
ಭಾರತದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಶ್ರೀಲಂಕಾ ವಿರುದ್ಧದ ಗಾಲೆ ಟೆಸ್ಟ್ ಪಂದ್ಯದಲ್ಲಿ ಸಿಕ್ಸರ್‌ಗಳ ಶತಕ ಪೂರೈಸುವ ಮೂಲಕ, ಟೆಸ್ಟ್ ಕ್ರಿಕೆಟ್‌ನಲ್ಲಿ 100 ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಂತ್ ಪಾತ್ರರಾಗಿದ್ದಾರೆ. (PC: Getty Images)

ಈ ಸಾಧನೆಯೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಪಂದ್ಯಗಳು, ಇನ್ನಿಂಗ್ಸ್‌ಗಳು ಹಾಗೂ ಎದುರಿಸಿದ ಎಸೆತಗಳ ಲೆಕ್ಕಾಚಾರದಲ್ಲಿ ಅತ್ಯಂತ ವೇಗವಾಗಿ ಈ ಮೈಲಿಗಲ್ಲು ತಲುಪಿದ ವಿಶ್ವದ ಏಕೈಕ ಬ್ಯಾಟರ್ ಎಂಬ ವಿಶ್ವದಾಖಲೆಯನ್ನು ರಿಷಭ್ ಪಂತ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. (PC: Getty Images)

ಅತಿ ಕಡಿಮೆ ಪಂದ್ಯಗಳು: ರಿಷಭ್ ಪಂತ್ ಅವರು ಕೇವಲ 51 ಟೆಸ್ಟ್ ಪಂದ್ಯಗಳಲ್ಲಿ 100 ಸಿಕ್ಸರ್‌ಗಳ ಮೈಲಿಗಲ್ಲು ತಲುಪಿದ್ದಾರೆ. ಟೆಸ್ಟ್ ಇತಿಹಾಸದಲ್ಲೇ ಇಷ್ಟು ಕಡಿಮೆ ಪಂದ್ಯಗಳಲ್ಲಿ ಯಾರೂ ಈ ಸಾಧನೆ ಮಾಡಿಲ್ಲ. ಇದಕ್ಕೂ ಮುನ್ನ ಈ ದಾಖಲೆ ಬೆನ್ ಸ್ಟೋಕ್ಸ್ ಹೆಸರಿನಲ್ಲಿತ್ತು. ಸ್ಟೋಕ್ಸ್ 82 ಪಂದ್ಯಗಳಲ್ಲಿ 100 ಸಿಕ್ಸರ್ ಪೂರೈಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ರಿಷಭ್ ಪಂತ್ ಕೇವಲ 51 ಪಂದ್ಯಗಳ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. (PC: Getty Images)

ಅತಿ ಕಡಿಮೆ ಇನ್ನಿಂಗ್ಸ್‌ಗಳು: ಟೆಸ್ಟ್ ಕ್ರಿಕೆಟ್‌ನಲ್ಲಿ ಅತೀ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 100 ಸಿಕ್ಸರ್ ಪೂರೈಸಿದ ವಿಶ್ವ ದಾಖಲೆ ಕೂಡ ರಿಷಭ್ ಪಂತ್ ಪಾಲಾಗಿದೆ. ಕೇವಲ 89 ಇನ್ನಿಂಗ್ಸ್‌ಗಳ ಮೂಲಕ 100 ಸಿಕ್ಸರ್ ಸಿಡಿಸಿ ಆಸ್ಟ್ರೇಲಿಯಾದ ಆ್ಯಡಮ್ ಗಿಲ್‌ಕ್ರಿಸ್ಟ್ (130 ಇನಿಂಗ್ಸ್) ಹೆಸರಿನಲ್ಲಿದ್ದ ವಿಶ್ವ ದಾಖಲೆ ಮುರಿದಿದ್ದಾರೆ. (PC: Getty Images)

ಅತಿ ಕಡಿಮೆ ಎಸೆತಗಳು: ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಂತ ಕಡಿಮೆ ಎಸೆತಗಳನ್ನು ಎದುರಿಸಿ 100 ಸಿಕ್ಸರ್ ಸಿಡಿಸಿದ ವಿಶ್ವ ದಾಖಲೆಯನ್ನು ಕೂಡ ರಿಷಭ್ ಪಂತ್ ತಮ್ಮದಾಗಿಸಿಕೊಂಡಿದ್ದಾರೆ. ಕೇವಲ 4,918 ಎಸೆತಗಳಲ್ಲಿ ಈ ಮೈಲಿಗಲ್ಲು ತಲುಪುವ ಮೂಲಕ ರಿಷಭ್ ಪಂತ್, ಗಿಲ್‌ಕ್ರಿಸ್ಟ್ ( 6,578 ಎಸೆತಗಳು) ಹೆಸರಿನಲ್ಲಿದ್ದ ವಿಶ್ವ ದಾಖಲೆ ಅಳಿಸಿ ಹಾಕಿದ್ದಾರೆ. (PC: Getty Images)