ್ಯದಲ್ಲಿ ಭಾರತಕ್ಕೆ ಗೆಲುವು ದಕ್ಕಿಲ್ಲ ಎಂಬುದು ಅಚ್ಚರಿಯ ಸಂಗತಿ. SENA ದೇಶಗಳಲ್ಲಿ ಶತಕ ಗಳಿಸಿದ ಏಕೈಕ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಯೂ ಅವರದು.

ಪೃಥ್ವಿಶಂಕರ
|

Updated on: Nov 23, 2026 | 10:01 PM

Share
ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದರಲ್ಲೂ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ದೇಶಗಳಲ್ಲಿ ಪಂತ್ ಅವರ ಬ್ಯಾಟಿಂಗ್ ಪ್ರದರ್ಶನ ನಿಜಕ್ಕೂ ವಿಶೇಷವಾಗಿದೆ. ಈ ನಾಲ್ಕೂ ದೇಶಗಳಲ್ಲಿ ಒಟ್ಟು 7 ಟೆಸ್ಟ್ ಶತಕಗಳನ್ನು ಸಿಡಿಸಿರುವ ಪಂತ್ ಅವರ ಹೆಸರಿನಲ್ಲಿ ಅಚ್ಚರಿಯ ದಾಖಲೆಯೊಂದಿದೆ. ಅದೇನೆಂದರೆ, ಈ ದೇಶಗಳಲ್ಲಿ ಶತಕ ಬಾರಿಸಿದ ಯಾವುದೇ ಟೆಸ್ಟ್ ಪಂದ್ಯದಲ್ಲೂ ಭಾರತ ಗೆಲುವು ಸಾಧಿಸಿಲ್ಲ(PC-BCCI x).

1 / 8
ನ್ಯೂಜಿಲೆಂಡ್ ವಿರುದ್ಧ ವೆಲ್ಲಿಂಗ್ಟನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಅಜೇಯ 128 ರನ್ ಗಳಿಸುವ ಮೂಲಕ ಪಂತ್ ಮತ್ತೊಂದು ಮೈಲಿಗಲ್ಲು ತಲುಪಿದ್ದಾರೆ. ಆದರೆ, ಅವರ ಅಮೋಘ ಶತಕದ ಹೊರತಾಗಿಯೂ ಭಾರತಕ್ಕೆ ಪಂದ್ಯ ಗೆಲ್ಲಲು ಸಾಧ್ಯವಾಗಲಿಲ್ಲ. ಕೊನೆಯ ದಿನದಂದು ನ್ಯೂಜಿಲೆಂಡ್ ತಂಡ ದಿಟ್ಟ ಹೋರಾಟ ನಡೆಸಿ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಯಿತು(PC-BCCI x).

2 / 8
ರಿಷಭ್ ಪಂತ್ ಓವಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ 114 ರನ್ ಬಾರಿಸಿದರು. ಆ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿತು. ಬಳಿಕ ಸಿಡ್ನಿಯಲ್ಲಿ ಅಜೇಯ 159 ರನ್ ಗಳಿಸಿದರಾದರೂ ಆ ಪಂದ್ಯ ಡ್ರಾದಲ್ಲಿ ಕೊನೆಗೊಂಡಿತು. ಆ ನಂತರ, ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್ ಟೌನ್‌ನಲ್ಲಿ ಪಂತ್ ಶತಕ ಬಾರಿಸಿದರು. ಆ ಪಂದ್ಯವನ್ನು ಟೀಂ ಇಂಡಿಯಾ ಸೋತಿತು(PC-BCCI x).

3 / 8
ಬರ್ಮಿಂಗ್ಹ್ಯಾಮ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಪಂತ್ 146 ರನ್ ಬಾರಿಸಿದರೂ ತಂಡಕ್ಕೆ ಗೆಲುವು ದಕ್ಕಲಿಲ್ಲ. ಲೀಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ್ದರು. ಆದರೆ ಭಾರತ ಆ ಟೆಸ್ಟ್‌ನಲ್ಲಿಯೂ ಸೋತಿತು. ಇದೀಗ ವೆಲ್ಲಿಂಗ್ಟನ್ ಟೆಸ್ಟ್‌ನಲ್ಲಿ ಪಂತ್ 128 ರನ್ ಬಾರಿಸಿದರು. ಆದರೆ ನ್ಯೂಜಿಲೆಂಡ್ ಪಂದ್ಯವನ್ನು ಡ್ರಾ ಮಾಡಿಕೊಂಡಿತು(PC-BCCI x).

4 / 8
ಈ ಅಚ್ಚರಿಯ ದಾಖಲೆಯ ಹೊರತಾಗಿಯೂ ವಿದೇಶಿ ನೆಲದಲ್ಲಿ ಪಂತ್ ತೋರಿರುವ ಪ್ರದರ್ಶನ ಅವರ ಬ್ಯಾಟಿಂಗ್ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಕಠಿಣ ಪರಿಸ್ಥಿತಿಗಳಲ್ಲೂ ತಂಡಕ್ಕೆ ಆಸರೆಯಾಗುವ ಮೂಲಕ ಆಧುನಿಕ ಟೆಸ್ಟ್ ಕ್ರಿಕೆಟ್‌ನ ಅತ್ಯುತ್ತಮ ವಿಕೆಟ್ ಕೀಪರ್ ಬ್ಯಾಟರ್‌ಗಳಲ್ಲಿ ಒಬ್ಬರು ಎಂಬುದನ್ನು ಸಾಬೀತುಪಡಿಸಿದ್ದಾರೆ(PC-BCCI x).

5 / 8
ನ್ಯೂಜಿಲೆಂಡ್ ವಿರುದ್ಧದ ಅಜೇಯ ಶತಕ ಪಂತ್ ಅವರ ಟೆಸ್ಟ್ ವೃತ್ತಿಜೀವನದ 9ನೇ ಶತಕವಾಗಿದೆ. ಈ ಮೂಲಕ ಇಂಗ್ಲೆಂಡ್‌ನ ಲೆಸ್ ಏಮ್ಸ್ ಅವರನ್ನು ಹಿಂದಿಕ್ಕಿ ಟೆಸ್ಟ್ ಕ್ರಿಕೆಟ್‌ನಲ್ಲಿ ವಿಕೆಟ್ ಕೀಪರ್ ಆಗಿ ಅತಿ ಹೆಚ್ಚು ಶತಕ ಸಿಡಿಸಿದವರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ. ಆಸ್ಟ್ರೇಲಿಯಾದ ಆಡಂ ಗಿಲ್‌ಕ್ರಿಸ್ಟ್ 17 ಶತಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಜಿಂಬಾಬ್ವೆಯ ಆ್ಯಂಡಿ ಫ್ಲವರ್ 12 ಶತಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ(PC-BCCI x).

6 / 8
ಇನ್ನು SENA ದೇಶಗಳ ನಾಲ್ಕೂ ರಾಷ್ಟ್ರಗಳಲ್ಲಿ ಟೆಸ್ಟ್ ಶತಕ ಸಿಡಿಸಿದ ಆರನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೂ ಪಂತ್ ಪಾತ್ರರಾಗಿದ್ದಾರೆ. ಮೊಹಮ್ಮದ್ ಅಜರುದ್ದೀನ್, ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ ಮತ್ತು ಕೆ.ಎಲ್. ರಾಹುಲ್ ಈ ಸಾಧನೆ ಮಾಡಿದ ಇತರ ಭಾರತೀಯ ಆಟಗಾರರು. ಪಾಕಿಸ್ತಾನದ ಸಯೀದ್ ಅನ್ವರ್, ಯೂನಿಸ್ ಖಾನ್ ಹಾಗೂ ಶ್ರೀಲಂಕಾದ ಕುಮಾರ್ ಸಂಗಕ್ಕಾರ ಕೂಡ ಈ ವಿಶೇಷ ಸಾಧನೆ ಮಾಡಿದ ಆಟಗಾರರ ಪಟ್ಟಿಯಲ್ಲಿದ್ದಾರೆ(PC-BCCI x).

7 / 8
ಆದರೆ ಈ ಪಟ್ಟಿಯಲ್ಲಿರುವ ಎಲ್ಲ ಆಟಗಾರರಿಗಿಂತ ರಿಷಭ್ ಪಂತ್ ಅವರ ಸಾಧನೆ ವಿಭಿನ್ನವಾಗಿದೆ. SENA ದೇಶಗಳ ನಾಲ್ಕೂ ರಾಷ್ಟ್ರಗಳಲ್ಲಿ ವಿಕೆಟ್ ಕೀಪರ್ ಆಗಿಯೇ ಕಣಕ್ಕಿಳಿದು ಟೆಸ್ಟ್ ಶತಕ ಸಿಡಿಸಿದ ಏಕೈಕ ಬ್ಯಾಟರ್ ಎಂಬ ವಿಶೇಷ ದಾಖಲೆ ಅವರ ಹೆಸರಿನಲ್ಲಿದೆ(PC-BCCI x).

8 / 8
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ

ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ

ಎಲ್ಲದಕ್ಕೂ ಪರಿಹಾರ ಕೊಟ್ರೇ ಸರ್ಕಾರ ನಡೆಸುವುದ್ಹೇಗೆ? ಸಚಿವ ಶಿವಲಿಂಗೇಗೌಡ

ಕೊಪ್ಪಳದ ಗವಿಮಠದ ಕಾರ್ಯಕ್ಕೆ ನಿವೃತ್ತ ನ್ಯಾಯಮೂರ್ತಿ ದೀಕ್ಷಿತ್ ಮೆಚ್ಚುಗೆ

ಬಿಗ್ ಬಾಸ್ ಕನ್ನಡ 13: ಯಶಸ್ ಆಟಕ್ಕೆ ದೊಡ್ಡ ಕಂಟಕವಾದ ಗಗನ್ ಚಿನ್ನಪ್ಪ

ಸಾಮಾನ್ಯ ಹಾಲ್ಮಾರ್ಕ್ ಪರೀಕ್ಷೆಗೂ ಸಿಗದ ನಕಲಿ ಚಿನ್ನದ ಜಾಲ

ಬೆನ್ನುನೋವು: ಜೈಲಿನ ಹೊರಗಡೆ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ದರ್ಶನ್ ಅರ್ಜಿ

ಸಿದ್ದರಾಮಯ್ಯ ಚುನಾವಣೆಗೆ ಸ್ಪರ್ಧಿಸದಿರುವುದು ಕಾಂಗ್ರೆಸ್​ಗೆ ಮಾರಕ: ರಾಜಣ್ಣ

ಶಾಸಕ ಸ್ಥಾನಕ್ಕೆ ರಾಜೀನಾಮೆ: ನುಡಿದಂತೆ ನಡೆದ ನಯನಾ ಮೋಟಮ್ಮ!