AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಸಂಭವ’…. ಯುಜ್ವೇಂದ್ರ ಚಹಲ್​ಗೆ ಸಿಕ್ಕಳು ಹೊಸ ಗರ್ಲ್​​ಫ್ರೆಂಡ್

IPL 2025 PBKS vs KKR: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 31ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಮುಲ್ಲನ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 111 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 95 ರನ್​ಗಳಿಗೆ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on: Apr 16, 2025 | 10:31 AM

Share
ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ (Yuzvendra Chahal) ಧನಶ್ರೀ ವರ್ಮಾ ಅವರಿಂದ ವಿಚ್ಛೇದನ ಪಡೆದು ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಈ ಹೊಸ ಇನಿಂಗ್ಸ್​ನ ಬೆನ್ನಲ್ಲೇ ಚಹಲ್ ಅವರೊಂದಿಗೆ ಆರ್​ಜೆ ಮಹ್ವಾಶ್ (Rj Mahvash) ಹೆಸರು ತಳುಕು ಹಾಕಿಕೊಂಡಿತ್ತು. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ವೇಳೆ ಇಬ್ಬರು ಜೊತೆಯಾಗಿ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು.

1 / 6
ಇದೀಗ ಐಪಿಎಲ್​ ವೇಳೆಯೂ ಆರ್​ಜೆ ಮಹ್ವಾಶ್ ಕಾಣಿಸಿಕೊಳ್ಳುತ್ತಿದ್ದಾರೆ. ಅದು ಸಹ ಯುಜ್ವೇಂದ್ರ ಚಹಲ್ ಪ್ರತಿನಿಧಿಸುವ ಪಂಜಾಬ್ ಕಿಂಗ್ಸ್ ತಂಡದ ಪಂದ್ಯದ ವೇಳೆ. ಚಂಡೀಗಢ್​ನ ಮುಲ್ಲನ್​ಪುರ್ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಮಹ್ವಾಶ್, ಯುಜ್ವೇಂದ್ರ ಚಹಲ್ ಹಾಗೂ ಪಂಜಾಬ್ ಕಿಂಗ್ಸ್ ತಂಡವನ್ನು ಹುರಿದುಂಬಿಸುತ್ತಿರುವುದು ಕಂಡು ಬಂದಿತ್ತು.

2 / 6
ಸ್ಟೇಡಿಯಂನಲ್ಲಿ ಗ್ಯಾಲರಿಯಲ್ಲಿ ಹುರಿದುಂಬಿಸುತ್ತಾ ಕುಣಿದು ಕುಪ್ಪಳಿಸುತ್ತಿದ್ದ ಮಹ್ವಾಶ್ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದರೊಂದಿಗೆ ಯುಜ್ವೇಂದ್ರ ಚಹಲ್ ಡೇಟಿಂಗ್​ನಲ್ಲಿರುವುದು ಖಚಿತವಾಗಿದೆ. ಏಕೆಂದರೆ ಮಹ್ವಾಶ್ ಕಾಣಿಸಿಕೊಂಡಿದ್ದು, ವಿಐಪಿ ಗ್ಯಾಲರಿಯಲ್ಲಿ. ಗೆಳತಿಗೆ ಈ ಟಿಕೆಟ್​ಗಳನ್ನು ಚಹಲ್ ಕೊಡಿಸಿದ್ದಾರೆ ಎಂದು ತಿಳಿದು ಬಂದಿದೆ.

3 / 6
ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ವೇಳೆಯೂ ಆರ್​ಜೆ ಮಹ್ವಾಶ್ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಈ ಐತಿಹಾಸಿಕ ಜಯದ ಬೆನ್ನಲ್ಲೇ ಆರ್​ಜೆ ಮಹ್ವಾಶ್ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಅದು ಸಹ ಯುಜ್ವೇಂದ್ರ ಚಹಲ್ ಜೊತೆಗಿನ ಸೆಲ್ಫಿಯೊಂದಿಗೆ. ಈ ಫೋಟೋಗೆ ಎಂತಹ ಅದ್ಭುತ ಪ್ರತಿಭೆ. ಇದಕ್ಕೇನೆ ಐಪಿಎಲ್​ನ ಅತ್ಯಧಿಕ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಅಸಂಭವ... ಎಂದು ಬರೆದುಕೊಂಡಿದ್ದಾರೆ. 

4 / 6
ಅಂದರೆ ಕೆಕೆಆರ್ ವಿರುದ್ಧದ ಪಂದ್ಯದ ಗೆಲುವಿನ ರೂವಾರಿ ಯುಜ್ವೇಂದ್ರ ಚಹಲ್. 4 ಓವರ್​ಗಳನ್ನು ಎಸೆದಿದ್ದ ಚಹಲ್ ಮೊದಲ ಮೂರು ಓವರ್​ಗಳಲ್ಲಿ ಕೇವಲ 12 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಈ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಸೋಲಿಗೆ ಕಾರಣಕರ್ತರಾಗಿದ್ದರು. ಇದನ್ನೇ ಅಸಂಭವ ಎನ್ನುವ ಮೂಲಕ ಆರ್​ಜೆ ಮಹ್ವಾಶ್, ಯುಜ್ವೇಂದ್ರ ಚಹಲ್ ಅವರನ್ನು ಹಾಡಿ ಹೊಗಳಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿ ಪಂಜಾಬ್ ಕಿಂಗ್ಸ್ ತಂಡವು 15.3 ಓವರ್​ಗಳಲ್ಲಿ 111 ರನ್ ಬಾರಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 15.1 ಓವರ್​ಗಳಲ್ಲಿ ಕೇವಲ 95 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ 16 ರನ್​ಗಳ ರೋಚಕ ಜಯ ಸಾಧಿಸಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ

ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು

34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್

9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!

ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ

ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ

ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ

ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ

ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ

ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ