AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂತ್ ಪವರ್: ನೂರು ಸಿಕ್ಸರ್​ಗಳೊಂದಿಗೆ ಮೂರು ವಿಶ್ವ ದಾಖಲೆ ಧೂಳೀಪಟ

Rishabh Pant World Record: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ಒಟ್ಟು 3 ಸಿಕ್ಸರ್​ಗಳನ್ನು ಸಿಡಿಸಿದ್ದಾರೆ. ಈ ಮೂರು ಸಿಕ್ಸ್​ಗಳೊಂದಿಗೆ ಪಂತ್ ಟೆಸ್ಟ್ ಕ್ರಿಕೆಟ್​ನಲ್ಲಿ ನೂರು ಸಿಕ್ಸರ್​ಗಳ ದಾಖಲೆ ಬರೆದಿದ್ದಾರೆ. ಅದು ಕೂಡ ಬೆನ್ ಸ್ಟೋಕ್ಸ್ ಹಾಗೂ ಆ್ಯಡಂ ಗಿಲ್​ಕ್ರಿಸ್ಟ್ ಅವರ ವಿಶ್ವ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: Getty Images)

ಝಾಹಿರ್ ಯೂಸುಫ್
|

Updated on: Aug 19, 2026 | 8:43 AM

Share
ಭಾರತದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಶ್ರೀಲಂಕಾ ವಿರುದ್ಧದ ಗಾಲೆ ಟೆಸ್ಟ್ ಪಂದ್ಯದಲ್ಲಿ ಸಿಕ್ಸರ್‌ಗಳ ಶತಕ ಪೂರೈಸುವ ಮೂಲಕ, ಟೆಸ್ಟ್ ಕ್ರಿಕೆಟ್‌ನಲ್ಲಿ 100 ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಂತ್ ಪಾತ್ರರಾಗಿದ್ದಾರೆ. (PC: Getty Images)

1 / 5
ಈ ಸಾಧನೆಯೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಪಂದ್ಯಗಳು, ಇನ್ನಿಂಗ್ಸ್‌ಗಳು ಹಾಗೂ ಎದುರಿಸಿದ ಎಸೆತಗಳ ಲೆಕ್ಕಾಚಾರದಲ್ಲಿ ಅತ್ಯಂತ ವೇಗವಾಗಿ ಈ ಮೈಲಿಗಲ್ಲು ತಲುಪಿದ ವಿಶ್ವದ ಏಕೈಕ ಬ್ಯಾಟರ್​ ಎಂಬ ವಿಶ್ವದಾಖಲೆಯನ್ನು ರಿಷಭ್ ಪಂತ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. (PC: Getty Images)

2 / 5
ಅತಿ ಕಡಿಮೆ ಪಂದ್ಯಗಳು: ರಿಷಭ್ ಪಂತ್ ಅವರು ಕೇವಲ 51 ಟೆಸ್ಟ್ ಪಂದ್ಯಗಳಲ್ಲಿ 100 ಸಿಕ್ಸರ್‌ಗಳ ಮೈಲಿಗಲ್ಲು ತಲುಪಿದ್ದಾರೆ. ಟೆಸ್ಟ್ ಇತಿಹಾಸದಲ್ಲೇ ಇಷ್ಟು ಕಡಿಮೆ ಪಂದ್ಯಗಳಲ್ಲಿ ಯಾರೂ ಈ ಸಾಧನೆ ಮಾಡಿಲ್ಲ. ಇದಕ್ಕೂ ಮುನ್ನ ಈ ದಾಖಲೆ ಬೆನ್ ಸ್ಟೋಕ್ಸ್ ಹೆಸರಿನಲ್ಲಿತ್ತು. ಸ್ಟೋಕ್ಸ್​ 82 ಪಂದ್ಯಗಳಲ್ಲಿ 100 ಸಿಕ್ಸರ್ ಪೂರೈಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ರಿಷಭ್ ಪಂತ್ ಕೇವಲ 51 ಪಂದ್ಯಗಳ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. (PC: Getty Images)

3 / 5
ಅತಿ ಕಡಿಮೆ ಇನ್ನಿಂಗ್ಸ್‌ಗಳು: ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 100 ಸಿಕ್ಸರ್​ ಪೂರೈಸಿದ ವಿಶ್ವ ದಾಖಲೆ ಕೂಡ ರಿಷಭ್ ಪಂತ್ ಪಾಲಾಗಿದೆ. ಕೇವಲ 89 ಇನ್ನಿಂಗ್ಸ್‌ಗಳ ಮೂಲಕ 100 ಸಿಕ್ಸರ್ ಸಿಡಿಸಿ ಆಸ್ಟ್ರೇಲಿಯಾದ ಆ್ಯಡಮ್ ಗಿಲ್‌ಕ್ರಿಸ್ಟ್ (130 ಇನಿಂಗ್ಸ್​) ಹೆಸರಿನಲ್ಲಿದ್ದ ವಿಶ್ವ ದಾಖಲೆ ಮುರಿದಿದ್ದಾರೆ. (PC: Getty Images)

4 / 5
ಅತಿ ಕಡಿಮೆ ಎಸೆತಗಳು: ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಂತ ಕಡಿಮೆ ಎಸೆತಗಳನ್ನು ಎದುರಿಸಿ 100 ಸಿಕ್ಸರ್ ಸಿಡಿಸಿದ ವಿಶ್ವ ದಾಖಲೆಯನ್ನು ಕೂಡ ರಿಷಭ್ ಪಂತ್ ತಮ್ಮದಾಗಿಸಿಕೊಂಡಿದ್ದಾರೆ. ಕೇವಲ 4,918 ಎಸೆತಗಳಲ್ಲಿ ಈ ಮೈಲಿಗಲ್ಲು ತಲುಪುವ ಮೂಲಕ ರಿಷಭ್ ಪಂತ್,  ಗಿಲ್​ಕ್ರಿಸ್ಟ್​ ( 6,578 ಎಸೆತಗಳು) ಹೆಸರಿನಲ್ಲಿದ್ದ ವಿಶ್ವ ದಾಖಲೆ ಅಳಿಸಿ ಹಾಕಿದ್ದಾರೆ. (PC: Getty Images)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ

ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ

ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ

ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು

ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು

ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ

ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ

ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ

ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ