ಟೀಮ್ ಇಂಡಿಯಾಗೆ ಬಿಗ್ ಶಾಕ್: ಟೆಸ್ಟ್ ಸರಣಿಯಿಂದ ಪ್ರಮುಖ ಆಟಗಾರ ಔಟ್
India vs West Indies Test: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಪ್ರಾರಂಭವಾಗಲಿದೆ. ಭಾರತದಲ್ಲಿ ನಡೆಯಲಿರುವ ಎರಡು ಪಂದ್ಯಗಳ ಈ ಸರಣಿಗಾಗಿ ಶೀಘ್ರದಲ್ಲೇ ಟೀಮ್ ಇಂಡಿಯಾವನ್ನು ಘೋಷಿಸಲಾಗುತ್ತದೆ. ಆದರೆ ಈ ಸರಣಿಯಲ್ಲಿ ಭಾರತ ತಂಡದ ಸ್ಟಾರ್ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.
ಏಷ್ಯಾಕಪ್ (Asia Cup 2025) ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ (Team India) ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಆಡಲಿದೆ. ಅಕ್ಟೋಬರ್ 2 ರಿಂದ ಶುರುವಾಗಲಿರುವ ಈ ಸರಣಿಗೆ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಅಲಭ್ಯರಾಗಲಿದ್ದಾರೆ.
1 / 5
ಹೌದು, ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಹೊರಗುಳಿಯಲಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಪಂತ್ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಮತ್ತಷ್ಟು ಸಮಯ ತೆಗೆದುಕೊಳ್ಳಲಿದ್ದಾರೆ. ಹೀಗಾಗಿ ವಿಂಡೀಸ್ ವಿರುದ್ಧ ಸರಣಿಗೆ ಅಲಭ್ಯರಾಗಲಿದ್ದಾರೆ.
2 / 5
ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲಿ ರಿಷಭ್ ಪಂತ್ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದಿದ್ದರು. ಈ ಸರಣಿಯ 4ನೇ ಪಂದ್ಯದ ವೇಳೆ ಪಂತ್ ಅವರ ಕಾಲಿಗೆ ಗಂಭೀರ ಗಾಯವಾಗಿತ್ತು. ಇದೀಗ ಈ ಗಾಯಕ್ಕೆ ರಿಷಭ್ ಚಿಕಿತ್ಸೆ ಪಡೆಯುತ್ತಿದ್ದಾರೆ.
3 / 5
ಇದೇ ಗಾಯದ ಕಾರಣ ರಿಷಭ್ ಪಂತ್ ಏಷ್ಯಾಕಪ್ ಟೂರ್ನಿಯಿಂದ ಹೊರಗುಳಿದಿದ್ದರು. ಇದಾಗ್ಯೂ ಅವರು ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಇದೀಗ ಈ ಸರಣಿಯಿಂದ ಹೊರಗುಳಿದಿರುವ ಪಂತ್ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂಲಕ ಮತ್ತೆ ಮೈದಾನಕ್ಕಿಳಿಯುವ ನಿರೀಕ್ಷೆ ಇದೆ.
4 / 5
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಶುರುವಾಗಲಿದೆ. ಅಕ್ಟೋಬರ್ 2 ರಿಂದ ಆರಂಭವಾಗಲಿರುವ ಮೊದಲ ಪಂದ್ಯಕ್ಕೆ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಅಕ್ಟೋಬರ್ 10 ರಿಂದ ಶುರುವಾಗಲಿರುವ ದ್ವಿತೀಯ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ.