AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Riyan Parag: ಪರಾಗ್ ಪವರ್: ತೂಫಾನ್ ಸೆಂಚುರಿ ಸಿಡಿಸಿದ ರಿಯಾನ್

Riyan Parag: 87 ಎಸೆತಗಳನ್ನು ಎದುರಿಸಿದ ರಿಯಾನ್ ಪರಾಗ್ 12 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 155 ರನ್ ಬಾರಿಸಿ ಔಟಾದರು. ಪರಾಗ್ ಅವರ ಈ ಭರ್ಜರಿ ಶತಕದ ನೆರವಿನಿಂದ ಅಸ್ಸಾಂ ತಂಡ ದ್ವಿತೀಯ ಇನಿಂಗ್ಸ್​ನಲ್ಲಿ 254 ರನ್ ಕಲೆಹಾಕಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Jan 08, 2024 | 12:23 PM

Share
ರಾಯ್​ಪುರದಲ್ಲಿ ನಡೆಯುತ್ತಿರುವ ರಣಜಿ ಟೂರ್ನಿ ಗ್ರೂಪ್-ಸಿ ಪಂದ್ಯದಲ್ಲಿ ಅಸ್ಸಾಂ ತಂಡದ ಯುವ ಬ್ಯಾಟ್ಸ್​ಮನ್ ರಿಯಾನ್ ಪರಾಗ್ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಛತ್ತೀಸ್​ಗಢ್​ ವಿರುದ್ಧದ ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಪರಾಗ್ ಅಕ್ಷರಶಃ ಅಬ್ಬರಿಸಿದರು.

1 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಛತ್ತೀಸ್​ಗಢ್ ತಂಡವು 327 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್​ ಆಡಿದ ಅಸ್ಸಾಂ ಕೇವಲ 159 ರನ್​ಗಳಿಗೆ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ಫಾಲೋಆನ್​ ಹೇರುವ ಮೂಲಕ ಅಸ್ಸಾಂ ತಂಡವನ್ನು ದ್ವಿತೀಯ ಇನಿಂಗ್ಸ್​ಗೆ ಆಹ್ವಾನಿಸಿತು.

2 / 6
ಅದರಂತೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಅಸ್ಸಾಂ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 78 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದಾಗ ಕ್ರೀಸ್​ಗೆ ಆಗಮಿಸಿದ ರಿಯಾನ್ ಪರಾಗ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

3 / 6
ಆರಂಭದಿಂದಲೇ ಛತ್ತೀಸ್​ಗಢ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ರಿಯಾನ್ ಪರಾಗ್ ಕೇವಲ 56 ಎಸೆತಗಳಲ್ಲಿ ಶತಕ ಪೂರೈಸಿದರು. ಒಂದೆಡೆ ವಿಕೆಟ್ ಬೀಳುತ್ತಿದ್ದರೂ ಮತ್ತೊಂದೆಡೆ ಅಮೋಘ ಬ್ಯಾಟಿಂಗ್ ಮುಂದುವರೆಸಿದ ಪರಾಗ್ ತಂಡದ ಮೊತ್ತವನ್ನು 200ರ ಗಡಿದಾಟಿಸಿದರು.

4 / 6
ಅಂತಿಮವಾಗಿ 87 ಎಸೆತಗಳನ್ನು ಎದುರಿಸಿದ ರಿಯಾನ್ ಪರಾಗ್ 12 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 155 ರನ್ ಬಾರಿಸಿ ಔಟಾದರು. ಪರಾಗ್ ಅವರ ಈ ಭರ್ಜರಿ ಶತಕದ ನೆರವಿನಿಂದ ಅಸ್ಸಾಂ ತಂಡ ದ್ವಿತೀಯ ಇನಿಂಗ್ಸ್​ನಲ್ಲಿ 254 ರನ್ ಕಲೆಹಾಕಿತು.

5 / 6
ಅಂದಹಾಗೆ ರಣಜಿ ಟೂರ್ನಿಯಲ್ಲಿ ಅತೀ ವೇಗದ ಶತಕ ಬಾರಿಸಿದ ದಾಖಲೆ ರಿಷಭ್ ಪಂತ್ ಹೆಸರಿನಲ್ಲಿದೆ. 2016 ರಲ್ಲಿ ಛತ್ತೀಸ್​ಗಢ್ ವಿರುದ್ಧ ಪಂತ್ ಕೇವಲ 48 ಎಸೆತಗಳಲ್ಲಿ ಶತಕ ಪೂರೈಸಿ ದಾಖಲೆ ಬರೆದಿದ್ದಾರೆ.

6 / 6
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ