ರಸ್ತೆ ಅಪಘಾತದಲ್ಲಿ ಪಂತ್ ಅವರ ಕಾಲಿಗೆ ಗಂಭೀರ ಗಾಯವಾಗಿತ್ತು. ಆ ಬಳಿಕ ನಡೆದ ಶಸ್ತ್ರ ಚಿಕಿತ್ಸೆಯ ಬಳಿಕ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಾಗ್ಯೂ ಅವರು ವಿಕೆಟ್ ಕೀಪಿಂಗ್ನಲ್ಲಿ ಚುರುಕುತನ ಸಾಧಿಸಲು ಮತ್ತಷ್ಟು ಸಮಯ ತೆಗೆದುಕೊಳ್ಳಲಿದೆ. ಹೀಗಾಗಿ ಪಂತ್ ತಂಡಕ್ಕೆ ಮರಳಿದರೂ ಕೀಪಿಂಗ್ ಗ್ಲೌಸ್ ತೊಡುವುದು ಅನುಮಾನ ಎಂದು ವರದಿಯಾಗಿದೆ.