
ಸೌತ್ ಆಫ್ರಿಕಾ ಎ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ಎ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರುಗಳ ಈ ತಂಡದ ನಾಯಕನಾಗಿ ರಿಷಭ್ ಪಂತ್ (Rishabh Pant) ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿ ವೇಳೆ ಗಾಯಗೊಂಡಿದ್ದ ಪಂತ್ ಆ ಬಳಿಕ ಯಾವುದೇ ಪಂದ್ಯವಾಡಿರಲಿಲ್ಲ.

ಅಲ್ಲದೆ ಗಾಯದ ಕಾರಣ ಏಷ್ಯಾಕಪ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸರಣಿಗಳಿಂದ ಹೊರಗುಳಿದಿದ್ದರು. ಇದೀಗ ಸಂಪೂರ್ಣ ಫಿಟ್ನೆಸ್ ಸಾಧಿಸಿರುವ ಪಂತ್ ಮತ್ತೆ ಮೈದಾನಕ್ಕಿಳಿಯಲು ಸಜ್ಜಾಗಿದ್ದಾರೆ. ಅದರಂತೆ ಅಕ್ಟೋಬರ್ 30 ರಿಂದ ಶುರುವಾಗಲಿರುವ ಸೌತ್ ಆಫ್ರಿಕಾ ಎ ವಿರುದ್ಧದ ಪಂದ್ಯದಲ್ಲಿ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ.

ರಿಷಭ್ ಪಂತ್ ಅಲ್ಲದೆ, ಭಾರತ ಎ ತಂಡದಲ್ಲಿ ಸಾಯಿ ಸುದರ್ಶನ್, ರಜತ್ ಪಾಟಿದಾರ್, ದೇವದತ್ ಪಡಿಕ್ಕಲ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ರುತುರಾಜ್ ಗಾಯಕ್ವಾಡ್ ಸೇರಿದಂತೆ ಟೀಮ್ ಇಂಡಿಯಾದ ಅನೇಕ ಆಟಗಾರರು ಕಾಣಿಸಿಕೊಂಡಿದ್ದಾರೆ. ಹಾಗೆಯೇ ದ್ವಿತೀಯ ಪಂದ್ಯದ ವೇಳೆ ಕೆಎಲ್ ರಾಹುಲ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಭಾರತ ಎ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಅದರಂತೆ ಸೌತ್ ಆಫ್ರಿಕಾ ಎ ವಿರುದ್ಧದ ಸರಣಿಗೆ ಭಾರತ ಎ ತಂಡಗಳು ಈ ಕೆಳಗಿನಂತಿದೆ...

ಭಾರತ ಎ ತಂಡ (ಮೊದಲ ಪಂದ್ಯಕ್ಕೆ): ರಿಷಭ್ ಪಂತ್ (ನಾಯಕ), ಆಯುಷ್ ಮ್ಹಾತ್ರೆ, ಎನ್ ಜಗದೀಸನ್ (ವಿಕೆಟ್ ಕೀಪರ್), ಸಾಯಿ ಸುದರ್ಶನ್ (ಉಪನಾಯಕ), ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಹರ್ಷ್ ದುಬೆ, ತನುಷ್ ಕೋಟ್ಯಾನ್, ಮಾನವ್ ಸುತಾರ್, ಅನ್ಶುಲ್ ಕಂಬೋಜ್, ಯಶ್ ಠಾಕೂರ್, ಆಯುಷ್ ಬದೋನಿ, ಸರಾಂಶ್ ಜೈನ್.

ಭಾರತ ಎ ತಂಡ (ಎರಡನೇ ಪಂದ್ಯಕ್ಕೆ): ರಿಷಭ್ ಪಂತ್ (ನಾಯಕ), ಕೆಎಲ್ ರಾಹುಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಸಾಯಿ ಸುದರ್ಶನ್ (ಉಪನಾಯಕ), ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಹರ್ಷ್ ದುಬೆ, ತನುಷ್ ಕೋಟ್ಯಾನ್, ಮಾನವ್ ಸುತಾರ್, ಖಲೀಲ್ ಅಹ್ಮದ್, ಗುರ್ನೂರ್ ಬ್ರಾರ್, ಅಭಿಮನ್ಯು ಈಶ್ವರನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.
Published On - 1:53 pm, Tue, 21 October 25