AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಇತಿಹಾಸದಲ್ಲಿ ಈ ಸಾಧನೆ ಮಾಡಿದ ಏಕೈಕ ಆಟಗಾರ ರಿಷಭ್ ಪಂತ್

Rishabh Pant's Record-Breaking Sixes: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ರಿಷಭ್ ಪಂತ್ ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಗಮನ ಸೆಳೆದಿದೆ. ಮೂರು ಪಂದ್ಯಗಳಲ್ಲಿ ಎರಡು ಶತಕ ಮತ್ತು ಎರಡು ಅರ್ಧಶತಕಗಳನ್ನು ಬಾರಿಸಿದ ಪಂತ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಪ್ರತಿ ಆವೃತ್ತಿಯಲ್ಲಿ 15 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯನ್ನು ಸೃಷ್ಟಿಸಿದ್ದಾರೆ.

ಪೃಥ್ವಿಶಂಕರ
|

Updated on: Jul 17, 2025 | 7:21 PM

Share
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಈಗ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಐದು ಪಂದ್ಯಗಳಲ್ಲಿ ಮೂರು ಪಂದ್ಯಗಳು ಮುಗಿದಿದ್ದು, ಇಂಗ್ಲೆಂಡ್ 2-1 ಮುನ್ನಡೆಯಲ್ಲಿದೆ. ಲಾರ್ಡ್ಸ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯವನ್ನು ಭಾರತ ತಂಡ 22 ರನ್‌ಗಳಿಂದ ಸೋತಿರುವುದರಿಂದ ನಾಲ್ಕನೇ ಪಂದ್ಯವು ಗಿಲ್​ ಪಡೆಗೆ ಮಾಡು ಇಲ್ಲವೇ ಮಡಿ ಪರಿಸ್ಥಿತಿಯಾಗಿದೆ.

1 / 5
ಆದಾಗ್ಯೂ ಈ ಸರಣಿಯಲ್ಲಿ ತಂಡದ ಬ್ಯಾಟಿಂಗ್ ವಿಭಾಗ ಗಮನಾರ್ಹ ಪ್ರದರ್ಶನ ನೀಡಿದೆ. ಅದರಲ್ಲೂ ರಿಷಭ್ ಪಂತ್ ಇಲ್ಲಿಯವರೆಗೆ ನಡೆದ ಮೂರು ಪಂದ್ಯಗಳಲ್ಲಿ ರನ್​ಗಳ ಮಳೆ ಹರಿಸಿದ್ದು, ಇಲ್ಲಿಯವರೆಗೆ ಆಡಿದ ಮೂರು ಪಂದ್ಯಗಳಲ್ಲಿ 2 ಶತಕ ಮತ್ತು 2 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಇದರೊಂದಿಗೆ, ಅವರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ದೊಡ್ಡ ದಾಖಲೆಯನ್ನು ಸಹ ಸೃಷ್ಟಿಸಿದ್ದಾರೆ.

2 / 5
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಇದುವರೆಗೆ ಮೂರು ಆವೃತ್ತಿಗಳು ಮುಗಿದಿದ್ದು, ನಾಲ್ಕನೇ ಆವೃತ್ತಿ ಶುರುವಾಗಿದೆ. ಇದರಲ್ಲಿ ರಿಷಭ್ ಪಂತ್ ಪ್ರತಿಯೊಂದು ಆವೃತ್ತಿಯಲ್ಲೂ 15 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಪ್ರತಿ ಆವೃತ್ತಿಯಲ್ಲಿ 15ಕ್ಕೂ ಹೆಚ್ಚು ಸಿಕ್ಸರ್ ಬಾರಿಸಿದ ಮೊದಲ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

3 / 5
ಮೊದಲ ಸೀಸನ್‌ನಲ್ಲಿ 22 ಸಿಕ್ಸರ್‌ಗಳನ್ನು ಹೊಡಿದಿದ್ದ ರಿಷಭ್ ಪಂತ್, ಎರಡನೇ ಸೀಸನ್‌ನಲ್ಲಿ 16 ಸಿಕ್ಸರ್‌ಗಳು ಮತ್ತು ಮೂರನೇ ಸೀಸನ್‌ನಲ್ಲಿ 16 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಈಗ ನಾಲ್ಕನೇ ಸೀಸನ್ ಆರಂಭವಾಗಿದ್ದು, ಈ ಸೀಸನ್‌ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಅವರು ಈಗಾಗಲೇ 15 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

4 / 5
ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ದೊಡ್ಡ ದಾಖಲೆ ನಿರ್ಮಿಸುವ ಅವಕಾಶ ಹೊಂದಿದ್ದಾರೆ. ಆದರೆ ಬೆರಳಿನ ಗಾಯದಿಂದಾಗಿ ರಿಷಭ್ ಪಂತ್ ಆಡುವುದು ಅನುಮಾನವಾಗಿದೆ. ಈ ಪಂದ್ಯದಲ್ಲಿ ಅವರು ಆಡಿದರೆ, ಭಾರತ ಪರ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎನಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ವೀರೇಂದ್ರ ಸೆಹ್ವಾಗ್ 90 ಸಿಕ್ಸರ್ ಬಾರಿಸಿದ್ದರೆ, ಪಂತ್ ಅವರ ಹೆಸರಿನಲ್ಲಿ 88 ಸಿಕ್ಸರ್‌ಗಳಿವೆ.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಧನ್ವೀರ್ ವಿರುದ್ಧ ನಿರ್ಬಂಧಜಾಜ್ಞೆ: ದರ್ಶನ್ ಪರ ವಕೀಲರು ಹೇಳಿದ್ದಿಷ್ಟು

ರಷ್ಯಾದ ತೈಲ ಸಂಸ್ಕರಣಾಗಾದ ಮೇಲೆ ಉಕ್ರೇನ್​ನ ಡ್ರೋನ್ ದಾಳಿ

ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಯಾರು

ದೇವೇಗೌಡರ ಭೇಟಿಯಾದ ಯಡಿಯೂರಪ್ಪ: ಕುತೂಹಲ ಮೂಡಿಸಿದ ಮಾಜಿ CM ನಡೆ

ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ?

‘ಪ್ರೇಮದ ಊರಲಿ ಪಾರ್ಟ್ 2’ ಬರುತ್ತ? ನೇರವಾಗಿ ಉತ್ತರ ನೀಡಿದ ನಿರ್ದೇಶಕ ಮನೋಜ್

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಶೋಕ್​​ ಸವಾಲು

‘ಕೆಲಸ ಮಾಡಲ್ಲ ಅಂದ್ರೆ ಮಾಡಲ್ಲ’: ಸೌಂದರ್ಯಾ ಜೊತೆ ಗಗನ್ ಜಗಳ

ಬಿಗ್ ಬಾಸ್ ಮನೆಯಲ್ಲಿ ಸೋನಿಕಾ, ತಾಂಡವ್, ಗಗನ್ ಮದುವೆ ಮಾತುಕತೆ

ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರ: ಪೊಲೀಸರ ಜೊತೆಗೆ ಫೀಲ್ಡಿಗಿಳಿದ ಸಚಿವ